16 C
Bangalore
Thursday, December 12, 2019

ಅಂಗನವಾಡಿ ಕೇಂದ್ರ ಸ್ಥಳಾಂತರ ಮಾಡಿ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಮುಂಡರಗಿ: ಸ್ಥಳೀಯ ಪುರಸಭೆ 9ನೇ ವಾರ್ಡ್​ನ ಡಾ. ಬಿ.ಆರ್. ಅಂಬೇಡ್ಕರ್ ನಗರದ ಅಂಗನವಾಡಿ ಕೇಂದ್ರದ ಕಟ್ಟಡ ಸಂಪೂರ್ಣ ದುಸ್ಥಿಯಲ್ಲಿದ್ದು, ಅದನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ನಗರದಲ್ಲಿರುವ ಮಾದಿಗ ಸಮುದಾಯದ ಕಿರಿದಾದ ಭವನದಲ್ಲಿ ಅಂಗನವಾಡಿ ನಡೆಸಲಾಗುತ್ತಿದೆ. ಈ ಕಟ್ಟಡ ನಲವತ್ತು ವರ್ಷ ಹಳೆಯದಾಗಿದ್ದು, ದುರಸ್ತಿಯಲ್ಲಿದೆ. ಹದಿನೈದು ವರ್ಷಗಳಿಂದ ಇಂತಹ ಸ್ಥಿತಿಯಲ್ಲೇ ಅಂಗನವಾಡಿ ನಡೆಸಲಾಗುತ್ತಿದೆ.

ಈ ಅಂಗನವಾಡಿ ಕೇಂದ್ರದಲ್ಲಿ 25 ಮಕ್ಕಳಿದ್ದಾರೆ. ಒಂದೇ ಕೊಠಡಿಯಲ್ಲಿ ಮಕ್ಕಳಿಗೆ ಅಭ್ಯಾಸ, ಅಡುಗೆ ತಯಾರಿಕೆ, ಸಾಮಗ್ರಿ ಸಂಗ್ರಹ ಎಲ್ಲವೂ ನಡೆಯುತ್ತದೆ. ಕಿಟಕಿಗಳು ಕಿತ್ತುಹೋಗಿವೆ, ಮಳೆ ಬಂದಾಗ ಸೋರುತ್ತಿದೆ. ಮಕ್ಕಳಿಗೆ ಕಿರಿಕಿರಿಯಾಗುತ್ತಿದೆ. ಇಲಿ, ಹೆಗ್ಗಣಗಳ ಕಾಟವೂ ಇದೆ.

ಹಿಂದುಳಿದ ಜನಾಂಗವಿರುವ ವಾರ್ಡ್​ನಲ್ಲಿ ಚಿಕ್ಕಮಕ್ಕಳ ಅಭ್ಯಾಸಕ್ಕೆ ಸರಿಯಾದ ವ್ಯವಸ್ಥೆ ಕಲ್ಪಿಸಿಲ್ಲ. ಸುಸಜ್ಜಿತ ಕಟ್ಟಡವಿಲ್ಲದ ಕಾರಣ ಹಳೆಯ ಕಟ್ಟಡದಲ್ಲಿ ಅಂಗನವಾಡಿ ಕೇಂದ್ರ ನಡೆಸಲಾಗುತ್ತಿದೆ. ಕೂಡಲೇ ಅಧಿಕಾರಿಗಳು ಸುಸ್ಥಿತಿಯಲ್ಲಿರುವ ಕಟ್ಟಡಕ್ಕೆ ಸ್ಥಳಾಂತರಿಸಬೇಕು ಎಂದು 9ನೇ ವಾರ್ಡ್​ನ ಪುರಸಭೆ ಸದಸ್ಯ ಪವನ ಮೇಟಿ, ವಾರ್ಡ್ ನಿವಾಸಿಗಳಾದ ಮೈಲಪ್ಪ ದೊಡ್ಡಮನಿ, ಕನಕಪ್ಪ ದೊಡ್ಡಮನಿ, ಕಿರಣ ಹಾಲಿನವರ, ಗಾಳೆವ್ವ ದೊಡ್ಡಮನಿ, ಹೊನ್ನಪ್ಪ ಬಚೆನಳ್ಳಿ, ಮಂಜುನಾಥ ಅಳವಂಡಿ ಒತ್ತಾಯಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ಸುಸ್ಥಿತಿಯಲ್ಲಿರುವಂತಹ ಉತ್ತಮ ಕಟ್ಟಡವನ್ನು ಗುರುತಿಸಿ ಅಂಗನವಾಡಿಯನ್ನು ಸ್ಥಳಾಂತರಿಸುತ್ತೇವೆ.
-ದಸ್ತಿಗೀರಸಾಬ್ ಮುಲ್ಲಾ, ಸಿಡಿಪಿಒ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...