17.8 C
Bengaluru
Wednesday, January 22, 2020

ಅಂಡರ್​ಪಾಸ್ ಯೋಜನೆ ಇದ್ದರೂ ರಸ್ತೆ!

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಹುಬ್ಬಳ್ಳಿ: ‘ಯಾರದೋ ದುಡ್ಡು ಎಲ್ಲಮ್ಮನ ಜಾತ್ರೆ’ ಎಂಬಂತಿದೆ ಇಲ್ಲಿನ ಪಿಂಟೊ ಮಾರ್ಗದಲ್ಲಿ ನಿರ್ವಿುಸುತ್ತಿರುವ ಸಿಸಿ ರಸ್ತೆ.  ದೇಸಾಯಿ ವೃತ್ತದಲ್ಲಿ ಅಂಡರ್​ಪಾಸ್ ನಿರ್ವಿುಸುವ ಯೋಜನೆ ಸಿದ್ಧಗೊಳ್ಳುತ್ತಿದೆ. ಇದಕ್ಕಾಗಿ ಈಗಾಗಲೇ 3 ಡಿ ನೀಲಿ ನಕಾಶೆಯನ್ನೂ ರಚಿಸಲಾಗಿದ್ದು, ಪ್ರಸ್ತಾವನೆ ಸಿದ್ಧಗೊಳಿಸಲಾಗುತ್ತಿದೆ.  ಒಂದೆಡೆ ದೇಸಾಯಿ ವೃತ್ತದಲ್ಲಿ ಅಂಡರ್​ಪಾಸ್ ನಿರ್ವಣಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿರುವ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗ, ಮತ್ತೊಂದೆಡೆ ದೇಸಾಯಿ ವೃತ್ತಕ್ಕೆ ಸೇರುವಂತೆ ಸಿಸಿ ರಸ್ತೆ ನಿರ್ವಣಕ್ಕೆ ಮುಂದಾಗಿರುವುದು ಜಿಜ್ಞಾಸೆಗೆ ಕಾರಣವಾಗಿದೆ.

ದೇಸಾಯಿ ವೃತ್ತದಲ್ಲಿ ಸರಳ ವಾಹನ ಸಂಚಾರಕ್ಕೆ ಅಂಡರ್​ಪಾಸ್ ಅವಶ್ಯಕತೆಯ ಕುರಿತು ‘ವಿಜಯವಾಣಿ’ ಈ ಹಿಂದೆಯೇ ವಿಶೇಷ ವರದಿ ಪ್ರಕಟಿಸಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಗಮನ ಸೆಳೆದಿತ್ತು. ಅಂಡರ್​ಪಾಸ್ ನಿರ್ಮಾಣ ಸಾಧ್ಯತೆ ಹಿನ್ನೆಲೆಯಲ್ಲಿ ಪಿಂಟೋ ರಸ್ತೆಯಿಂದ ದೇಸಾಯಿ ವೃತ್ತ ಸೇರುವ ಸುಮಾರು 100 ಮೀಟರ್ ಉದ್ದದವರೆಗೆ ಸಿಸಿ ರಸ್ತೆ ನಿರ್ಮಾಣ ತಡೆಹಿಡಿಯಲಾಗಿತ್ತು. ಆದರೆ ಇದೀಗ ಸಿಸಿ ರಸ್ತೆ ನಿರ್ಮಾಣ ಮತ್ತೆ ಆರಂಭಿಸಲಾಗಿದೆ.  ಅಂದರೆ, ಅಂಡರ್​ಪಾಸ್ ನಿರ್ಮಾಣ ಕಾಮಗಾರಿಗಾಗಿ ಈಗ ನಿರ್ವಿುಸುತ್ತಿರುವ ಕಾಂಕ್ರೀಟ್ ರಸ್ತೆಯನ್ನು ಒಡೆದು ತೆಗೆಯಬೇಕಾಗುತ್ತದೆ. ಇದರಿಂದ ಲಕ್ಷಾಂತರ ರೂ. ವ್ಯರ್ಥವಾಗಲಿದೆ. ಸಂಬಂಧಿಸಿದ ಅಧಿಕಾರಿಗಳು ಮುಂದಾಲೋಚನೆಯಿಂದ ಸಾರ್ವಜನಿಕರ ತೆರಿಗೆ ಹಣವನ್ನು ಉಳಿತಾಯ ಮಾಡುವ ಬದಲು ಈ ರೀತಿ ಬಹಿರಂಗವಾಗಿಯೇ ವ್ಯರ್ಥ ಮಾಡುತ್ತಿರುವುದೇಕೆ ಎಂಬ ಪ್ರಶ್ನೆ ಮೂಡಿದೆ.

