ಚಿತ್ರದುರ್ಗ: ಜೋಗಿಮಟ್ಟಿ ರಸ್ತೆಯ ಅನುಪಮಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುವಾರ ವಿಶೇಷವಾಗಿ ಆಚರಿಸಲಾಯಿತು.
ಶಾಲೆಯ ನೂರಾರು ವಿದ್ಯಾರ್ಥಿಗಳು ಬಹು ಉತ್ಸುಕತೆಯಿಂದ ಪಾಲ್ಗೊಂಡು ದೇಶಭಕ್ತಿಯ ಸಿಂಚನ ಹರಿಸಿದರು. ಭಾರತದಲ್ಲಿನ ಎಲ್ಲ ರಾಜ್ಯಗಳ ಉಡುಗೆ ಧರಿಸಿ, ವಿವಿಧತೆಯಲ್ಲಿ ಏಕತೆ, ಅಲ್ಲಿನ ಸಂಸ್ಕೃತಿ ಅನಾವರಣಗೊಳಿಸಿದರು. ಸಾಂಸ್ಕೃತಿಕ ಕಾರ್ಯಕ್ರಮ, ಏಕಪಾತ್ರಾಭಿನಯ ನಡೆಸಿಕೊಟ್ಟರು.
ಸ್ಕೂಲ್‌ನ ಅಧ್ಯಕ್ಷ ಎಸ್.ಭಾಸ್ಕರ್, ಕಾರ್ಯದರ್ಶಿ ಎಸ್.ಬಿ.ರಕ್ಷಣ್, ಪ್ರಾಚಾರ್ಯ ಸಿ.ಡಿ.ಸಂಪತ್‌ಕುಮಾರ್, ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿ ಇತರರಿದ್ದರು.