ಶಹಾಪುರ: ಗರ್ಭಿಣಿಯರು ಪೌಷ್ಟಿಕ ಆಹಾರ ಸೇವಿಸುವುದರಿಂದ ಹೆರಿಗೆ ವೇಳೆ ಉಂಟಾಗುವ ಅನೇಕ ಸಮಸ್ಯೆಯಿಂದ ಪಾರಾಗಬಹುದು. ಅಲ್ಲದೆ ಅಪೌಷ್ಟಿಕತೆ ನಿವಾರಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಹೆಚ್ಚುವರಿ ನ್ಯಾಯಾಧೀಶ ಬಸವರಾಜ ಹೇಳಿದರು.
ನಗರದ ಯ¯್ಲÁಲಿಂಗ ಕಲ್ಯಾಣ ಮಂಟಪದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಪೌಷ್ಟಿಕ ಆಹಾರ ಕುರಿತು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪೌಷ್ಟಿಕಾಂಶ ಎಲ್ಲರಿಗೂ ಬೇಕು. ಅದರಲ್ಲೂ ಗರ್ಭಿಣಿಯರಿಗೆ ಮತ್ತು ಮಕ್ಕಳಿಗೆ ಇದು ಬಹಳ ಅಗತ್ಯವಾಗಿದೆ. ಆದರೆ ಇತ್ತೀಚೆಗೆ ಮಕ್ಕಳು ಮಾತ್ರವಲ್ಲದೆ ಯುವಕರಲ್ಲೂ ಅಪೌಷ್ಟಿಕತೆ ಹಾಗೂ ವಿಟಮಿನ್ ಡಿ ಕೊರತೆ ಹೆಚ್ಚಾಗಿದೆ ಕಂಡುಬರುತ್ತಿರುವುದು ಕಳವಳಕಾರಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಡುವಿಲ್ಲದ ಬದುಕಿನಲ್ಲಿ ಪೌಷ್ಟಿಕಾಂಶ ಭರಿತ ಆಹಾರ ಮರೆತೇ ಬಿಟ್ಟಿz್ದೆÃವೆ. ಸಿದ್ಧ ಆಹಾರ, ಎಣ್ಣೆ ಪದಾರ್ಥ ಹಾಗೂ ಸತ್ವರಹಿತ ತಿನಿಸು ಸೇವಿಸಿ ನಮ್ಮ ಆರೋಗ್ಯದ ಮೇಲೆ ನಾವೇ ಕಲ್ಲು ಹಾಕಿಕೊಳ್ಳುತ್ತಿz್ದÉÃವೆ. ಜನರಲ್ಲಿ ಆರೋಗ್ಯಕ್ಕೆ ಪೌಷ್ಟಿಕ ಆಹಾರದ ಮಹತ್ವ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಲ್ಲಣ್ಣ ದೇಸಾಯಿ ಮಾತನಾಡಿ, ಮಕ್ಕಳಲ್ಲಿ ಮತ್ತು ಮಹಿಳೆಯರಲ್ಲಿ ಅಪೌಷ್ಟಿಕತೆ ಕಡಿಮೆ ಮಾಡುವ ಉz್ದÉÃಶದಿಂದ ಕೇಂದ್ರ ಸರ್ಕಾರವು ೨೦೧೮ರ ಸೆಪ್ಟೆಂಬರ್‌ನಲ್ಲಿ ಪೋಷಣ್ ಅಭಿಯಾನ ಆರಂಭಿಸಿತ್ತು. ಇಲಾಖೆಯಿಂದ ಈಗಾಗಲೇ ಗರ್ಭಿಣಿ, ಬಾಣಂತಿಯರಿಗೆ ಶಿಶು, ಕಿಶೋರಿಯರಿಗೆ ಆರೋಗ್ಯ ತಪಾಸಣೆ ಶಿಬಿರ, ತೂಕ ಮತ್ತು ಆರೋಗ್ಯ, ಪೂರಕ ಪೌಷ್ಟಿಕ ಆಹಾರದ ಮಹತ್ವ ಕುರಿತು ವರ್ಷವಿಡಿ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಹಿರಿಯ ನ್ಯಾಯವಾದಿ ಬಸಮ್ಮ ರಾಟಪುರ ಮಾತನಾಡಿದರು. ಈ ವೇಳೆ ಪ್ರಧಾನ ನ್ಯಾಯಾಧೀಶೆ ಶೋಭಾ, ತಾಪಂ ಅಧಿಕಾರಿ ಸೋಮಶೇಖರ ಬಿರಾದಾರ, ಸಿದ್ದಣ್ಣ ಬಿರಾದಾರ, ಡಾ.ಅಭಿಷೇಕ ರೆಡ್ಡಿ, ಡಾ.ಗುರುರಾಜ, ಶಾಮಸುಂದರ ನಾಯಕ, ಅಮರೇಶ್ ಇಟಗಿ, ಜೈಲಾಲï, ಸಿದ್ದರಾಮಪ್ಪ ಇತರರಿದ್ದರು.