17.8 C
Bengaluru
Wednesday, January 22, 2020

ಅಧ್ಯಾತ್ಮ ಸಾರ್ವತ್ರಿಕರಣವಾಗಲಿ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಗದಗ: ಎಲ್ಲರಲ್ಲಿಯೂ ದೇವರಿದ್ದಾನೆ ಜತೆಗೆ ದೈವತ್ವದ ಕಿಡಿ ಇದೆ. ಎಲ್ಲರೂ ಒಂದೇ ಎಂದು ತಿಳಿಯಬೇಕು, ವಿಭಿನ್ನತೆಯಲ್ಲಿ ಏಕತೆ ಕಾಣುವುದೇ ನಿಜವಾದ ಧರ್ಮ. ಅಧ್ಯಾತ್ಮ ಸಾರ್ವತ್ರಿಕರಣವಾಗಬೇಕು ಎನ್ನುವುದೇ ಸಮ್ಮೇಳನದ ಮೂಲ ಉದ್ದೇಶ ಎಂದು ಕೊಲ್ಕತ್ತದ ರಾಮಕೃಷ್ಣ ಮಠ ಹಾಗೂ ಮಿಷನ್ ಉಪಾಧ್ಯಕ್ಷ ಶ್ರೀ ಸ್ವಾಮಿ ಗೌತಮಾನಂದಜಿ ಮಹಾರಾಜ್ ಹೇಳಿದರು.

ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ಶುಕ್ರವಾರ ರಾಮಕೃಷ್ಣ ವಿವೇಕಾನಂದ ಭಾವಪ್ರಚಾರ ಪರಿಷತ್ 6ನೇ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ ಜೀವನಕ್ಕೂ ಸತ್ಸಂಗ ಮುಖ್ಯ. ರಾಮಕೃಷ್ಣ ಪರಮಹಂಸರು, ವಿವೇಕಾನಂದ ಮತ್ತು ಶಾರದಾ ಮಾತೆಯವರ ತತ್ತ್ವ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಮೌಲಿಕ ಜೀವನ ನಡೆಸಬಹುದು ಎಂದರು.

ಸರ್ವಧರ್ಮ ಸಮಭಾವ, ಸಮದೃಷ್ಟಿ, ಸಮದರ್ಶನ ಇಟ್ಟಕೊಂಡರೆ ಅನಂತ ಜೀವನದಲ್ಲಿ ಗೌರಯುತವಾಗಿ ಬಾಳಬಹುದು. ಸನಾತನ ಧರ್ಮ ಉಳಿಸಿಬೆಳೆಸಬೇಕು. ಇಂತಹ ಬೃಹತ್ ಸತ್ಸಂಗದಲ್ಲಿ ಪಾಲ್ಗೊಂಡಿರುವ ತಮ್ಮೆಲ್ಲರ ಬದುಕು ಸಂತೃಪ್ತಿ, ಸಂತೋಷದಿಂದ ಕೂಡಿರಲಿ ಎಂದು ಹೇಳಿದರು.

ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದಜಿ ಮಹಾರಾಜ್ ಮಾತನಾಡಿ, ಧರ್ಮವನ್ನು ಧಾರೆ ಎರೆಯುವ ಸಲುವಾಗಿ ಸಮ್ಮೇಳನ ಆಯೋಜಿಸಲಾಗಿದೆ. ರಾಮಕೃಷ್ಣ ಪರಮಹಂಸರು ಹೇಳಿದಂತೆ ಎಲ್ಲ ಜೀವಗಳಲ್ಲಿ ದೇವರಿದ್ದಾನೆ. ಆದ್ದರಿಂಧ ಜೀವಿಗಳ ಸೇವೆ ಮಾಡುವುದೇ ದೇವ ಸೇವೆ ಎಂಬುದನ್ನು ನಾವೆಲ್ಲರೂ ಅರಿತುಕೊಳ್ಳಬೇಕು ಎಂದರು.

ಸಾಧುಸಂತರು ಮಾತ್ರ ಅಧ್ಯಾತ್ಮದ ಹಕ್ಕುದಾರರಲ್ಲ. ಗೃಹಸ್ಥರಿಗೂ ಕೂಡ ಅಧ್ಯಾತ್ಮದ ಮೇಲೆ ಹಕ್ಕು ಇದೆ. ಜಗತ್ತಿನ ಶೇ. 90ರಷ್ಟು ಶ್ರೇಷ್ಠ ಸಂತರು ಗೃಹಸ್ಥರಾಗಿದ್ದು, ಅವರು ನೀಡಿದ ಕೊಡುಗೆ ಹಾಗೂ ಮಾಡಿರುವಂತಹ ಸೇವೆ ಅಮೋಘ. ಹೀಗಾಗಿ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಧ್ಯಾತ್ಮವನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಧರ್ಮ ಸಾರ ಎಲ್ಲರಿಗೂ ತಲುಪಿಲ್ಲ. ಹೀಗಾಗಿ ಪ್ರತಿ ಮನೆ ಮನಕ್ಕೂ ನಿಜವಾದ ಧರ್ಮವನ್ನು ತಲುಪಿಸುವ ಕಾರ್ಯ ಆಗಬೇಕಿದೆ. ಈ ಸಮ್ಮೇಳನದ ಮೂಲಕ ಜನರಿಗೆ ಧರ್ಮವನ್ನು ಮುಟ್ಟಿಸುವಲ್ಲಿ ಯಶಸ್ಸು ಕಾಣುತ್ತೇವೆ ಎಂಬ ನಂಬಿಕೆ ಇದೆ ಅವರು ಹೇಳಿದರು.

