25.1 C
Bangalore
Friday, December 6, 2019

ಅನುದಾನ ಹಣಕ್ಕೆ ಪಡೆಯುವ ಬಡ್ಡಿ ನೀಡಿ

Latest News

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

ಯಾಂತ್ರಿಕ ಜೀವನಕ್ಕೆ ಮಾರುಹೋಗಿದ್ದಾರೆ ಜನ

ಕನಕಪುರ: ಯಾಂತ್ರಿಕ ಜೀವನಕ್ಕೆ ಮಾರುಹೋಗಿರುವ ಇಂದಿನ ಜನತೆ ಗ್ರಾಮೀಣ ಕಲೆ, ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ ಎಂದು ದೇಗುಲಮಠದ ಕಿರಿಯ ಶ್ರೀ ಚನ್ನಬಸವ ಸ್ವಾಮೀಜಿ ತಿಳಿಸಿದರು. ಕೋಡಿಹಳ್ಳಿ ರಂಗಮಂದಿರದಲ್ಲಿ ಕನ್ನಡ...

ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್​ಕೌಂಟರ್​​ ಅನ್ನು ಸ್ವಾಗತಿಸಿದ ಗೋವಾ ಕಾಂಗ್ರೆಸ್​​

ಪಣಜಿ: ಹೈದರಾಬಾದ್​ನಲ್ಲಿ ಶುಕ್ರವಾರ ಮುಂಜಾನೆ ದಿಶಾ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿದ್ದ ಆರೋಪಿಗಳನ್ನು ಪೊಲೀಸರು ಎನ್​ಕೌಂಟರ್​​ನಲ್ಲಿ ಕೊಲೆ ಮಾಡಿದ್ದನ್ನು ಗೋವಾ ಕಾಂಗ್ರೆಸ್​ ಮಹಿಳಾ...

ಶಿರಸಿ: ಕಳೆದ ವರ್ಷ ಶಾಲೆಗಳ ಅನುದಾನದ ಬಡ್ಡಿ ಹಣವನ್ನು ವಾಪಸ್ ಕೇಳಿ ತೀವ್ರ ಮುಖಭಂಗ ಎದುರಿಸಿದ್ದ ರಾಜ್ಯ ಸರ್ಕಾರ ಈ ವರ್ಷ ಮತ್ತೆ ಕೈ ಚಾಚಿದೆ. ಈ ಕುರಿತಂತೆ ಎಲ್ಲ ಸರ್ಕಾರಿ ಶಾಲೆಗಳ ಎಸ್​ಡಿಎಂಸಿಗೆ (ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ) ಸುತ್ತೋಲೆ ಕಳಿಸಿ, ಬಡ್ಡಿ ಹಣವನ್ನು ತಕ್ಷಣವೇ ನೀಡುವಂತೆ ತಿಳಿಸಿದೆ.

ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿಯಿಂದ ಈ ಕುರಿತಂತೆ ಮೇ 15ರಂದು ರಾಜ್ಯದ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ. ‘ಸರ್ವ ಶಿಕ್ಷಾ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ’ ಯೋಜನೆಯಲ್ಲಿ ಬಿಡುಗಡೆಯಾದ ಅನುದಾನದ ಬಡ್ಡಿ ಹಣವನ್ನು ಇದುವರೆಗೂ ರಾಜ್ಯ ಕಚೇರಿಗೆ ವರ್ಗಾಯಿಸಲಾಗಿಲ್ಲ. ತಕ್ಷಣವೇ ಅಂಕಿ ಸಂಖ್ಯೆಗಳ ಮಾಹಿತಿಯೊಂದಿಗೆ ಹಣ ವಾಪಸ್ ಮಾಡಬೇಕು’ ಎಂದು ತಿಳಿಸಲಾಗಿದೆ.

