25.1 C
Bangalore
Friday, December 6, 2019

ಅಕ್ರಮ ಮರಳು ದಂಧೆಗೆ ಜಿಲ್ಲಾಡಳಿತ ಬ್ರೇಕ್

Latest News

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಹಾವೇರಿ: ಜಿಲ್ಲೆಯ ತುಂಗಭದ್ರಾ ನದಿ ತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡಿದೆ.

ಜಿಲ್ಲೆಯಲ್ಲಿನ ಅಕ್ರಮ ಮರಳು ಮಾಫಿಯಾದ ಕುರಿತು ‘ವಿಜಯವಾಣಿ’ ಯಲ್ಲಿ ಸೋಮವಾರದಿಂದ ಶನಿವಾರದವರೆಗೆ ವಿಶೇಷ ಸರಣಿ ವರದಿ ಪ್ರಕಟಿಸಲಾಗಿತ್ತು. ಇದೆಲ್ಲವನ್ನು ಗಮನಿಸಿದ ಜಿಲ್ಲಾಡಳಿತ ಅಕ್ರಮಕ್ಕೆ ಶಾಶ್ವತ ಬ್ರೇಕ್ ಹಾಕಲು ಹಲವು ಸುಧಾರಣಾ ಹಾಗೂ ಕಠಿಣ ಕ್ರಮಗಳನ್ನು ಕೈಗೊಂಡಿದೆ.

ಈ ಕುರಿತು ‘ವಿಜಯವಾಣಿ’ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೃಷ್ಣ ಬಾಜಪೈ, ತಹಸೀಲ್ದಾರ್ ಶಂಕರ ಜಿ.ಎಸ್., ಮರಳು ಅಕ್ರಮ ದಂಧೆಯ ಕರಾಳ ಮುಖವನ್ನು ‘ವಿಜಯವಾಣಿ’ ತೆರೆದಿಟ್ಟಿದೆ. ಸರಣಿ ಆರಂಭದಿಂದಲೇ ಅದರಲ್ಲಿನ ಅಂಶಗಳನ್ನು ಪರಿಶೀಲಿಸಿ ತಕ್ಷಣವೇ ಅಕ್ರಮ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ಅಡ್ಡದಾರಿಗಳಿಗೆ ಟ್ರಂಚ್, ದಿನದ 24 ತಾಸು ಗಸ್ತು ತಿರಗಲು ಟಾಸ್ಕ್​ಪೋರ್ಸ್ ಒಂದನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

24 ತಾಸು ಗಸ್ತು: ತಹಸೀಲ್ದಾರ್ ನೇತೃತ್ವದಲ್ಲಿ ಗಸ್ತಿಗೆ ಆರು ಜನರ ತಂಡವನ್ನು ರಚಿಸಲಾಗಿದೆ. ಅದರಲ್ಲಿ ಸರದಿಯಂತೆ ತಹಸೀಲ್ದಾರ್, ಉಪತಹಸೀಲ್ದಾರ್, ಆರ್​ಐಗಳು ನೇತೃತ್ವ ವಹಿಸಲಿದ್ದಾರೆ. ಇನ್ನುಳಿದಂತೆ ಗ್ರಾಮ ಲೆಕ್ಕಾಧಿಕಾರಿಗಳು, ಪಿಡಿಒಗಳು, ಇಬ್ಬರು ಪೊಲೀಸ್ ಸಿಬ್ಬಂದಿ ಇರಲಿದ್ದಾರೆ.

ಏನೇನು ಕ್ರಮ: ಸರಣಿ ವರದಿ ಆರಂಭಗೊಂಡ ಅವಧಿಯಲ್ಲಿಯೇ ತುಂಗಭದ್ರಾ ನದಿ ಪಾತ್ರದ ಹಳ್ಳಿಗಳಲ್ಲಿ ಸಂಚರಿಸಿ ಮರಳು ತೆಗೆಯಲು ಬಳಸುತ್ತಿದ್ದ ಕೆಲ ಬೋಟ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಡಂಬಿನಿಂದ ಮಾಡಿದ್ದ ತೆಪ್ಪಗಳನ್ನು ಸ್ಥಳದಲ್ಲಿಯೇ ನಾಶಪಡಿಸಲಾಗಿದೆ. ನಂಬರ್​ಪ್ಲೇಟ್ ಇಲ್ಲದ ವಾಹನಗಳ ವಶಕ್ಕೆ ಆರ್​ಟಿಒಗಳಿಗೆ ಸೂಚನೆ ನೀಡಲಾಗಿದೆ. ಚೆಕ್​ಪೋಸ್ಟ್​ಗಳಿಗೆ ಸಿಬ್ಬಂದಿ ನೇಮಕದ ಜೊತೆಗೆ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಕೆಗೂ ಸೂಚಿಸಲಾಗಿದೆ. ಶೀಘ್ರದಲ್ಲಿಯೇ ಸಿಸಿ ಕ್ಯಾಮರಾ ಹೊಂದಿದ ಚೆಕ್​ಪೋಸ್ಟ್​ಗಳು ಕಾರ್ಯನಿರ್ವಹಿಸಲಿವೆ.

