More

    ಅಂಜಲಿ ಹತ್ಯೆ ಖಂಡಿಸಿ ಪ್ರತಿಭಟನೆ

    ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ವಿದ್ಯಾರ್ಥಿನಿ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಬೆಳಗಾವಿಯಲ್ಲಿ ಕೋಳಿ ಬೆಸ್ತ ಸಮುದಾಯದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.

    ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ನೂರಾರು ಜನರು ವಾಹನ ಸಂಚಾರ ತಡೆದು, ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

    ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ವಿಫಲವಾಗಿದೆ. ಹುಬ್ಬಳ್ಳಿಯಲ್ಲಿ ಇದು ಎರಡನೇ ಘಟನೆ. ಕಾಲೇಜು ವಿದ್ಯಾಭ್ಯಾಸದ ಜತೆ ಮನೆ ನಡೆಸಿಕೊಂಡು ಹೋಗುತ್ತಿದ್ದ ಅಂಜಲಿಯನ್ನು ದುಷ್ಟ ಯುವಕ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

    ಇಷ್ಟೆಲ್ಲ ಆಗುತ್ತಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ. ಕೊಲೆಗಾರನಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಅದೇ ರೀತಿ ಅಂಜಲಿ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಇನ್ಮುಂದೆ ಈ ರೀತಿಯ ಘಟನೆಗಳು ಸಂಭವಿಸದಂತೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳೆಯರಿಗೆ, ಯುವತಿಯರಿಗೆ ಹೆಚ್ಚಿನ ಸಂರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

    ವಿಧಾನ ಪರಿಷತ್ ಸದಸ್ಯ ಸಾಬಣ್ಣ ತಳವಾರ, ಮಾಜಿ ಉಪಮೇಯರ್ ಮಧುಶ್ರೀ ಪೂಜಾರಿ, ದಿಲೀಪ ಕುರಂದವಾಡೆ, ಮುಖಂಡರಾದ ಮಲ್ಲಪ್ಪ ಮುರಗೋಡ, ಸಿದಗೌಡ ಸುಣಗಾರ, ಧರೆಪ್ಪ ಪೂಜಾರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts