ಈ ಪ್ರಸ್ತಾವನೆಯಲ್ಲಿ ಸುನೇತ್ರಾ ಪವಾರ್ರನ್ನು ಉಪಮುಖ್ಯಮಂತ್ರಿಯಾಗಿಯೂ ಸಂಪುಟಕ್ಕೆ ತೆಗೆದುಕೊಳ್ಳಬೇಕೆಂಬ ಚರ್ಚೆ ನಡೆದಿದ್ದು, ಭವಿಷ್ಯದ ಕ್ರಮಗಳ ಕುರಿತು ಚರ್ಚಿಸಲು ಎನ್ಸಿಪಿ ನಾಯಕರು ದೇವೇಂದ್ರ ಫಡ್ನವೀಸ್ರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಈ ಪಕ್ಷವನ್ನು ಕಾರ್ಯಾಧ್ಯಕ್ಷ ಪ್ರಫುಲ್ ಪಟೇಲ್ ಮುನ್ನಡೆಸಬಹುದು ಎನ್ನಲಾಗಿದ್ದು, ಶರದ್ ಪವಾರ್ ಬಣದೊಂದಿಗೆ ವಿಲೀನದ ಕುರಿತಾಗಿಯೂ ಚರ್ಚೆಗಳು ನಡೆಯುವ ಸಾಧ್ಯತೆಯಿದೆ.