ಅಡ್ಡದಾರಿಗಳಿಗೆ ಟ್ರಂಚ್: ತುಂಗಭದ್ರಾ ನದಿಯಿಂದ ಅಧಿಕಾರಿಗಳ ಕಣ್ಣು ತಪ್ಪಿಸಿ ಮರಳು ಸಾಗಿಸಲೆಂದೇ ದಂಧೆಕೋರರು ಮಾಡಿಕೊಂಡಿದ್ದ ಅಡ್ಡದಾರಿಗಳಲ್ಲಿ ಟ್ರಂಚ್ ಕೊರೆಸಲಾಗಿದೆ. ತಾಲೂಕಿನ ಕಂಚಾರಗಟ್ಟಿ, ಹರಳಹಳ್ಳಿ, ಹಾವನೂರ, ಹುರಳಿಹಾಳ, ಮೇವುಂಡಿ, ತರೇದಹಳ್ಳಿ ಬಳಿ ಈಗಾಗಲೇ ಟ್ರಂಚ್​ಗಳನ್ನು ತೆರೆದಿದ್ದು, ಅಕ್ರಮ ದಂಧೆಗೆ ಬಹುತೇಕ ಕಡಿವಾಣ ಹಾಕಿದಂತಾಗಿದೆ. ಈಗ ಅಕ್ರಮ ದಂಧೆಕೋರರು ಮುಖ್ಯರಸ್ತೆಯಲ್ಲಿಯೇ ಮರಳು ಸಾಗಾಟ ಮಾಡುವುದು ಅನಿವಾರ್ಯವಾಗಿದೆ. ಇಲ್ಲಿ ಕಾವಲಿರುವುದರಿಂದ ದಂಧೆ ಸದ್ಯಕ್ಕೆ ಸ್ಥಗಿತಗೊಂಡಿದೆ.

ಜಿಲ್ಲೆಯಲ್ಲಿ ಮರಳು ಅಕ್ರಮ ಸಾಗಾಟಕ್ಕೆ ಸಂಪೂರ್ಣ ಬ್ರೇಕ್ ಹಾಕಲಾಗಿದೆ. ಚೆಕ್​ಪೋಸ್ಟ್​ಗಳಲ್ಲಿ ಕಡ್ಡಾಯವಾಗಿ ಸಿಬ್ಬಂದಿ ಹಾಗೂ ಸಿಸಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಮರಳು ಎತ್ತಲು ಬಳಸುತ್ತಿದ್ದ ಬೋಟ್, ತೆಪ್ಪಗಳನ್ನು ವಶಕ್ಕೆ ಪಡೆಯಲಾಗಿದೆ. ಪರವಾನಗಿ ಇಲ್ಲದೇ, ವಾಹನಕ್ಕೆ ನಂಬರ್ ಇಲ್ಲದೇ ಹಾಗೂ ಸಾಮರ್ಥ್ಯಕ್ಕಿತ ಹೆಚ್ಚಿಗೆ ಮರಳು ಸಾಗಿಸುವ ವಾಹನಗಳನ್ನು ಜಪ್ತಿಮಾಡಿ ಅಗತ್ಯ ಕ್ರಮಕೈಗೊಳ್ಳಲು ಪೊಲೀಸ್ ಹಾಗೂ ಸಾರಿಗೆ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

| ಕೃಷ್ಣ ಬಾಜಪೈ, ಜಿಲ್ಲಾಧಿಕಾರಿ ಹಾವೇರಿ

ಅಕ್ರಮ ಮರಳು ಮಾಫಿಯಾದ ಕುರಿತ ಲೇಖನಗಳನ್ನು ಗಮನಿಸಿದ್ದೇನೆ. ಅದರಂತೆ ಆಯಾ ದಿನದಂದೇ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ಅಡ್ಡದಾರಿಗಳಲ್ಲಿ ಮರಳು ಸಾಗಾಟದ ಮಾಹಿತಿ ದೊರೆತ ಕೂಡಲೆ ಅವುಗಳಿಗೆಲ್ಲ ಸ್ವತಃ ಭೇಟಿ ನೀಡಿ ಟ್ರಂಚ್ ಹಾಕಿಸಿ ಅಡ್ಡದಾರಿಗಳ ಸಂಚಾರವನ್ನು ಬಂದ್ ಮಾಡಿಸಿದ್ದೇನೆ. ಜಿಲ್ಲಾಧಿಕಾರಿ ಸೂಚನೆಯಂತೆ ಚೆಕ್​ಪೋಸ್ಟ್​ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು. ಸದ್ಯ ತಾಲೂಕಿನಲ್ಲಿ ಎಲ್ಲಿಯೂ ಮರಳು ಅಕ್ರಮ ಸಾಗಾಟ ಕಂಡುಬಂದಿಲ್ಲ.

| ಶಂಕರ ಜಿ.ಎಸ್., ತಹಸೀಲ್ದಾರ್ ಹಾವೇರಿ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...