25.9 C
Bengaluru
Wednesday, January 22, 2020

ಅಡಕೆ ಕಲಬೆರಕೆ ಗಾರ್ಬಲ್ ವಿರುದ್ಧ ಕ್ರಮ

Latest News

ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಲ್ಲ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿದ್ದ ಆರೋಪಿ ಆದಿತ್ಯರಾವ್​ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ...

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಈಶ್ವರಮಂಗಲ: ವಿದೇಶಗಳಿಂದ ಆಮದಾಗುವ ಗುಣಮಟ್ಟವಿಲ್ಲದ ಅಡಕೆಯನ್ನು ಸ್ಥಳೀಯ ಅಡಕೆಯೊಂದಿಗೆ ಕಲಬೆರಕೆ ಮಾಡಿ ಮಾರಾಟ ಮಾಡುವ ಗಾರ್ಬಲ್‌ಗಳನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪುತ್ತೂರು ಅಡಕೆ ಬೆಳೆಗಾರರ ಹಿತರಕ್ಷಣಾ ವೇದಿಕೆ ಪ್ರಮುಖರು ಗುರುವಾರ ಪುತ್ತೂರು ಉಪವಿಭಾಗಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿಗೆ ಮನವಿ ಸಲ್ಲಿಸಿದ್ದಾರೆ.

ಕೆ.ಜಿ. ಅಡಕೆ ಧಾರಣೆ 340 ರೂ.ನಲ್ಲಿದ್ದದ್ದು ಕಲಬೆರಕೆ ದಂಧೆಯಿಂದಾಗಿ 220 ರೂ.ಗೆ ಕುಸಿದಿದ್ದು, ಸ್ಥಿರ ಧಾರಣೆ ಇಲ್ಲದಂತಾಗಿದೆ. ಬರ್ಮಾ, ಮಲೇಷ್ಯಾ, ಇಂಡೋನೇಷ್ಯಾ ಮೊದಲಾದ ದೇಶಗಳಲ್ಲಿ ಕಾಡುಗಳಲ್ಲಿ ಬೆಳೆಯುವ ಗುಣಮಟ್ಟವಿಲ್ಲದ ಅಡಕೆ ಭಾರತಕ್ಕೆ ಆಮದಾಗುತ್ತಿದೆ. 140 ರೂ.ಗೆ ಸಿಗುವ ಈ ಅಡಕೆಯನ್ನು ಜಿಲ್ಲೆಯ ಕೆಲವೆಡೆ ಗಾರ್ಬಲ್‌ಗಳಲ್ಲಿ ಸ್ಥಳೀಯ ಅಡಕೆಯೊಂದಿಗೆ ಬೆರಕೆ ಮಾಡಲಾಗುತ್ತಿದೆ. ಇದರಿಂದ ಅಡಕೆ ಧಾರಣೆ ಕುಸಿದಿದ್ದು, ಕೃಷಿಕರಿಗೆ ದೊಡ್ಡ ಹೊಡೆತ ಬೀಳುತ್ತಿದೆ. ಕೋಡಿಂಬಾಡಿಯಂಥ ಗ್ರಾಮೀಣ ಪ್ರದೇಶದಲ್ಲಿರುವ ಅಡಕೆ ಗಾರ್ಬಲ್‌ಗೆ 100 ಟನ್‌ನಷ್ಟು ಗುಣಮಟ್ಟವಿಲ್ಲದ ಅಡಕೆ ಬರುತ್ತಿದೆ ಎಂದರೆ ಪರಿಸ್ಥಿತಿ ಹೇಗಿದೆ ಎಂಬುದನ್ನು ಊಹಿಸಬಹುದು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ವೇದಿಕೆಯ ಪ್ರಮುಖರಾದ ಮುರಳೀಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ ಪೆರ್ನೆ, ನಿರಂಜನ ರೈ ಮಠಂತಬೆಟ್ಟು, ಸಂತೋಷ್ ಭಂಡಾರಿ, ಆದರ್ಶ ರೈ, ಉಲ್ಲಾಸ್ ಕೋಟ್ಯಾನ್, ಕೇಶವ ಭಂಡಾರಿ ಕೈಪ ಮತ್ತಿತರರು ನಿಯೋಗದಲ್ಲಿದ್ದರು.

ಈ ಕುರಿತು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ತಿಳಿಸುತ್ತೇನೆ. ಈ ಭಾಗದಲ್ಲಿ ಎಲ್ಲೆಲ್ಲಿ, ಯಾರೆಲ್ಲ ಇಂಥ ಕಲಬೆರಕೆ ಅಡಕೆ ಮಾರಾಟ ಮಾಡುತ್ತಾರೆ ಎಂಬ ಮಾಹಿತಿ ನೀಡಿ. ಪೊಲೀಸ್ ಇಲಾಖೆಗೂ ತನಿಖೆ ಮೂಲಕ ಸರ್ಚ್ ವಾರಂಟ್ ಅಧಿಕಾರ ಇದೆ. ಜಿಲ್ಲಾಧಿಕಾರಿಗೂ ಮನವಿ ಕಳುಹಿಸಿಕೊಡಲಾಗುವುದು.
– ಎಚ್.ಕೆ.ಕೃಷ್ಣಮೂರ್ತಿ, ಉಪವಿಭಾಗಾಧಿಕಾರಿ

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...