16 C
Bangalore
Saturday, December 7, 2019

ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಗದಗ:ವಿವಿಧ ಯೋಜನೆಗಳ ಅನುಷ್ಠಾನದ ಕುರಿತು ಅಸಮರ್ಪಕ ವರದಿ ಸಲ್ಲಿಕೆ, ಬೇಜವಾಬ್ದಾರಿ ಉತ್ತರ, ಸೂಚಿತ ವಿಷಯಗಳನ್ನು ವಿಷಯಾಂತರ ಮಾಡುತ್ತಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧ ಜಿಪಂ ಸಿಇಒ ಮಂಜುನಾಥ ಚವ್ಹಾಣ ಅವರು ಕೆಂಡಾಮಂಡಲರಾಗಿ ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ಜರುಗಿದ ಜಿಪಂ ಸಾಮಾನ್ಯ ಸಭೆಯಲ್ಲಿ ಜರುಗಿತು.

ಸಭೆಗೆ ಆಗಮಿಸಿದ್ದ ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಜ. 31ರಂದು ಜರುಗಿದ ಸಾಮಾನ್ಯ ಸಭೆಯ ನಡಾವಳಿಗಳು, ನಿರ್ಣಯಗಳಿಗೆ ಸಮರ್ಪಕ ಅನುಸರಣಾ ವರದಿ ಸಲ್ಲಿಸಿರಲಿಲ್ಲ. ನಡಾವಳಿಗಳ ಕುರಿತು ಮಾಹಿತಿ ಕೇಳಿದರೆ ವಿಷಯಾಂತರ ಮಾಡುತ್ತ ಬೇರೆ ಇಲಾಖೆಗಳ ಮೇಲೆ ದೂರು ನೀಡುತ್ತಿದ್ದ ಅಧಿಕಾರಿಗಳ ವಿರುದ್ಧ ಜಿಪಂ ಸಿಇಒ ಮಂಜುನಾಥ ಚವ್ಹಾಣ ಹರಿಹಾಯ್ದರು. ಅಲ್ಲದೆ, ಅನುಸರಣಾ ವರದಿ ಸಲ್ಲಿಸದೆ ಸಾಮಾನ್ಯ ಸಭೆಗೆ ಗೈರಾಗಿದ್ದ ರೋಣ ತಾಪಂ ಇಒ ಎಂ.ವಿ. ಕೆಳಗೇರಿ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಅವರನ್ನು ಅಮಾನತುಗೊಳಿಸಲು ಪ್ರಧಾನ ಕಾರ್ಯದರ್ಶಿಗಳಿಗೆ ಶಿಫಾರಸು ಮಾಡಲಾಗುವುದು ಎಂದರು.

ಜಿಪಂ ಸದಸ್ಯೆ ಲಲಿತಾ ಹುಣಸಿಕಟ್ಟಿ ಮಾತನಾಡಿ, ಹೊಂಬಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೇಳೆ ಶುಶ್ರೂಷಕರು ಇಲ್ಲದ ಕಾರಣ ತುರ್ತಚಿಕಿತ್ಸೆ ಸೇವೆ ಸಿಗದೆ ಗ್ರಾಮಸ್ಥರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಇದಕ್ಕುತ್ತರಿಸಿದ ಡಿಎಚ್​ಒ ಡಾ. ವಿರೂಪಾಕ್ಷರಡ್ಡಿ ಮಾದಿನೂರ, ಈ ಮುಂಚೆ ಸಮಸ್ಯೆ ಇತ್ತು. ಈಗ ಬಿಎಎಂಎಸ್ ವೈದ್ಯರನ್ನು ಹಾಗೂ ಶುಶ್ರೂಷಕರನ್ನು ನೇಮಕ ಮಾಡಲಾಗಿದ್ದು ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಪಶು ವೈದ್ಯರ ಕೊರತೆಯಿಂದ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಪಶು ಆಸ್ಪತ್ರೆಗಳಲ್ಲಿ ಜವಾನರು ಆಸ್ಪತ್ರೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ಪಶು ವೈದ್ಯರ ನೇಮಕ ಮಾಡಿಕೊಂಡು ರೈತರ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಜಿಪಂ ಸದಸ್ಯ ಪಡಿಯಪ್ಪ ಪೂಜಾರ ಹೇಳಿದರು. ಜಂಟಿ ಕೃಷಿ ನಿರ್ದೇಶಕ ಸಿ.ಬಿ. ಬಾಲರೆಡ್ಡಿ ಅವರು ಕೃಷಿ ಇಲಾಖೆ ಕುರಿತು ಮಾಹಿತಿ ನೀಡಿದರು. ಜಿಪಂ ಉಪಾಧ್ಯಕ್ಷೆ ಶಕುಂತಲಾ ಮೂಲಿಮನಿ, ವಿಪ ಸದಸ್ಯ ಎಸ್.ವಿ. ಸಂಕನೂರ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಹನುಮಂತಪ್ಪ ಪೂಜಾರ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವಕುಮಾರ ನೀಲಗುಂದ, ಕೃಷಿ ಮತ್ತು ಕೈಗಾರಿಕಾ ಸಮಿತಿ ಅಧ್ಯಕ್ಷ ಈರಪ್ಪ ನಾಡಗೌಡ್ರ, ಜಿಪಂ ಉಪಕಾರ್ಯದರ್ಶಿ ಡಿ. ಪ್ರಾಣೇಶರಾವ್, ಜಿಪಂ ಯೋಜನಾ ನಿರ್ದೇಶಕ ಟಿ. ದಿನೇಶ, ಜಿಪಂ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ವೇತನ ಪಾವತಿಯಾಗದಿದ್ದರೆ ಧರಣಿ

ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಪ್ರೌಢಶಾಲೆ ಶಿಕ್ಷಕರ ವೇತನ ಹಂಚಿಕೆ (ಲಿಂಕ್ಡ್ ಡಾಕ್ಯುಮೆಂಟ್)ದಾಖಲಾತಿ ಜೋಡಣೆಯನ್ನು ತಪ್ಪಾಗಿ ನಮೂದಿಸಿದ್ದರಿಂದ ಜಿಲ್ಲೆಯ ಗದಗ ತಾಲೂಕಿನ 24 ಸರ್ಕಾರಿ ಪ್ರೌಢಶಾಲೆಗಳ ಹಾಗೂ ರೋಣ ತಾಲೂಕಿನ 12 ಅನುದಾನಿತ ಪ್ರೌಢಶಾಲೆಗಳ ಶಿಕ್ಷಕರ ವೇತನ ಕಳೆದ ಮೂರು ತಿಂಗಳಿನಿಂದ ಪಾವತಿಯಾಗಿಲ್ಲ ಎಂದು ವಿಪ ಸದಸ್ಯ ಎಸ್.ವಿ. ಸಂಕನೂರ ಆರೋಪಿಸಿದರು. ಡಿಡಿಪಿಐ ಎನ್.ಎಚ್. ನಾಗೂರ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ಈ ಸಮಸ್ಯೆಯ ಕುರಿತು ಮಾಹಿತಿ ಇಲ್ಲ ಎಂದು ಹೇಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಹೇಳಿದರು. 15 ದಿನದೊಳಗಾಗಿ ದಾಖಲಾತಿಗಳನ್ನು ಸರಿಪಡಿಸುವುದರ ಜೊತೆಗೆ ಬಾಕಿ ಉಳಿದಿರುವ ವೇತನ ಪಾವತಿಯಾಗಬೇಕು. ಇಲ್ಲವಾದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...