ಅಕ್ರಮ ನುಸುಳುವಿಕೆಯ ಬಗ್ಗೆ ಖಡಕ್ ಎಚ್ಚರಿಕೆ ನೀಡಿದ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದಿಂದ ಪ್ರತಿಯೊಬ್ಬ ನುಸುಳುಕೋರರನ್ನು ಹೊರಹಾಕಲು ಬಿಜೆಪಿ ಬದ್ಧವಾಗಿದ್ದು, ಅಕ್ರಮವಾಗಿ ನೆಲೆಸಲು ನೆರವು ಮತ್ತು ರಾಜಕೀಯ ಆಶ್ರಯ ನೀಡಿದವರ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು, ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಸಹ ಇಂತಹ ಅಕ್ರಮ ನುಸುಳುವಿಕೆಯನ್ನು ವಿರೋಧಿಸುತ್ತವೆ ಎಂಬುದನ್ನು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.