20.8 C
Bangalore
Sunday, December 8, 2019

ಅಂಧಕಾರ ಕಳೆಯುವುದೇ ಶಿವರಾತ್ರಿ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಲಕ್ಷೆ್ಮೕಶ್ವರ: ಮನುಷ್ಯನ ಬದುಕಿನ ಬಂದರು ಗಟ್ಟಿಗೊಳ್ಳಲು ಧರ್ಮದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಬದುಕಿನ ಅಜ್ಞಾನದ ಅಂಧಕಾರ ಕಳೆದು ಸುಜ್ಞಾನದ ಬೆಳಕು ಹೊಮ್ಮುವಲ್ಲಿ ಶಿವರಾತ್ರಿ-ಶುಭರಾತ್ರಿಯಾಗಿದೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ಮಹಾಶಿವರಾತ್ರಿ ಅಂಗವಾಗಿ ಬುಧವಾರ ಜರುಗಿದ ಜಾತ್ರಾ ಮಹೋತ್ಸವದ ಧರ್ಮಸಭೆಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಆಧ್ಯಾತ್ಮದ ಕಲ್ಪನೆ, ಗುರು ಸಂದೇಶ, ಶಿವ ಚಿಂತನೆಗಾಗಿ ಶಿವರಾತ್ರಿಯ ಪವಿತ್ರ ಕಾಲದಲ್ಲಿ ಮಾಡುವ ಆರಾಧನೆ, ವ್ರತಾಚರಣೆಯಿಂದ ಮನುಷ್ಯನ ಕಷ್ಟಗಳು ಕಳೆದು ಸುಖ, ಶಾಂತಿ ನೆಮ್ಮದಿಯ ಬದುಕು ಪ್ರಾಪ್ತವಾಗುತ್ತದೆ. ಈ ನಿಟ್ಟಿನಲ್ಲಿ ಜಾತ್ರಾ ಮಹೋತ್ಸವಗಳು ಪೂರಕ ವಾತಾವರಣ ಕಲ್ಪಿಸಲು ಸಹಕಾರಿಯಾಗಿವೆ ಎಂದರು.
ಪರಸ್ಪರ ಸಾಮರಸ್ಯ, ಸೌಹಾರ್ದತೆ, ಸಂಸ್ಕೃತಿಯೊಂದಿಗೆ ವಿಶ್ವ ಮಾನವ ಸಂದೇಶ ಸಾರಿದ ಲಿಂ. ಗಂಗಾಧರ ಜಗದ್ಗುರುಗಳ ಲೋಕ ಉದ್ಧಾರದ ಚಿಂತನೆಗಳು ಸರ್ವಜನಾಂಗದ ದಾರಿದೀಪ. ಮುಕ್ತಿಮಂದಿರ ಕ್ಷೇತ್ರದಲ್ಲಿ ಲಿಂ. ಶ್ರೀಗಳ ತ್ರಿಕೋಟಿಲಿಂಗ ಸ್ಥಾಪನೆಯ ಸಂಕಲ್ಪ ಸಿದ್ಧಿಗೆ ನೀಡಿದ ಸಹಕಾರ ಶ್ರೀಗಳ ಮೇಲಿನ ನಂಬಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಜಿಪಂ ಅಧ್ಯಕ್ಷ ಎಸ್.ಪಿ. ಬಳಿಗಾರ ಕಾರ್ಯಕ್ರಮ ಉದ್ಘಾಟಿಸಿದರು. ನೊಣವಿನಕೆರೆ ಕಾಡಸಿದ್ಧೇಶ್ವರಮಠದ ಕರಿಬಸವ ವೃಷಭ ರಾಜೇಂದ್ರ ಸ್ವಾಮೀಜಿ ಅವರು ತಪೋವಾಣಿ ಪುಸ್ತಕ ಬಿಡುಗಡೆಗೊಳಿಸಿದರು. ಗದಗನ ಪಂಡಿತ ರಾಜಗುರು ಗುರುಸ್ವಾಮಿ ಕಲಕೇರಿ ಅವರಿಂದ ಸಂಗೀತ ಕಾರ್ಯಕ್ರಮ ಜರುಗಿತು.
ಗುರುಪಾದಯ್ಯ ಸಾಲಿಮಠ, ಶಂಭಯ್ಯ ಹಿರೇಮಠ ನಿರ್ವಹಿಸಿದರು. ಅಡರಕಟ್ಟಿ ರಂಭಾಪುರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಮುಕ್ತಿಮಂದಿರ ಕ್ಷೇತ್ರದಲ್ಲಿ ಬೆಳಗ್ಗೆಯಿಂದ ವಿಶೇಷ ಪೂಜೆ, ಧರ್ಮರಥ, ಅಡ್ಡಪಲ್ಲಕ್ಕಿ, ಪ್ರಸಾದ, ಕಡುಬಿನ ಕಾಳಗ ಜರುಗಿತು.

ಗುರುವಿನ ಕೃಪೆ ಅಗತ್ಯ
ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿ ಮಾತನಾಡಿ, ಗುರು ಕಾರುಣ್ಯವೊಂದಿದ್ದರೆ ಏನೆಲ್ಲವನ್ನೂ ಸಾಧಿಸಲು ಸಾಧ್ಯವಿದೆ. ಮುಕ್ತಿಮಂದಿರ ಕ್ಷೇತ್ರದಲ್ಲಿ ಲಿಂ. ವೀರ ಗಂಗಾಧರ ಶ್ರೀಗಳ ಸಂಕಲ್ಪಿತ ತ್ರೀಕೋಟಿ ಶಿವಲಿಂಗ ಸ್ಥಾಪನೆಯ ಕಾರ್ಯ ಭರದಿಂದ ಸಾಗಿದೆ. ಈ ಪುಣ್ಯ ಕಾರ್ಯ ಮುಗಿದ ಬಳಿಕ ಕ್ಷೇತ್ರ ವಿಶ್ವ ಪ್ರಸಿದ್ಧಿ ಹೊಂದಲಿದೆ ಎಂದು ಹೇಳಿದರು.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...