20.4 C
Bangalore
Monday, December 9, 2019

ಅಟಲ್ ಅಸ್ಥಿ ಕಲಶಕ್ಕೆ ಪುಪ್ಪಾರ್ಚನೆ

Latest News

ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಹುಬ್ಬಳ್ಳಿ: ಬೆಂಗಳೂರಿನಿಂದ ಆಗಮಿಸಿದ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿ ಕಲಶವನ್ನು ನಗರದ ಮೂರುಸಾವಿರ ಮಠದ ಆವರಣದಲ್ಲಿ ಶುಕ್ರವಾರ ಬರಮಾಡಿಕೊಳ್ಳಲಾಯಿತು. ಸಂಸದ ಪ್ರಲ್ಹಾದ ಜೋಶಿ ಅಸ್ಥಿ ಕಲಶಕ್ಕೆ ಪುಪ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ವಾಜಪೇಯಿ ಅವರು ದೇಶ ಕಂಡ ಅತ್ಯುತ್ತಮ ಪ್ರಧಾನಿ. ಅವರು ಅನಾರೋಗ್ಯದಿಂದಾಗಿ 8 ವರ್ಷಗಳಿಂದ ಸಾರ್ವಜನಿಕ ಜೀವನದಿಂದ ದೂರ ಉಳಿದಿದ್ದರು. ಇವರ ಅಗಲಿಕೆಗೆ ದೇಶಾದ್ಯಂತ ಜನ ಕಂಬನಿ ಮಿಡಿದ್ದಾರೆ. ವಾಜಪೇಯಿ ಅವರು ಯುವಕರು, ಕಾರ್ವಿುಕರು, ಕೃಷಿಕರು ಸೇರಿ ಎಲ್ಲರಿಗೂ ಸ್ಪೂರ್ತಿಯಾಗಿದ್ದರು ಎಂದು ಸ್ಮರಿಸಿದರು.

ಬಳಿಕ ಅಸ್ಥಿ ಕಲಶ ಮೆರವಣಿಗೆಗೆ ಚಾಲನೆ ನೀಡಿದರು. ತುಳಜಾಭವಾನಿ ವೃತ್ತ, ಶಿವಾಜಿ ಚೌಕ್, ದುರ್ಗದ ಬೈಲ್ ರಸ್ತೆ, ಬಾಬಾಸಾನ ಗಲ್ಲಿ, ಸಂಗೊಳ್ಳಿ ರಾಯಣ್ಣ ವೃತ್ತ, ಚನ್ನಮ್ಮ ವೃತ್ತಕ್ಕೆ ಮೆರವಣಿಗೆ ತಲುಪಿತು. ಅಲ್ಲಿ ಕೆಲ ಹೊತ್ತು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ನಂತರ ಕಲಶ ಹಾವೇರಿಗೆ ತೆರಳಿತು.

ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಉಪ ಮೇಯರ್ ಮೇನಕಾ ಹುರಳಿ, ಮುಖಂಡರಾದ ಮಾ. ನಾಗರಾಜ, ಚಂದ್ರಶೇಖರ ಗೊಕಾಕ, ಮಹೇಶ ಟೆಂಗಿನಕಾಯಿ, ನಾಗೇಶ ಕಲಬುರ್ಗಿ, ಲಿಂಗರಾಜ ಪಾಟಿಲ, ಜಯರ್ಕಿತಿ ಕಟ್ಟಿ, ಅಶೋಕ ಕಾಟವೆ, ಸತಿಶ ಶೇಜವಾಡಕರ, ಮಹೇಂದ್ರ ಕೌತಾಳ, ಶರಣು ಅಂಗಡಿ, ಕಿರಣ ಉಪ್ಪಾರ, ಮಂಜು ಕಲಾಲ, ಶಿವು ಮೆಣಸಿನಕಾಯಿ, ಶಿವಾನಂದ ಮುತ್ತಣ್ಣವರ, ಸಂತೋಷ ಚೌವ್ಹಾಣ, ಬೀರಪ್ಪ ಖಂಡೇಕರ, ಹನುಮಂತಪ್ಪ ದೊಡ್ಡಮನಿ, ರಾಜು ಕೋರ್ಯಾಣಮಠ, ರವಿ ನಾಯ್ಕ, ಉಮೇಶ, ವೀರಭದ್ರಪ್ಪ ಹಾಲಹರವಿ, ಪ್ರಭು ನವಲಗುಂದಮಠ, ಕೃಷ್ಣಾ ಗಂಡಗಾಳೇಕರ ಇತರರಿದ್ದರು.

ಗುಂಡಿ ಮುಚ್ಚುವಂತೆ ಸೂಚನೆ

ಹುಬ್ಬಳ್ಳಿ: ನಗರದ ಬಹುತೇಕ ರಸ್ತೆಗಳು ತಗ್ಗು-ಗುಂಡಿ ಬಿದ್ದಿವೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಗುಂಡಿ ಮುಚ್ಚುವುದಕ್ಕೆ ಪಾಲಿಕೆ ಆಯುಕ್ತ ಹಾಗೂ ಮಹಾಪೌರರಿಗೆ ತಿಳಿಸಿದ್ದೇನೆ ಎಂದು ಪ್ರಲ್ಹಾದ ಜೋಶಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ, ಸಿಆರ್​ಎಫ್ ಸೇರಿದಂತೆ ಕೇಂದ್ರ ಸರ್ಕಾರ ಕೋಟಿ ಕೋಟಿ ರೂ. ನೀಡಿದರೂ ಅವಳಿ ನಗರದ ತಗ್ಗು-ಗುಂಡಿಗಳಿಗೆ ಇನ್ನೂ ಮುಕ್ತಿ ದೊರೆತಿಲ್ಲ. ಈ ಕುರಿತು ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮವಾಗಿಲ್ಲ. ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಗಳು ಹಾಳಾಗಿವೆ. 15 ದಿನದಲ್ಲಿ ಗುಂಡಿ ಮುಚ್ಚಲು ಸೂಚಿಸಿದ್ದೇನೆ ಎಂದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...