25.7 C
Bangalore
Sunday, December 15, 2019

ಅಪಾಯಕಾರಿಯಾಗಿದೆ ಕೇಬಲ್ ಅಳವಡಿಕೆ ಹೊಂಡ

Latest News

ಗಾಂಧೀಜಿಯವರ ವಿಚಾರಧಾರೆ ದಾರಿದೀಪವಾಗಲಿ

ವಿಜಯಪುರ: ಗಾಂಧೀಜಿ ಅವರ ವಿಚಾರಧಾರೆಗಳು ನಮ್ಮ ಬದುಕಿಗೆ ದಾರಿ ದೀಪವಾಗಲಿ ಎಂದು ಧಾರವಾಡದ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಂಜೀವ ಕುಲಕರ್ಣಿ ಹೇಳಿದರು.ನಗರದ...

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮದುಮಗಳು; ಮದುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮದುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ಹರಿಪ್ರಸಾದ್ ನಂದಳಿಕೆ ಬೆಳ್ಮಣ್

ಸಾರ್ವಜನಿಕರು, ದಾರಿಹೋಕರು ಸಾಗುವ ರಾಜ್ಯ ಹೆದ್ದಾರಿಗೆ ತಾಗಿಕೊಂಡೇ ಪೇಟೆ ಪ್ರದೇಶದಲ್ಲಿ ಕೇಬಲ್ ಅಳವಡಿಕೆ ನೆಪದಲ್ಲಿ ಅಲ್ಲಲ್ಲಿ ಬೃಹತ್ ಗಾತ್ರದ ಹೊಂಡ ನಿರ್ಮಿಸಿದ್ದು ಪ್ರಾಣಬಲಿಗಾಗಿ ಕಾಯುವಂತಿದೆ.

ಕಾರ್ಕಳದಿಂದ ಪಡುಬಿದ್ರಿವರೆಗೂ ರಸ್ತೆ ಬದಿ ಹೊಂಡಗಳನ್ನು ನಿರ್ಮಿಸಿದ್ದು ಸಮಸ್ಯೆ ಉಂಟು ಮಾಡಿದೆ. ಬೆಳ್ಮಣ್ ದೇವಸ್ಥಾನಕ್ಕೆ ತೆರಳುವ ರಸ್ತೆ ಪಕ್ಕದಲ್ಲೇ ಕೇಬಲ್ ಅಳವಡಿಸಲು ತೋಡಿದ ಗುಂಡಿಗೆ ತಿಂಗಳು ಎರಡು ಕಳೆದರೂ ಹೊಂಡ ಮುಚ್ಚುವ ಕಾರ್ಯಕ್ಕೆ ಸಂಬಂಧಿಸಿದ ಗುತ್ತಿಗೆದಾರ ಮನಸ್ಸು ಮಾಡುತ್ತಿಲ್ಲ. ಇದರಿಂದ ನಿತ್ಯ ನೂರಾರು ಜನ ಈ ದಾರಿಯಲ್ಲಿ ನಡೆದಾಡುವಾಗ ಸಮಸ್ಯೆಯಾಗುತ್ತಿದೆ.

ವಿದ್ಯಾರ್ಥಿಗಳಿಗೆ ಸಮಸ್ಯೆ: ಬೆಳ್ಮಣ್ ಸರ್ಕಾರಿ ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಇದೇ ಹೊಂಡ ದಾಟಿ ಹೋಗಬೇಕಾದ ಅನಿವಾರ್ಯತೆ ಇದೆ. ರಸ್ತೆಯ ಅಂಚಿನಲ್ಲಿರುವ ಈ ಹೊಂಡ ನಿತ್ಯ ಸಮಸ್ಯೆ ಸೃಷ್ಟಿಸುತ್ತಿದೆ. ನೂರಾರು ವಿದ್ಯಾರ್ಥಿಗಳು ಈ ಹೊಂಡದ ಪಕ್ಕದಲ್ಲೇ ಸಾಗಬೇಕಿದ್ದು, ಈಗಾಗಲೇ ಹಲವು ವಿದ್ಯಾರ್ಥಿಗಳು ಹಾಗೂ ದಾರಿಹೋಕರು ಹೊಂಡದಲ್ಲಿ ಬಿದ್ದು ಗಾಯಗೊಂಡ ನಿದರ್ಶನವೂ ಸಾಕಷ್ಟಿದೆ.

