20.4 C
Bengaluru
Sunday, January 19, 2020

ಅಕ್ಷರ, ಅನ್ನದಿಂದ ಸರ್ವಾಂಗೀಣ ಪ್ರಗತಿ

Latest News

ಎಲ್ಲರ ಬಾಯಿಗೆ ಬೀಗ ಹಾಕಿದ ಅಮಿತ್ ಷಾ

ಹುಬ್ಬಳ್ಳಿ: ರಾತ್ರಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಿದ ಅಮಿತ್ ಷಾ, ಪಕ್ಷದ ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಪದಾಧಿಕಾರಿಗಳೊಂದಿಗೆ ರಾತ್ರಿಯ ಭೋಜನ ಸವಿದರು.

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಗಜೇಂದ್ರಗಡ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಜತೆಗೆ ಸರ್ಕಾರ ಅಪೌಷ್ಟಿಕತೆ ದೂರಮಾಡಲು ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಸುತ್ತಿದೆ. ಹೀಗಾಗಿ ಮಗುವಿಗೆ ಅಕ್ಷರ ಮತ್ತು ಅನ್ನ ದೊರೆತಾಗ ಮಾತ್ರ ದೇಶದ ಸರ್ವಾಂಗೀಣ ಅಭಿವೃದ್ಧಿಯಾಗಲಿದೆ ಎಂದು ಅಕ್ಷರ ದಾಸೋಹ ಯೋಜನೆ ತಾಲೂಕು ನಿರ್ದೇಶಕ ಬಸವರಾಜ ಅಂಗಡಿ ಹೇಳಿದರು.

ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ರೋಣ, ಅಕ್ಷರ ದಾಸೋಹ ಕಾರ್ಯಕ್ರಮ, ತಾಪಂ ಸಹಯೋಗದಲ್ಲಿ ಶನಿವಾರ ಆಯೋಜಿಸಲಾದ ಅಡುಗೆ ಸಿಬ್ಬಂದಿಗೆ ತರಬೇತಿ ಕಾರ್ಯಾಗಾರ ಹಾಗೂ ಉತ್ತಮ ಅಡುಗೆ ಕೇಂದ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಾಲಾ ಶಿಕ್ಷಕರು ಅಕ್ಷರದ ಜ್ಞಾನವನ್ನು ನೀಡಿದರೆ, ಮಕ್ಕಳಿಗೆ ಅಪೌಷ್ಟಿಕತೆ ಕಾಡದಂತೆ ಗುಣಮಟ್ಟದ ಆಹಾರ ನೀಡುವ ಜವಾಬ್ದಾರಿ ಅಡುಗೆ ಸಿಬ್ಬಂದಿ ಮೇಲಿದೆ. ತರಬೇತಿಯಲ್ಲಿ ಪರಿಣತರು ನೀಡುವ ತರಬೇತಿಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿ ಮಕ್ಕಳ ಯಶಸ್ಸಿಗೆ ಶ್ರಮಿಸಬೇಕು ಎಂದರು. ಅಲ್ಲದೆ, ದಾಸ್ತಾನು ಹಾಗೂ ಅಡುಗೆ ಕೊಠಡಿಯಲ್ಲಿ ಸ್ವಚ್ಛತೆ, ಸುರಕ್ಷತೆ ಹಾಗೂ ಗುಣಮಟ್ಟದ ಆಹಾರ ತಯಾರಿಕೆಗೆ ಆದ್ಯತೆ ನೀಡಬೇಕು ಎಂದರು.

ಅಕ್ಷರ ದಾಸೋಹ ಜಿಲ್ಲಾ ನಿದೇರ್ಶಕ ಡಿ.ಐ. ಅಸುಂಡಿ ಮಾತನಾಡಿ, ಸ್ವಚ್ಛತೆ, ಸುರಕ್ಷತೆ, ಮಿತವ್ಯಯ, ಪೌಷ್ಟಿಕತೆ ಹಾಗೂ ತಾಳ್ಮೆ ಗುಣವನ್ನು ಅಡುಗೆ ಸಿಬ್ಬಂದಿ ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಸಿದ್ಧಪಡಿಸಬೇಕು ಎಂದರು.