3 ಡಿ ನೀಲಿ ನಕ್ಷೆ ಸಿದ್ಧ

ದೇಸಾಯಿ ವೃತ್ತದಲ್ಲಿ ಅಂಡರ್​ಪಾಸ್ ನಿರ್ವಣಕ್ಕೆ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗ 3 ಡಿ ನೀಲನಕ್ಷೆ ಸಿದ್ಧಪಡಿಸಿದ್ದು, ಸೋಮವಾರದ ವೇಳೆಗೆ ಅದಕ್ಕೆ ಅಂತಿಮ ರೂಪ ದೊರೆಯಲಿದೆ ಎಂದು ಗೊತ್ತಾಗಿದೆ.  ದೇಸಾಯಿ ವೃತ್ತದಲ್ಲಿ ದೇಶಪಾಂಡೆ ನಗರದಿಂದ ಪಿಂಟೋ ರಸ್ತೆಗೆ ಹೋಗಲು 3.5 ಮೀ. ಎತ್ತರ ಹಾಗೂ 9 ಮೀ. ಅಗಲದ ಅಂಡರ್​ಪಾಸ್​ಅನ್ನು ಮೂರು ಆಯಾಮದ ನೀಲನಕ್ಷೆಯಲ್ಲಿ ಚಿತ್ರಿಸಲಾಗಿದೆ. ಬಸ್ ಹಾಗೂ ಕಡಿಮೆ ಎತ್ತರದ ಈ ಅಂಡರ್​ಪಾಸ್​ನಲ್ಲಿ ಸಾಗಬಹುದಾಗಿದೆ.  ಈ ರಸ್ತೆಯಲ್ಲಿ ಆಗುತ್ತಿರುವ ವಾಹನ ದಟ್ಟಣೆ ತಪ್ಪಿಸಲು ಸಿಗ್ನಲ್ ಫ್ರೀ ರಸ್ತೆಯನ್ನಾಗಿ ಮಾರ್ಪರ್ಸಲು ತೀರ್ವನಿಸಲಾಗಿದೆ. ದೇಸಾಯಿ ವೃತ್ತದ ಅಕ್ಕಪಕ್ಕದ ಯಾವುದೇ ಕಟ್ಟಡಗಳಿಗೆ ಧಕ್ಕೆಯಾಗದಂತೆ ಅಪ್ರೋಚ್ ರೋಡ್ ಸಹ ನಿರ್ವಿುಸಲು ಯೋಜನೆ ರೂಪಿಸಲಾಗಿದೆ.  ಸದ್ಯದಲ್ಲೇ 3 ಡಿ ನೀಲನಕ್ಷೆಯ ಕುರಿತು ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರೊಂದಿಗೆ ರ್ಚಚಿಸಲಿರುವ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಅಧಿಕಾರಿಗಳು, ನಂತರ ಅಂತಿಮ ರೂಪರೇಷೆಯ ಕುರಿತು ತೀರ್ವನಿಸಲಿದ್ದಾರೆ.  ದೇಸಾಯಿ ವೃತ್ತದಲ್ಲಿರುವ ರೈಲ್ವೆ ಮೇಲ್ಸೇತುವೆಯೂ ಅಭಿವೃದ್ಧಿಗೊಳ್ಳುತ್ತಿದ್ದು, ಮೇಲ್ಸೆತುವೆ ಗಮನದಲ್ಲಿಟ್ಟುಕೊಂಡು 3ಡಿ ನೀಲನಕ್ಷೆ ಸಿದ್ಧಪಡಿಸಲಾಗಿದೆ. ಕಳೆದ ವಾರವಷ್ಟೇ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರು ಲೋಕೋಪಯೋಗಿ ಇಲಾಖೆ ರಾಷ್ಟ್ರೀಯ ಹೆದ್ದಾರಿ ಉಪ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಂಡರ್​ಪಾಸ್ ನಿರ್ವಣದ ಕುರಿತು ರ್ಚಚಿಸಿ, 3 ಡಿ ನೀಲನಕ್ಷೆಯನ್ನು ಒಂದು ವಾರದೊಳಗೆ ಸಿದ್ಧಪಡಿಸುವಂತೆ ಸೂಚಿಸಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...