ಹೊಂಡದ ಸಮಸ್ಯೆ ಬೆಳ್ಮಣ್ ಪೇಟೆ ಪ್ರದೇಶದಲ್ಲಿ ಮಾತ್ರವಲ್ಲ, ಬದಲಾಗಿ ಕಾರ್ಕಳದಿಂದಲೇ ಇದ್ದು ನಿತ್ಯ ಸಮಸ್ಯೆ ಉಂಟು ಮಾಡುತ್ತಿದೆ. ಸಾಂತೂರು ಕೊಪ್ಪಳ ಬಳಿ ವಿದ್ಯುತ್ ಪರಿವರ್ತಕದ ಸಮೀಪ ಕೇಬಲ್ ಅಳವಡಿಕೆ ನೆಪದಲ್ಲಿ ಹೊಂಡ ತೋಡಿದ್ದು ನಾಲ್ಕು ತಿಂಗಳು ಕಳೆದರೂ ಮುಚ್ಚಿಲ್ಲ.

ರಸ್ತೆಯ ಪಕ್ಕದಲ್ಲೇ ಸಾರ್ವಜನಿಕರು ಅತ್ತಿತ್ತ ಸಾಗುವ ಪರಿಸರದಲ್ಲಿ ಹೊಂಡವನ್ನು ನಿರ್ಮಿಸಿದ್ದು ತುಂಬ ಅಪಾಯಕಾರಿಯಾಗಿದೆ. ಈಗಾಗಲೇ ಹಲವು ಬಾರಿ ಹೊಂಡ ಮುಚ್ಚುವಂತೆ ತಿಳಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ .

ರತ್ನಾಕರ್ ಶೆಣೈ ಸ್ಥಳೀಯ ನಿವಾಸಿ

ಕೇಬಲ್ ಅಳವಡಿಕೆ ನೆಪದಲ್ಲಿ ಹೊಂಡವನ್ನು ಅಲ್ಲಲ್ಲಿ ನಿರ್ಮಿಸಿದ್ದು ನಡೆದಾಡಲು ಕಷ್ಟವಾಗುತ್ತಿದೆ. ನಾವೇ ಹಲವು ಬಾರಿ ಹೊಂಡದ ಬಿದ್ದು ಗಾಯಗೊಂಡಿದ್ದೇವೆ.

ನಾಗರಾಜ್ ಬೆಳ್ಮಣ್ ಗ್ರಾಮಸ್ಥ

ನಿತ್ಯ ಕಾಲೇಜಿಗೆ ಹೋಗಬೇಕಾದರೆ ಹೊಂಡ ದಾಟಿಕೊಂಡೇ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಈ ಹೊಂಡಕ್ಕೆ ಹಲವಾರು ವಿದ್ಯಾರ್ಥಿಗಳು ಬಿದ್ದ ನಿದರ್ಶನವಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹೊಂಡವನ್ನು ಮುಚ್ಚುವ ಕಾರ್ಯ ಮಾಡಬೇಕಾಗಿದೆ.

ಸುಪ್ರಿಯಾ ವಿದ್ಯಾರ್ಥಿನಿ

ಕೇಬಲ್ ಅಳವಡಿಕೆಗಾಗಿ ನಿರ್ಮಿಸಿರುವ ಹೊಂಡ ಮುಚ್ಚದಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಕೂಡಲೇ ಗುತ್ತಿಗೆದಾರರನ್ನು ಸಂಪರ್ಕಿಸಿ ಹೊಂಡವನ್ನು ಮುಚ್ಚುವಂತೆ ಕ್ರಮ ಕೈಗೊಳ್ಳುತ್ತೇವೆ.

ರೇಶ್ಮಾ ಶೆಟ್ಟಿ ಜಿಲ್ಲಾ ಪಂಚಾಯಿತಿ ಸದಸ್ಯೆ ಬೆಳ್ಮಣ್.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...