17.8 C
Bengaluru
Wednesday, January 22, 2020

ಅಜ್ಞಾನದ ಕತ್ತಲೆ ಕಳೆಯುವುದೇ ಕಾರ್ತಿಕೋತ್ಸವ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...


ಶಿರಹಟ್ಟಿ: ಅಂತರಂಗದ (ಅಜ್ಞಾನದ) ಕತ್ತಲೆ ಹೋಗಲಾಡಿಸಿ ಜ್ಞಾನದ ಅರಿವು ಪಡೆಯುವುದೇ ಕಾರ್ತಿಕೋತ್ಸವದ ಮೂಲ ಉದ್ದೇಶವಾಗಿದೆ ಎಂದು ವರವಿ ಮಠದ ಶ್ರೀ ವಿರೂಪಾಕ್ಷ ಸ್ವಾಮಿಗಳು ಹೇಳಿದರು.

ಪಟ್ಟಣದ ಮ್ಯಾಗೇರಿ ಓಣಿಯ ದುರ್ಗಾದೇವಿ ಸೇವಾ ಸಮಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಕಾರ್ತಿಕೋತ್ಸವ ಹಾಗೂ ಭಜನಾ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮನುಷ್ಯ ಬಾಹ್ಯ ಆಡಂಬರದ ತೊಳಲಾಟದಲ್ಲಿ ಬಿದ್ದು ಧರ್ಮ, ದೇವರಲ್ಲಿ ಭಯ, ಭಕ್ತಿಯಿಂದ ವಿಚಲಿತನಾಗುತ್ತಿದ್ದಾನೆ. ಕಾರಣ ಆತನ ಅಂತರಂಗದಲ್ಲಿ ಅಡಗಿರುವ ಕತ್ತಲೆ ಹೋಗಲಾಡಿಸಲು ಇಂಥ ಧರ್ಮ ಕಾರ್ಯಗಳು ಅತ್ಯಗತ್ಯ. ಮಹಾತ್ಮರ ಒಂದಿಷ್ಟು ಉಪದೇಶಗಳನ್ನು ಕೇಳಿ ಅಂತರಂಗ ಶುದ್ಧ ಮಾಡಿಕೊಂಡಾಗ ಮನಸ್ಸಿನಲ್ಲಿ ಸುಜ್ಞಾನದ ಜ್ಯೋತಿ ಬೆಳಗಿ ಜನ್ಮ ಸಾರ್ಥಕವಾಗುತ್ತದೆ ಎಂದರು.

ಮುಖಂಡ ಚಂದ್ರಕಾಂತ ನೂರಶೆಟ್ಟರ್ ಮಾತನಾಡಿ, ದಾಸಶ್ರೇಷ್ಠರು, ಶರಣರು ಜಗತ್ತಿಗೆ ನೀಡಿರುವ ಜ್ಞಾನದ ಬೆಳಕಿನ ಮೂಲಕ ಮಾನವೀಯ ಧರ್ಮ ಪರಿಪಾಲಿಸುತ್ತ ಮನುಷ್ಯ ಜನ್ಮ ಸಾರ್ಥಕ ಪಡಿಸಿಕೊಳ್ಳಬೇಕು ಎಂದರು. ಶಿಕ್ಷಕ ಕೆ.ಎ. ಬಳಿಗೇರ ಕಾರ್ತಿಕೋತ್ಸವದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಯಲ್ಲಪ್ಪ ಇಂಗಳಗಿ ಅಧ್ಯಕ್ಷತೆ ವಹಿಸಿದ್ದರು. ಮಹೇಶ ಲಮಾಣಿ, ಪಪಂ ಸದಸ್ಯ ಸಂದೀಪ ಕಪ್ಪತ್ತನವರ, ಫಕೀರೇಶ ಮಾಬಳಿ, ಮಹಾಂತೇಶ ದಶಮನಿ, ಯಲ್ಲಪ್ಪಗೌಡ ಅಣ್ಣಿಗೇರಿ, ಎಚ್.ಎಂ. ದೇವಗಿರಿ, ಗೂಡುಸಾಬ್ ಬುವಾಜಿ, ಈರಪ್ಪ ಕಲ್ಯಾಣಿ, ಮಾರ್ತಾಂಡಪ್ಪ ಗೊರವರ, ಕರೆಡೆಪ್ಪ ವರವಿ, ಬಸವಣ್ಣೆಪ್ಪ ತುಳಿ, ಬಸವರಾಜ ಚಿಕ್ಕತೋಟದ, ಯಲ್ಲಪ್ಪ ಗೂಳಪ್ಪನವರ, ಈರಣ್ಣ ಕಲ್ಯಾಣಿ ಇತರರಿದ್ದರು. ಪಪಂ ಸದಸ್ಯ ಫಕೀರೇಶ ರಟ್ಟಿಹಳ್ಳಿ, ಶಿಕ್ಷಕ ಎಂ.ಕೆ. ಲಮಾಣಿ ನಿರ್ವಹಿಸಿದರು. ನಂತರ ಅಹೋರಾತ್ರಿವರೆಗೂ ಭಜನಾ ಸ್ಪರ್ಧೆ ನಡೆಯಿತು.



ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...