Tuesday, 11th December 2018  

Vijayavani

ಪಂಚರಾಜ್ಯಗಳ ಫಲಿತಾಂಶದಲ್ಲಿ ಕೈ ಆಟ-3 ರಾಜ್ಯಗಳಲ್ಲಿ ಅಧಿಕಾರದತ್ತ ಕಾಂಗ್ರೆಸ್​ - ವರ್ಕೌಟ್​ ಆಗದ ಮೋದಿ - ಅಮಿತ್ ಷಾ ಅಲೆ        ರಾಜಸ್ಥಾನದಲ್ಲಿ ಮ್ಯಾಜಿಕ್ ನಂಬರ್ ಸನಿಹ ಕಾಂಗ್ರೆಸ್-95 ಕ್ಷೇತ್ರದಲ್ಲಿ ಕಾಂಗ್ರೆಸ್, 80 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ        ಮಧ್ಯಪ್ರದೇಶದಲ್ಲಿ ಹಾವು ಏಣಿ ಆಟ - ಕೈ ಕಮಲ ಸಮಬಲದ ಹೋರಾಟ - ಸರ್ಕಾರ ರಚನೆಗೆ ಪಕ್ಷೇತರರೇ ನಿರ್ಣಾಯಕರು        ತೆಲಂಗಾಣದಲ್ಲಿ ನಡೆಯದ ಕೈ-ಕಮಲದ ಆಟ-ಶರವೇಗದಲ್ಲಿ ಮುನ್ನುಗಿದ ಕೆಸಿಆರ್​-ನೂತನ ಸಿಎಂ ಆಗಿ ನಾಳೆ ಪ್ರಮಾಣ ವಚನ        ಛತ್ತೀಸ್​ಗಢದಲ್ಲಿ ಅಧಿಕಾರದತ್ತ ಕಾಂಗ್ರೆಸ್ - ಆಡಳಿತಾರೂಢ ಬಿಜೆಪಿಗೆ ಭಾರಿ ಮುಖಭಂಗ        ಮಿಜೋರಾಂನಲ್ಲಿ ಕಾಂಗ್ರೆಸ್​​​ಗೆ ಭಾರಿ ಮುಖಭಂಗ - ಅಧಿಕಾರದ ಗದ್ದುಗೆ ಹಿಡಿದ ಎಂಎನ್​​​ಎಫ್​ - 25 ಕ್ಷೇತ್ರಗಳಲ್ಲಿ ಭರ್ಜರಿ ಮುನ್ನಡೆ       
Breaking News

ಅನುಷ್ಕಾ ಶರ್ಮಗೂ ಆಹ್ವಾನವಿತ್ತು

Friday, 10.08.2018, 3:02 AM       No Comments

ಮುಂಬೈ: ಟೀಮ್ ಇಂಡಿಯಾದ ಅಧಿಕೃತ ಕಾರ್ಯಕ್ರಮದಲ್ಲಿ ನಾಯಕ ವಿರಾಟ್ ಕೊಹ್ಲಿ ಜತೆ ಪತ್ನಿ ಹಾಗೂ ನಟಿ ಅನುಷ್ಕಾ ಶರ್ಮ ಭಾಗವಹಿಸಿದ್ದು ವಿವಾದವಾದ ಬೆನ್ನಲ್ಲಿಯೇ ಬಿಸಿಸಿಐ ಇದಕ್ಕೆ ಸ್ಪಷ್ಟನೆ ನೀಡಿದೆ. ಲಂಡನ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಕಾರ್ಯಕ್ರಮಕ್ಕೆ ಅನುಷ್ಕಾ ಶರ್ಮರಿಗೂ ಆಹ್ವಾನವಿತ್ತು. ಹಾಗಾಗಿಯೇ ಅವರು ಭಾಗವಹಿಸಿದ್ದರು ಎಂದು ಬಿಸಿಸಿಐ ಹೇಳಿದೆ. ಆಟಗಾರರು ಪತ್ನಿಯರೊಂದಿಗೆ ಬರಲು ಆಹ್ವಾನವಿತ್ತು. ಇದರಲ್ಲಿ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ರಾಯಭಾರಿ ಕಚೇರಿ ಕೂಡ ಇದರಲ್ಲಿ ಯಾವುದೇ ನಿಯಮ ಉಲ್ಲಂಘನೆ ಆಗಿಲ್ಲ ಎಂದು ಖಚಿತಪಡಿಸಿದೆ.

Leave a Reply

Your email address will not be published. Required fields are marked *

Back To Top