ಸರ್ವ ಶಿಕ್ಷಾ ಅಭಿಯಾನದಲ್ಲಿ 2001-02ನೇ ಸಾಲಿನಿಂದ ಪ್ರತಿ ಶಾಲೆಗೆ ನಿರ್ವಹಣೆಗಾಗಿ 20 ಸಾವಿರ ರೂ. ಮತ್ತು ಶಾಲೆ ಅನುದಾನವಾಗಿ 10 ಸಾವಿರ ರೂ. ನೀಡಲಾಗುತ್ತಿದೆ. ಪ್ರತಿ ವರ್ಷ ಜೂನ್ ತಿಂಗಳಿನಲ್ಲಿ ಈ ಹಣ ಬಿಡುಗಡೆಯಾಗಿ, ಶಾಲೆಗಳ ಎಸ್​ಡಿಎಂಸಿ ಖಾತೆಗೆ ಜಮಾ ಆಗುತ್ತಿತ್ತು. ಈ ಹಣವನ್ನು ಬಳಕೆ ಮಾಡಲು ಮಾರ್ಚ್ ಅಂತ್ಯದವರೆಗೆ ಸಮಯಾವಕಾಶವಿರುತ್ತದೆ. ಈ ಅವಧಿಯಲ್ಲಿ ಬ್ಯಾಂಕ್​ಗಳು ನೀಡುವ ಬಡ್ಡಿ ಹಣ ಬಳಕೆ ಮಾಡದಂತೆ ಶಿಕ್ಷಣ ಇಲಾಖೆ ಎಲ್ಲ ಎಸ್​ಡಿಎಂಸಿಗಳಿಗೆ ಆರಂಭದಿಂದಲೇ ಸೂಚಿಸಿದೆ. ಹೀಗಾಗಿ ಕಳೆದ 19 ವರ್ಷಗಳ ಅವಧಿಯಲ್ಲಿ ಶಾಲೆಯ ಕಟ್ಟಡಕ್ಕೆ ಮಂಜೂರಾದ ಹಣ, ಕುಡಿಯುವ ನೀರಿನ ಯೋಜನೆಗೆ ಮಂಜೂರಾದ ಹಣ, ಕಾಂಪೌಂಡ್ ನಿರ್ವಣಕ್ಕೆ ಮಂಜೂರಾದ ಹಣದ ಬಡ್ಡಿಯೂ ಸೇರಿದಂತೆ 10 ಸಾವಿರದಿಂದ 1 ಲಕ್ಷ ರೂ.ವರೆಗೂ ಬಡ್ಡಿ ಹಣ ಎಸ್​ಡಿಎಂಸಿಗಳ ಬ್ಯಾಂಕ್ ಖಾತೆಗಳಲ್ಲಿವೆ. ಈ ಹಣವನ್ನು ವಾಪಸ್ ನೀಡುವ ಬಗ್ಗೆ ರಾಜ್ಯ ಸರ್ಕಾರ 2017-18ರಲ್ಲಿ ಎಲ್ಲ ಶಾಲೆಗಳಿಗೂ ಸೂಚಿಸಿತ್ತು. ಆದರೆ, ಜನಪ್ರತಿನಿಧಿಗಳು, ಸಾರ್ವಜನಿಕರ ಆಕ್ಷೇಪದ ಕಾರಣದಿಂದಾಗಿ ವಾಪಸ್ ಪಡೆಯುವುದನ್ನು ಸರ್ಕಾರ ಕೈ ಬಿಟ್ಟಿತ್ತು. ಈಗ ಮತ್ತೆ ಕೇಳಲಾರಂಭಿಸಿರುವುದು ಎಸ್​ಡಿಎಂಸಿಗಳಿಗೆ ತಲೆನೋವಾಗಿದೆ.

ಈ ಕುರಿತು ‘ವಿಜಯವಾಣಿ’ ಜತೆ ಮಾತನಾಡಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ,‘ಶಿರಸಿ ತಾಲೂಕಿನಲ್ಲಿ 146 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು, 143 ಹಿರಿಯ ಪ್ರಾಥಮಿಕ ಶಾಲೆಗಳು, 11 ಪ್ರೌಢ ಶಾಲೆಗಳಿವೆ. ಸರ್ಕಾರದ ನಿರ್ದೇಶನದಂತೆ ಬಡ್ಡಿಹಣವನ್ನು ಚೆಕ್ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗೆ ನೀಡುವಂತೆ ಎಸ್​ಡಿಎಂಸಿಗಳಿಗೆ ಸೂಚಿಸಿದ್ದೇವೆ. ತಾಲೂಕಿನ ಎಲ್ಲ ಸರ್ಕಾರಿ ಶಾಲೆಗಳಿಂದ 30 ಲಕ್ಷ ರೂ.ಗಳಷ್ಟು ಬಡ್ಡಿ ಹಣವಿದೆ. ಈ ಹಣ ವಾಪಸ್ ಮಾಡಲು ಶನಿವಾರದ ಗಡುವು ನೀಡಲಾಗಿತ್ತಾದರೂ ಸಮಯಾವಕಾಶ ಕಡಿಮೆಯಾಗುವುದರಿಂದ ಸೋಮವಾರದೊಳಗೆ ನೀಡುವಂತೆ ಸೂಚಿಸಿದ್ದೇವೆ’ ಎಂದಿದ್ದಾರೆ.

ಹಳೆಯ ಕಟ್ಟಡಗಳಿರುವ ಶಾಲೆಗಳಲ್ಲಿ ರಿಪೇರಿ ಅಥವಾ ಇನ್ನಾವುದಾದರೂ ಅಭಿವೃದ್ಧಿ ಕಾರ್ಯಕ್ಕೆ ಈ ಬಡ್ಡಿ ಹಣ ಬಳಕೆಗೆ ಅವಕಾಶ ನೀಡಬೇಕಿತ್ತು. ಒಂದೆಡೆ ಶಾಲೆ ಅತಂತ್ರ, ಇನ್ನೊಂದೆಡೆ ಕೈಲಿದ್ದ ಹಣವನ್ನೂ ವಾಪಸ್ ನೀಡಬೇಕಾದ ಸ್ಥಿತಿಯಲ್ಲಿ ನಾವಿದ್ದೇವೆ.
| ಗಂಗಾಧರ ನಾಯ್ಕ, ತೆರಕನಳ್ಳಿ ಸರ್ಕಾರಿ ಶಾಲೆ ಎಸ್​ಡಿಎಂಸಿ ಅಧ್ಯಕ್ಷ

ಬ್ಯಾಂಕ್ ಖಾತೆಯಲ್ಲಿ ಕೇವಲ ಬಡ್ಡಿ ಹಣ ಇದ್ದರೆ, ಕನಿಷ್ಠ ಠೇವಣಿ ಉಳಿಸಿಕೊಂಡು ಉಳಿದ ಹಣವನ್ನು ಚೆಕ್ ಮೂಲಕ ವಾಪಸ್ ಮಾಡುವಂತೆ ಎಸ್​ಡಿಎಂಸಿ ಅಧ್ಯಕ್ಷರಿಗೆ ಸೂಚಿಸಿದ್ದೇವೆ.
| ಸದಾನಂದ ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಿರಸಿ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...