ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 10ವರ್ಷ ಶಿಕ್ಷೆ

ಬೆಳಗಾವಿ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆರೋಪಿಗೆ 10ವರ್ಷ ಶಿಕ್ಷೆ ಹಾಗೂ 30 ಸಾವಿರ ರೂ.ದಂಡ‌ ವಿಧಿಸಿ ೩ನೇ ಅಧಿಕ‌ ಹಾಗೂ ಹೆಚ್ಚುವರಿ ಜಿಲ್ಲಾ ಸತ್ರ‌ ನ್ಯಾಯಾಲಯ ತೀರ್ಪು ನೀಡಿದೆ.
ಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಆರೋಪಿ ಬಾಬಾಜಾನ ಮೋದಿನಸಾಬ ಹಾತಿ ಎಂಬಾತನೇ ಶಿಕ್ಷೆಗೆ ಗುರಿಯಾದ ಆರೋಪಿಯಾಗಿದ್ದಾನೆ.
ಈತ ಚಾಲಕನಾಗಿ ಕೆಲಸ‌ ಮಾಡುತ್ತಿದ್ದ. ಗೋಕಾಕ ಶಹರದ ಪರಿಚಯಸ್ಥರ ಮನೆಯಲ್ಲಿ ವಾಸವಾಗಿದ್ದ ಬಾಲಕಿ ಮೇಲೆ 2014ರಲ್ಲಿ ಅತ್ಯಾಚಾರವೆಸಗಿದ್ದ. ಈ ಕುರಿತು ಗೋಕಾಕ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ. ನಂಜುಂಡಯ್ಯ ಅವರು, ಆರೋಪಿಗೆ 10 ವರ್ಷ ಶಿಕ್ಷೆ ಹಾಗೂ 30 ಸಾವಿರ ದಂಡ‌ವಿಧಿಸಿ ತೀರ್ಪು ನೀಡಿದ್ದಾರೆ. ಕಕ್ಷಿದಾರರ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಲ್.ವಿ.ಪಾಟೀಲ ವಕಾಲತ್ತು ವಹಿಸಿದ್ದರು.