ಗದಗ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದಜಿ ಮಹಾರಾಜ್ ಪ್ರಾಸ್ತಾವಿಕ ಮಾತನಾಡಿ, ವೀರನಾರಾಯಣನ ಸನ್ನಿಧಾನದಲ್ಲಿ ಸಮ್ಮೇಳನ ಆಯೋಜಿಸಲಾಗಿದ್ದು, ಹಲವಾರು ಸಂತರು ತಮ್ಮ ಸಂದೇಶಗಳನ್ನು ನೀಡಲಿದ್ದಾರೆ. ಅಧ್ಯಾತ್ಮ ಎಲ್ಲರಿಗೂ ಬೇಕು ಎಂದರು.

ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ನಂದಿವೇರಿಮಠ ಶಿವಕುಮಾರ ಸ್ವಾಮೀಜಿ, ಬೆಟಗೇರಿಯ ನೀಲಕಂಠಪಟ್ಟದಾರ್ಯ ಸ್ವಾಮೀಜಿ, ಸ್ವಾಮಿ ಜಿತಕಾಮಾನಂದ ಮಹಾರಾಜ್, ಸ್ವಾಮಿ ವೀರೇಶಾನಂದ ಮಹಾರಾಜ್, ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ, ಮಾಜಿ ಸಂಸದ ಐ.ಜಿ.ಸನದಿ, ಚಂದ್ರು ಬಾಳಿಹಳ್ಳಿಮಠ ಮತ್ತಿತರರು ವೇದಿಕೆ ಮೇಲಿದ್ದರು.

ಮಾಜಿ ಶಾಸಕ ಡಿ.ಆರ್.ಪಾಟೀಲ ಸ್ವಾಗತಿಸಿದರು. ಜೆ.ಕೆ.ಜಮಾದಾರ ಪರಿಚಯಿಸಿ ನಿರೂಪಿಸಿದರು.

ಅಧ್ಯಾತ್ಮದಲ್ಲಿ ಸದ್ಗತಿ ಕಾಣಿ

ಡಾ. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ಮೂರು ದಿನಗಳ ಕಾಲ ನಡೆಯಲಿರುವ ಸಮ್ಮೇಳನ ಮೊದಲ ದಿನವೇ ಯಶ ಕಂಡಿದೆ. ಇಲ್ಲಿಗೆ ಆಗಮಿಸಿರುವ ಹತ್ತಾರು ಸಂತರ ಸಂದೇಶಗಳನ್ನು ಆಲಿಸಲು ಬಂದಿರುವ ಸಾವಿರಾರು ಸಂಖ್ಯೆಯ ಭಕ್ತರನ್ನು ಕಂಡರೆ ಮನಸ್ಸು ಪ್ರಫುಲ್ಲಗೊಳ್ಳುತ್ತದೆ. ಸಮದೃಷ್ಟಿ ಸಮಭಾವ ದಂತಹ ತತ್ತ್ವಳನ್ನು ನೀಡಿದ ರಾಮಕೃಷ್ಣ, ವಿವೇಕಾನಂದ ಮತ್ತು ಶಾರದಾ ಮಾತೆಯ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಇದು ಸಕಾಲ ಎಂದರು. ಸಂಸಾರಿಗಳು ಅಧ್ಯಾತ್ಮದಲ್ಲಿ ಸದ್ಗತಿ ಕಾಣಬೇಕು. ಮಹತ್ಮರ ಸಂದೇಶವನ್ನು ಅನುಸರಿಸಿದರೆ ಜೀವನದಲ್ಲಿ ಅತ್ಯುನ್ನತ ಗುರಿ ತಲುಪಬಹುದು ಎಂದು ಹೇಳಿದರು.

ಆತ್ಮಾವಲೋಕನದ ಸಮಯ

ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಜಗತ್ತಿನ ಶ್ರೇಷ್ಠ ದಾರ್ಶನಿಕರು ಮತ್ತು ಶರಣರ ಸಂದೇಶಗಳನ್ನು ಎಲ್ಲರೂ ತಮ್ಮ ಭಾಷಣದ ಮೂಲಕ ಹೇಳುತ್ತಾರೆ. ಆದರೆ, ಅದನ್ನು ಕಾರ್ಯರೂಪಕ್ಕೆ ತರಲು ಯಾರೂ ಮುಂದಾಗುತ್ತಿಲ್ಲ. ಅವರ ಮಾರ್ಗವನ್ನು ಅನುಸರಿಸಲು ಹಿಂದೇಟು ಹಾಕುತ್ತಿರುವುದು ಏಕೆ? ಇದು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳುವಂತಹ ಸಮಯ. ಅಂಧ ಶ್ರದ್ಧೆ ಬೇಡ. ಮಾರಕವಾಗಿರುವ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಬೇಕು. ಸಾತ್ವಿಕ ಸಮಾಜ ನಿರ್ವಿುಸಲು ಎಲ್ಲರೂ ಕೈಜೋಡಿಸಬೇಕು ಎಂದರು. ಶನಿವಾರ ಗದಗ ಸಮ್ಮೇಳನದ ಘೋಷಣೆಗಳನ್ನು ತಿಳಿಸಲಾಗುತ್ತಿದೆ. ಸಂತರು ನಿರ್ಣಯಿಸುವ ಘೋಷಣೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...