ಅಬಕಾರಿ ಡಿಸಿ ವಿರುದ್ಧದ ಭ್ರಷ್ಟಾಚಾರದ ಪ್ರಕರಣ ವಜಾ

blank
blank

ಚಿತ್ರದುರ್ಗ:ಹಿಂದಿನ ಜಿಲ್ಲಾ ಅಬಕಾರಿ ಉಪ ಆಯುಕ್ತ ನಾಗಶಯನ ಅವರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ಪರವಾನಗಿ ನವೀಕರಣಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅವರ ಬೇಡಿಕೆಗೆ ಪೂರಕವಾಗಿ ಅಲ್ಪ ಪ್ರಮಾ ಣದಲ್ಲಿ ಹಣವನ್ನು ಅವರ ಕಾರು ಚಾಲಕನ ಕಡೆ ಕೊಡಲಾಗಿದೆ ಎಂದು ನಗರದ ಹೋಟೆಲ್ ಉದ್ಯಮಿ ಜಿ.ಟಿ.ಬಾಬುರೆಡ್ಡಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡಿದ್ದ ಅಂದಿನ ಎಸಿಬಿ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ತಮ್ಮ ಮೇಲಿನ ಆರೋಪ ನಿರಾಕರಿಸಿ ನಾಗಶಯನ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ನಾಗಶಯನ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿತ್ತು. ಈ ತೀರ್ಪು ಪ್ರಶ್ನಿಸಿ ದೂರುದಾರರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದು, ನಾಗಶಯನ ಅವರನ್ನು ಆರೋಪಮುಕ್ತರನ್ನಾಗಿಸಿದೆ.

Share This Article

Raw Milkನಿಂದ ಹೊಳೆಯುವ ತ್ವಚೆ! ಹಸಿ ಹಾಲಿನಲ್ಲಿ ಇವುಗಳನ್ನು ಬೆರೆಸಿ ಹಚ್ಚಿಕೊಳ್ಳಿ ಸಾಕು..

Raw Milk Beauty Tips: ಹಾಲು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದಿದೆ. ಹಾಲು…

Health Tips | ಕರಿಬೇವು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ: ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ..

ಅಡುಗೆಯಲ್ಲಿ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವ ಸಲುವಾಗಿ ಕರಿಬೇವನ್ನು ಉಪಯೋಗಿಸುತ್ತಾರೆ. ಇದರಿಂದ ಆರೋಗ್ಯಕ್ಕೂ ಎಷ್ಟೆಲ್ಲಾ ಪ್ರಯೋಜನ…