17.8 C
Bengaluru
Wednesday, January 22, 2020

ಅಂಗನವಾಡಿ ಕಾರ್ಯಕರ್ತೆಯರ ಪಾದಯಾತ್ರೆಗೆ ಪೊಲೀಸರ ತಡೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಚಿಂತಾಮಣಿ: ಕೇಂದ್ರ ಸರ್ಕಾರ ಶಿಶು ಅಭಿವೃದ್ಧಿ ಯೋಜನೆಯನ್ನು ದುರ್ಬಲಗೊಳಿಸುತ್ತಿದೆ ಎಂದು ಆರೋಪಿಸಿ ಮಂಗಳವಾರ ತುಮಕೂರಿನಿಂದ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ತಾಲೂಕಿನಿಂದ ತೆರಳುತ್ತಿದ್ದ ಅಂಗನವಾಡಿ ಕಾರ್ಯಕರ್ತರನ್ನು ಪೊಲೀಸರು ನಗರದಲ್ಲಿ ತಡೆದಿದ್ದು, ಈ ವೇಳೆ ಮಾತಿನ ಚಕಮಕಿ ನಡೆಯಿತು.

ಸಿಐಟಿಯು ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪಾದಯಾತ್ರೆಯಲ್ಲಿ ಭಾಗವಹಿಸಲು ತಾಲೂಕಿನ 400ಕ್ಕೂ ಹೆಚ್ಚು ಕಾಯಕರ್ತೆಯರು ತಾಲೂಕು ಅಧ್ಯಕ್ಷೆ ಸೌಭಾಗ್ಯಮ್ಮ, ಕಾರ್ಯದರ್ಶಿ ಲಕ್ಷ್ಮೀನರಸಮ್ಮ ನೇತೃತ್ವದಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ಧಾಣಕ್ಕೆ ಬರುತ್ತಿದ್ದಂತೆ ಪೊಲೀಸರು ತಡೆದರು. ಪಾದಯಾತ್ರೆಗೆ ಪೊಲೀಸರು ಅನುಮತಿ ನೀಡದ ಕಾರಣ ಯಾರೂ ತೆರಳಬಾರದು ಎಂದು ಹೇಳಿದ ಪೊಲೀಸರು, ವಾಪಸ್ ಹೋಗುವಂತೆ ಸೂಚಿಸಿದರು.

ಈ ವೇಳೆ ಮಾತನ ಚಕಿಮುಕಿ ನಡೆಯಿತು. ನಂತರ ಕಾರ್ಯಕರ್ತೆಯರು ಖಾಸಗಿ ಬಸ್‌ಗಳಲ್ಲಿ ತೆರಳಲು ಯತ್ನಿಸಿದರು, ಪೊಲೀಸರು ಖಾಸಗಿ ಬಸ್ ಮಾಲೀಕರಿಗೆ ಕರೆ ಮಾಡಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಇದರಿಂದ ಬಸ್ ಮಾಲೀಕರು ಕಳುಹಿಸಿದ್ದ ಬಸ್‌ಗಳನ್ನು ವಾಪಸ್ ಕರೆಸಿಕೊಂಡರು. ಕೊನೆಗೆ ವೀರಾಂಜನೇಯ ಸ್ವಾಮಿ ದೇವಾಲಯ ಬಳಿಯಿಂದ ಪಾದಯಾತ್ರೆಯಲ್ಲೇ ತೆರಳಲು ಮುಂದಾದರು.

ಆದರೆ ಡಿವೈಎಸ್‌ಪಿ ಶ್ರೀನಿವಾಸ್, ಗ್ರಾಮಾಂತರ ಠಾಣೆ ಸರ್ಕಲ್ ಇನ್‌ಸೆಕ್ಟರ್ ಶ್ರೀನಿವಾಸಪ್ಪ, ನಗರಠಾಣೆ ಪ್ರಭಾರಿ ಇನ್‌ಸ್ಪೆಕ್ಟರ್ ಶಿವಪ್ಪ ನೇತೃತ್ವದಲ್ಲಿ ಅಲ್ಲಿಗೂ ಬಂದ ಪೊಲೀಸರು ಕಾರ್ಯಕರ್ತೆಯರು ಮುಂದಕ್ಕೆ ಹೋಗದಂತೆ ದಿಗ್ಬಂಧನ ಹಾಕಿದರು. ರಸ್ತೆಯಲ್ಲಿ ಕುಳಿತು ಪ್ರತಿಭಟನೆ: ಪೊಲೀಸರು ರಸ್ತೆಯಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಕಾರ್ಯಕರ್ತೆಯರನ್ನು ತಡೆದಾಗ ಅಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿದರು. ಕಡೆಗೆ ಬ್ಯಾರಿಕೇಡ್ ಹಾಕದ ಕಡೆಯಿಂದ ಪಾದಯಾತ್ರೆಗೆ ತೆರಳಲು ಮುಂದಾದರು. ಒಂದು ವೇಳೆ ಪಾದಯಾತ್ರೆ ಮುಂದುವರಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ಎಚ್ಚರಿಕೆ ನೀಡಿದರು, ಕೊನೆಗೆ ಕಾರ್ಯಕರ್ತೆಯರು ವಾಪಸ್ ತೆರಳಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...