ಪೂರ್ವ ಲಡಾಖ್ನಲ್ಲಿ ಚೀನಾದೊಂದಿಗಿನ ಸಂಘರ್ಷದ ಕುರಿತು ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅಪ್ರಕಟಿತ ಆತ್ಮಚರಿತ್ರೆಯ ಸಾಲುಗಳನ್ನು ರಾಹುಲ್ ಗಾಂಧಿ ಸದನದಲ್ಲಿ ಉಲ್ಲೇಖಿಸಲು ಪ್ರಯತ್ನಿಸಿದಾಗ ಸಂಸತ್ತಿನಲ್ಲಿ ಗದ್ದಲ ಉಂಟಾಗಿತ್ತು. ಈ ವೇಳೆ ನಿಯಮ ಉಲ್ಲಂಘನೆ ಆರೋಪದಡಿ 8 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿರುವುದು, ಬೆಂಕಿಗೆ ತುಪ್ಪ ಸುರಿದಂತಾಗಿದೆ, ಈಗ ಇಡೀ ಇಂಡಿಯಾ ಒಕ್ಕೂಟ ಸ್ಪೀಕರ್ ವಿರುದ್ಧ ಒಂದಾಗಿದೆ.