28.5 C
Bengaluru
Monday, January 20, 2020

ಅನುವುಗಾರರಿಗಿಲ್ಲ ಆಸರೆ

Latest News

ವಿಪಕ್ಷ ನಾಯಕ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಲಿ: ಜಿ. ಪರಮೇಶ್ವರ್

ಬೆಂಗಳೂರು: ವಿಪಕ್ಷ ನಾಯಕ ಸ್ಥಾನ ಮತ್ತು ಕಾಂಗ್ರಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನ ಪ್ರತ್ಯೇಕವಾಗಿರಲಿ ಎಂಬ ಅಭಿಪ್ರಾಯವನ್ನು ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಗುರುತು ಪತ್ತೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ.ವಿಮಾನ ನಿಲ್ದಾಣದಲ್ಲಿರುವ ಸಿಸಿಟಿವಿಯಲ್ಲಿ ಬಾಂಬ್​ ಇಟ್ಟ ವ್ಯಕ್ತಿಯ ದೃಶ್ಯ ಪತ್ತೆಯಾಗಿದೆ.ಶಂಕಿತ...

ವಸತಿ ಸಹಾಯಧನ ಹೆಚ್ಚಳ ಕೋರಿ ಪ್ರಧಾನಿ ಬಳಿ ರಾಜ್ಯದ ನಿಯೋಗ : ವಸತಿ ಸಚಿವ ವಿ.ಸೋಮಣ್ಣ

ಬೆಂಗಳೂರು: ವಿಧಾನ ಸೌಧ ಕೊಠಡಿಯಲ್ಲಿ ಬೆಂಗಳೂರು ನಗರ ವಸತಿ ಯೋಜನೆ ಕುರಿತು ಸಂಸದ, ಶಾಸಕರ ಸಭೆಯಲ್ಲಿ ಸೋಮವಾರ ಈ ವಿಷಯ ತಿಳಿಸಿದರು.ಕೇಂದ್ರ ಸಹಾಯಧನ...

ಜೂಜುಕೋರರ ಗಡಿಪಾರು ಖಚಿತ: ಎಸ್‌ಪಿ ವಂಶಿಕೃಷ್ಣ ಎಚ್ಚರಿಕೆ

ಪಾವಗಡ: ಮಟ್ಕಾ ಮತ್ತು ಇಸ್ಪೀಟು ಆಡುವವರನ್ನು ಮತ್ತು ಆಡಿಸುವವರನ್ನು ಗಡಿಪಾರು ವಾಡಲು ಪೊಲೀಸ್ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಜಿಲ್ಲಾ ಎಸ್‌ಪಿ ಡಾ.ಕೆ.ವಂಶಿಕೃಷ್ಣ...

ವಿಶ್ವಶಾಂತಿಗೆ ಸಂತರ ಮಾರ್ಗದರ್ಶನ ಅಗತ್ಯ: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ತುಮಕೂರು: ವಿಶ್ವವೇ ಸಂಕಷ್ಟದ ಸನ್ನಿವೇಶದಲ್ಲಿದ್ದು ಜನರ ಭಯ ತೊಲಗಿಸಲು ಸುಖ-ಶಾಂತಿ ನೆಲೆಸಲು ಸಂತರ ಮಾರ್ಗದರ್ಶನ ಅಗತ್ಯವಿದೆ ಎಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಸಿದ್ಧಗಂಗಾ...

