ಅಪಘಾತದಲ್ಲಿ ಬೈಕ್​ ಸವಾರ ಮೃತ

ತುರುವೇಕೆರೆ: ತಾಲೂಕಿನ ಗೋಣಿತುಮಕೂರಿನಲ್ಲಿ ಬುಧವಾರ ಕೆಎಸ್​ಆರ್​ಟಿಸಿ ಬಸ್​ ಮತ್ತು ದ್ವಿಚಕ್ರವಾಹನ ಮುಖಾಮುಖಿ ಡಿಕ್ಕಿಯಾಗಿ ಬೈಕ್​ ಸವಾರ ಮೃತಪಟ್ಟಿದ್ದು, ಹಿಂಬದಿಸವಾರ ಗಾಯಗೊಂಡಿದ್ದಾನೆ. ತಾಲೂಕಿನ ದಬ್ಬೇಟ್ಟ ಹೋಬಳಿಯ ಹಿಂಡುಮಾರನಹಳ್ಳಿಯ ನಿವಾಸಿ ದೀಪಕ್​(32)ಮೃತ. ಹಿಂಬದಿಸವಾರ ಅದೇ ಗ್ರಾಮದ ಪುಟ್ಟಸ್ವಾಮಿ(35) ಗಾಯಗೊಂಡಿದ್ದಾರೆ. ಇಬ್ಬರೂ ಪಟ್ಟಣದ ಬೆಸ್ಕಾಂ ಕಚೇರಿಗೆ ಭೇಟಿ ನೀಡಿ ಗ್ರಾಮಕ್ಕೆ ಹಿಂತಿರುಗುವಾಗ ಗೋಣಿತುಮಕೂರು ಗ್ರಾಮದ ದೇವಸ್ಥಾನದ ಸಮೀಪ ದಬ್ಬೇಟ್ಟದಿಂದ ತುರುವೇಕೆರೆ ಕಡೆಗೆ ಬರುತ್ತಿದ್ದ ಬಸ್​ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ತಲೆಗೆ ಪೆಟ್ಟುಬಿದ್ದು ತೀವ್ರ ಗಾಯಗೊಂಡಿದ್ದ ದೀಪಕ್​ ಅವರನ್ನು ತಕ್ಷಣ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹಿಂಬದಿಯ ಸವಾರ ಪಟ್ಟಸ್ವಾಮಿಗೆ ಗಂಭೀರ ಗಾಯಗಳಾಗಿದ್ದರಿಂದ ಐಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯಲಾಗಿದೆ. ದೀಪಕ್​ ವಿವಾಹವಾಗಿ ಕೇವಲ ಒಂದು ವರ್ಷವಷ್ಟೇ ಕಳೆದಿದ್ದು, ಮೃತರ ಸಂಬಂಧಿಕರ ರೋಧನ ಮುಟ್ಟಿದೆ. ಪಟ್ಟಣದ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರಿನ ಗ್ಲಾಸ್​ ಒಡೆದು 15 ಲಕ್ಷ ರೂ. ಕಳವು

ಗುಬ್ಬಿ: ಪಟ್ಟಣದ ಎಪಿಎಂಸಿ ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್​ ಒಡೆದು 15 ಲಕ್ಷ ರೂ. ದೋಚಿದ್ದಾರೆ. ತಾಲೂಕಿನ ಕಡಬ ಹೋಬಳಿ ಡಿ.ರಾಂಪುರದ ಕೊಬ್ಬರಿ ವರ್ತಕ ಶಿವರಾಜು ಬ್ಯಾಂಕಿನಿಂದ ಹಣ ಬಿಡಿಸಿಕೊಂಡು ಕಾರ್ಯನಿಮಿತ್ತ ಪಟ್ಟಣದ ಎಪಿಎಂಸಿ ಕಚೇರಿಗೆ ತೆರಳಿದ್ದ ವೇಳೆ ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಗ್ಲಾಸ್​ ಒಡೆದು ಹಣ ದೋಚಿದ್ದಾರೆ.
ಕಚೇರಿಯ ಒಳಗೆ ಹೋಗಿ ಬಂದು ನೋಡಿದಾಗ ಟನೆ ತಿಳಿದಿದ್ದು, ಗುಬ್ಬಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…