ಲಿಂಗದಹಳ್ಳಿ: ಸರ್ಕಾರಿ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಸದ್ಗುರು ಜನಸೇವಾ ಫೌಂಡೇಶನ್‌ನಿಂದ ಡಾ. ಬಿ.ಆರ್. ಅಂಬೇಡ್ಕರ್ ಜೀವನ ಮೌಲ್ಯ ಮತ್ತು ವಿಚಾರಧಾರೆ ಹಾಗೂ ಕಾನೂನು ಅರಿವು ಮೂಡಿಸುವ ನಾಟಕೋತ್ಸವ ಹಮ್ಮಿಕೊಳ್ಳಲಾಗಿತ್ತು.
ಶಾಸಕ ಜಿ.ಎಚ್.ಶ್ರೀನಿವಾಸ್ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಡಾ. ಬಿ.ಆರ್.ಅಂಬೇಡ್ಕರ್ ಆದರ್ಶ ಪುರುಷರಾಗಿದ್ದರು. ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಿ ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ನಾವೆಲ್ಲರೂ ಅವರ ಆದರ್ಶಗಳನ್ನು ಪಾಲಿಸಬೇಕು. ಸದ್ಗುರು ಜನಸೇವಾ ಫೌಂಡೇಷನ್ ಉತ್ತಮ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಪ್ರಶಂಸಿದರು.
ಲಿಂಗದಹಳ್ಳಿ ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಸದ್ಗುರು ಜನಸೇವಾ ಫೌಂಡೇಶನ್ ಅಧ್ಯಕ್ಷ ಟಿ.ಎನ್.ಜಗದೀಶ್, ತಾಪಂ ಮಾಜಿ ಅಧ್ಯಕ್ಷ ಬಿ.ಆರ್.ರವಿ, ಕೆಡಿಪಿ ಸದಸ್ಯೆ ರಚನಾ ಶ್ರೀನಿವಾಸ್, ಪಿಡಿಒ ನಾಗರಾಜ್, ಯುವಸ್ಫ್ಪೂರ್ತಿ ಅಕಾಡೆಮಿ ಅಧ್ಯಕ್ಷ ಸುಂದರೇಶ್, ವಿವಿಧ ಸಂಘಟನೆಗಳ ವಸಂತ, ರವಿ ಶಾಂತಿಪುರ, ವಿನೋದ್, ದೇವರಾಜ್ ಟಿ.ಎಸ್.ದರ್ಶನ್, ಲಿಂಗದಹಳ್ಳಿ ಗ್ರಾಪಂ, ಸದ್ಗುರು ಜನಸೇವಾ ಫೌಂಡೇಶನ್, ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಇತರರಿದ್ದರು.