ಗಸ್ತು ತಿರುಗುವ ಪೊಲೀಸರು ವಿಚಾರಿಸಿದಾಗ ರಸಗೊಬ್ಬರಗಳನ್ನು ಸಾಗಿಸುತ್ತಿರುವುದಾಗಿ ಆರೋಪಿಗಳು ಹೇಳಿಕೊಂಡಿದ್ದು, ಆದರೆ, ತಪಾಸಣೆ ನಡೆಸಿದಾಗ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ. ಈ ಸರಕನ್ನು ಸಾಗಿಸಲು ಬಳಸಿದ ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ನಿರ್ದಿಷ್ಟ ಗುಪ್ತಚರ ಮಾಹಿತಿಗಳನ್ನು ಸ್ವೀಕರಿಸಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಮತ್ತು ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ(ಏಜೆನ್ಸೀಸ್).