ಗಜೇಂದ್ರಗಡ ತಾಲೂಕಿನಲ್ಲಿ ಉತ್ತಮ ಅಡುಗೆ ಕೇಂದ್ರ ಪ್ರಶಸ್ತಿಗೆ ಭಾಜನರಾದ 10 ಶಾಲೆಗಳ ಮುಖ್ಯ ಅಡುಗೆ ಸಿಬ್ಬಂದಿಯನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ ವಿತರಿಸಲಾಯಿತು. ಶಾಲೆಯ ಪ್ರಧಾನಗುರು ಬಿ.ಎನ್. ಜಾಲಿಹಾಳ, ಫಕೀರಪ್ಪ ಹಡಗಲಿ, ಡಾ.ಎಂ.ಎ.ಹಾದಿಮನಿ, ಎ.ಕೆ.ಒಂಟಿ, ಬಿ.ಬಿ. ಲಕ್ಷ್ಮೇಶ್ವರ, ಅಪ್ಪು ಮತ್ತಿಕಟ್ಟಿ, ಸಿದ್ದು ಸಕ್ರಿ, ಶಂಕ್ರವ್ವ ತಾಳಿಕೋಟಿ ಇತರರಿದ್ದರು.

ಆಹಾರ ತಯಾರಿಕೆಯಲ್ಲಿ ಸ್ವಚ್ಛತೆಯಿರಲಿ

ಲಕ್ಷ್ಮೇಶ್ವರ: ಅಕ್ಷರ ದಾಸೋಹ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಅಡುಗೆ ಸಿಬ್ಬಂದಿ ಪಾತ್ರ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಅಡುಗೆ ಸಿಬ್ಬಂದಿ ಸ್ವಚ್ಛತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ನೀಡುವತ್ತ ಮುತುವರ್ಜಿ ವಹಿಸಬೇಕು ಎಂದು ಬಿಇಒ ವಿ.ವಿ. ಸಾಲಿಮಠ ಹೇಳಿದರು.

ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.4 ರಲ್ಲಿ ಶನಿವಾರ ಅಕ್ಷರ ದಾಸೋಹ ಯೋಜನೆಯ ಅಡುಗೆ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ನೂರಾರು ಮಕ್ಕಳ ಆರೋಗ್ಯ ಕಾಪಾಡುವುದು ನಿಮ್ಮ ಜವಾಬ್ದಾರಿಯುತ ಕೆಲಸವಾಗಿದ್ದು, ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು. ಉತ್ತಮ ಗುಣಮಟ್ಟದ ತರಕಾರಿ, ಸೊಪ್ಪು ಬಳಸಬೇಕು. ಅಡುಗೆ ಸಿದ್ಧವಾದ ಬಳಿಕ ಮೊದಲು ಅಡುಗೆ ಸಿಬ್ಬಂದಿ ಊಟ ಮಾಡಿ ಆಹಾರ ಗುಣಮಟ್ಟ ಪರೀಕ್ಷಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಅತ್ಯುತ್ತಮ ಅಡುಗೆ ಸಿಬ್ಬಂದಿ ಅಡರಕಟ್ಟಿಯ ಲಕ್ಷ್ಮೀ ಅಂದಾನಗೌಡ, ಶಿಗ್ಲಿಯ ಅನ್ನಪೂರ್ಣ ಮಡಿವಾಳರ, ಲಕ್ಷ್ಮೇಶ್ವರದ ಸುನಂದ ಬಡಿಗೇರ, ಗೊಜನೂರಿನ ದೇವಕ್ಕ ಜಾಲಮ್ಮನವರ, ಸೂರಣಗಿಯ ರೇಣವ್ವ ಮೂಲಿಮನಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಾಗಾರದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಎಸ್.ಕೆ. ಹವಾಲ್ದಾರ, ಅಕ್ಷರ ದಾಸೋಹ ಅಧಿಕಾರಿ ಎಸ್.ಎನ್. ನದಾಫ್, ಬಿ.ಎಸ್. ಹರ್ಲಾಪುರ, ಮುಖ್ಯ ಶಿಕ್ಷಕ ಆರ್.ಬಿ. ಜೋಶಿ, ಕಾರ್ವಿುಕ ಇಲಾಖೆ ಅಧಿಕಾರಿ ಎಸ್.ಎಂ. ಹಿರೇಹಾಳ, ಅಗ್ನಿಶಾಮಕ ಠಾಣಾಧಿಕಾರಿ ಎಸ್.ಎಸ್. ಶಿವಳ್ಳಿ, ಬಿ.ಎಸ್. ಹರ್ಲಾಪುರ, ದುರಗಪ್ಪ ಬಿಂಜಡಗಿ, ಮಂಜುನಾಥ ನರೇಗಲ್ ಇದ್ದರು. ಎನ್.ಎನ್. ಶಿಗ್ಲಿ ನಿರೂಪಿಸಿದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...