ವಾದಿರಾಜ ವ್ಯಾಸಮುದ್ರ ಕಲಬುರಗಿ
ನಿರ್ದಿಷ್ಟ ಸಂಬಳವೂ ಇಲ್ಲ, ಸೇವಾ ಭದ್ರತೆಯೂ ಇಲ್ಲ. ಸರ್ಕಾರದ ನಿಷ್ಕಾಳಜಿಗೂ ಇವರು ಒಳಗಾಗಿದ್ದಾರೆ. ಆದರೂ ಕೃಷಿ ಇಲಾಖೆಯ ಪ್ರತಿಯೊಂದು ಯೋಜನೆ ಲಾಭ ರೈತರಿಗೆ ಮುಟ್ಟಿಸುವಂಥ ಕೆಲಸವನ್ನು ಚಾಚೂತಪ್ಪದೆ ಮಾಡಿ ಈಗ ಅನಾಥರಾಗಿದ್ದಾರೆ. ಇದು ರಾಜ್ಯದ ರೈತ ಅನುವುಗಾರರೆಂದು ಕೆಲಸ ಮಾಡುತ್ತಿದ್ದವರ ದುಸ್ಥಿತಿ.
ಇಲಾಖೆಯ ಒಂದು ಯೋಜನೆ ಬಗ್ಗೆ ರೈತರಿಗೆ ತಿಳಿಸಿಕೊಟ್ಟರೆ 50ರಿಂದ 100 ರೂಪಾಯಿ ಕಮೀಷನ್ ಸಿಗುತ್ತದೆ. ಇದೇ ಇವರಿಗೆ ಜೀವನಾಧಾರ. ರಾಜ್ಯದಲ್ಲಿ 6500 ಅನುವುಗಾರರಿದ್ದರು. ಜಿಲ್ಲೆಯಲ್ಲಿ ಸುಮಾರು 260 ಇದ್ದರು. 2008ರಲ್ಲಿ ಬಿ.ಎಸ್. ಯಡಿಯೂರಪ್ಪ ಸರ್ಕಾರವಿದ್ದಾಗ ಭೂಚೇತನ ಯೋಜನೆಯಡಿ ರೈತ ಅನುವುಗಾರರ ಸೇವೆಯನ್ನು ಮಾಸಿಕ 4000 ಗೌರವಧನದಂತೆ ಕೃಷಿ ಇಲಾಖೆ ಬಳಸಿಕೊಂಡಿತ್ತು. 2015ರಲ್ಲಿ ಭೂಚೇತನ ಯೋಜನೆ ಮುಗಿದಿದ್ದರಿಂದ ಗೌರವಧನ ಕೊಡುವುದನ್ನು ನಿಲ್ಲಿಸಲಾಗಿದೆ. ಅಲ್ಲದೆ ಅನುವುಗಾರ ಎಂಬುವರೇ ಇಲ್ಲ ಎಂದು ಸಿದ್ದರಾಮಯ್ಯ ಸರ್ಕಾರ ಹೇಳಿಬಿಟ್ಟಿದೆ.
ಕೃಷಿ ಇಲಾಖೆಯಲ್ಲಿ ಮೊದಲು ಗ್ರಾಮ ಸಹಾಯಕ ಹುದ್ದೆಗಳಿದ್ದವು. ಗ್ರಾಮ ಸಹಾಯಕರು ಕೃಷಿ ಯೋಜನೆಗಳನ್ನು ರೈತರಿಗೆ ಮುಟ್ಟಿಸುವ ಕೆಲಸ ಮಾಡುತ್ತಿದ್ದರು. ಈ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದವರೆಲ್ಲ ನಿವೃತ್ತರಾಗಿದ್ದು, ಹೊಸದಾಗಿ ಭರ್ತಿ  ನಡೆದಿಲ್ಲ. ಹೀಗಾಗಿ ಇವರ ಕೆಲಸಗಳನ್ನು ಈಗ ಅನುವುಗಾರರು ಮಾಡುತ್ತಿದ್ದರು. ಆದರೆ ತಮಗೆ ಗೌರವಧನ ನೀಡುತ್ತಿಲ್ಲ ಎಂದು ಅಳಲು ತೋಡಿಕೊಂಡ ಇವರು ಶ್ರಮಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರಯ್ಯ ಹಿರೇಮಠ ನೇತೃತ್ವದಲ್ಲಿ ಹೋರಾಟಕ್ಕೆ ಇಳಿದಿದ್ದು, ತಮ್ಮನ್ನು ಅನವುಗಾರರೆಂದು ಗುರುತಿಸಿ ಮಾಸಿಕ 10 ಸಾವಿರ ಗೌರವಧನ ನೀಡುವಂತೆ ಒತ್ತಾಯಿಸಿದ್ದಾರೆ.
ಹಿಂದಿನ ಸಮ್ಮಿಶ್ರ ಸರ್ಕಾರದಲ್ಲಿ ಕೃಷಿ ಸಚಿವರಾಗಿದ್ದ ಶಿವಶಂಕರರೆಡ್ಡಿ ಅವರನ್ನು ನಿಯೋಗ ಭೇಟಿ ಮಾಡಿದಾಗ ಮನವಿಗೆ ಸ್ಪಂದಿಸಿ ಹಣಕಾಸು ಇಲಾಖೆ ಅನುಮತಿ ಕೋರಿದ್ದರು. ನಂತರ ಸರ್ಕಾರ ಬದಲಾಗಿದ್ದರಿಂದ ಮತ್ತು ಹಣಕಾಸು ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿದ್ದರಿಂದ ಬೇಡಿಕೆ ಹಾಗೆಯೇ ಉಳಿದಿದೆ.

ಸರ್ಕಾರ ಅನುವುಗಾರರನ್ನು ಪುನಃ ಗುರುತಿಸಿ 10 ಸಾವಿರ ರೂ. ಗೌರವಧನ ಕೊಡಲೇಬೇಕು ಎಂದು ಒತ್ತಾಯಿಸಿ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿದರ್ಿಷ್ಟ ನಿರಶನ ನಡೆಸಲು ನಿರ್ಧರಿಸಲಾಗಿದೆ. ಈಗಾಗಲೇ ಅನುವುಗಾರರೆಂದು ಸೇವೆ ಸಲ್ಲಿಸಿದ 5000 ಜನ ಪಾಲ್ಗೊಳ್ಳುವ ನಿರೀಕ್ಷೆ ಇದೆ.
| ಚಂದ್ರಶೇಖರ ಹಿರೇಮಠ
ಅಧ್ಯಕ್ಷ, ಶ್ರಮಜೀವಿಗಳ ವೇದಿಕೆ ಕಲಬುರಗಿ

ಕೃಷಿ ಇಲಾಖೆಯಲ್ಲಿ ಈಗ ಅನುವುಗಾರರು ಎಂಬುವವರೇ ಇಲ್ಲ. ರೈತರಿಗೆ ತರಬೇತಿ ಕೊಡಲು ತಾಂತ್ರಿಕ ಸಹಾಯಕರೆಂದು ಕೆಲವರು ಕೆಲಸ ಮಾಡುತ್ತಿದ್ದಾರೆ. ಅನುವುಗಾರರ ಸೇವಾವಧಿ ಮುಗಿದಿದ್ದರಿಂದ ಹಿಂದಿನ ಕೃಷಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ತೆಗೆದು ಹಾಕಿದ್ದಾರೆ.
| ಹೆಸರು ಹೇಳಲಿಚ್ಛಿಸದ ಕೃಷಿ ಅಧಿಕಾರಿ

ವಿಡಿಯೋ ನ್ಯೂಸ್

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...