ಅಮ್ಮನಲ್ಲೂರು ಹಾಸ್ಟೆಲ್ ಘಟನೆ ಅಡುಗೆ ಸಿಬ್ಬಂದಿ ನರಸಿಂಹಪ್ಪ ಅಮಾನತ್ತು / ಚನ್ನಬಸಪ್ಪಗೆ ನೋಟೀಸ್

ವಿಜಯವಾಣಿ ಸುದ್ದಿಜಾಲ ಕೋಲಾರ
ತಾಲ್ಲೂಕಿನ ಅಮ್ಮನಲ್ಲೂರು ಗ್ರಾಮದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ೧೮ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಅಡುಗೆ ಸಿಬ್ಬಂದಿ ನರಸಿಂಹಪ್ಪ ಅವರನ್ನು ಅಮಾನತ್ತುಗೊಳಿಸಲಾಗಿದೆ.

ಈ ಘಟನೆ ಕುರಿತಂತೆ ಖುದ್ದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತ ರಾಕೇಶ್ ಕುಮಾರ್ ವಿದ್ಯಾರ್ಥಿ ನಿಲಯಕ್ಕೆ ಭಾನುವಾರ ಭೇಟಿ ನೀಡಿದ್ದು, ಅಡುಗೆ ಸಿಬ್ಬಂದಿ ನರಸಿಂಹಪ್ಪ ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿದ್ದು, ಇಲಾಖಾ ವಿಚಾರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ. ಘಟನೆ ಕುರಿತು ಆಯುಕ್ತರಿಗೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್ ಪತ್ರ ಬರೆದಿದ್ದರು.

ಹಾಸ್ಟೆಲ್‌ನ ವಾರ್ಡನ್ ಗುರುಶಾಂತಪ್ಪ ರಜೆ ಮೇಲೆ ತೆರಳಿದ್ದು, ಅಡುಗೆ ಸಿಬ್ಬಂದಿ ನರಸಿಂಹಪ್ಪ ಅವರೇ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದರು. ಹಾಸ್ಟೆಲ್‌ನಲ್ಲಿ ಸ್ವಚ್ಛತೆ ಕಾಪಾಡಿಲ್ಲ. ವಿದ್ಯಾರ್ಥಿಗಳನ್ನು ನಿಂದಿಸುವುದು, ಹೊಡೆಯುವುದು ಕಂಡು ಬಂದಿದೆ ಎಂದು ಜಂಟಿ ನಿರ್ದೇಶಕರು ಪತ್ರದಲ್ಲಿ ಉಲ್ಲೇಖಿಸಿದ್ದರು.

ಸಹಾಯಕ ನಿರ್ದೇಶಕ ಚನ್ನಬಸಪ್ಪಗೆ ನೋಟಿಸ್ :
ಸಮಾಜ ಕಲ್ಯಾಣ ಇಲಾಖೆ ಕೋಲಾರ ತಾಲ್ಲೂಕಿನ ಸಹಾಯಕ ನಿರ್ದೇಶಕ ಡಿ.ಚನ್ನಬಸಪ್ಪ ಅವರಿಗೆ ನೋಟಿಸ್ ನೀಡಿ, ಕರ್ತವ್ಯ ಲೋಪವೆಸಗಿದ್ದು, ತಮ್ಮ ಮೇಲೆ ಏಕೆ ಶಿಸ್ತು ಕ್ರಮ ವಹಿಸಬಾರದೆಂದು ೧೫ ದಿನಗಳೊಳಗೆ ಸಮಜಾಯಿಷಿ ನೀಡುವಂತೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ. ಹಾಸ್ಟೆಲ್‌ನ ವಾರ್ಡನ್ ರಜೆ ಇದ್ದಾಗ ಮತ್ತೊಬ್ಬ ವಾರ್ಡನ್‌ಗೆ ಪ್ರಭಾರದಲ್ಲಿ ನಿಯೋಜಿಸಬೇಕಿತ್ತು. ಅದನ್ನು ಬಿಟ್ಟು ಅಡುಗೆ ಸಿಬ್ಬಂದಿಗೆ ಜವಾಬ್ದಾರಿ ನೀಡಲಾಗಿದೆ. ಅಲ್ಲದೇ, ಹಾಸ್ಟೆಲ್‌ಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಆಹಾರದ ಗುಣಮಟ್ಟದ ಬಗ್ಗೆ ಗಮನ ಹರಿಸಿಲ್ಲ ಎಂಬುದರ ಬಗ್ಗೆ ವಿವರಣೆ ಕೇಳಿದ್ದಾರೆ.

ಘಟನೆ ಕುರಿತಂತೆ ಶನಿವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಎಂಎಲ್ಸಿ ಎಂ. ಎಲ್ ಅನಿಲ್ ಕುಮಾರ್ ಹಾಸ್ಟೆಲ್‌ಗೆ ತೆರಳಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ವಾರ್ಡನ್ ಹಾಗೂ ಅಡುಗೆ ಸಿಬ್ಬಂದಿಯನ್ನು ಅಮಾನತುಗೊಳಿಸಿ, ವರ್ಗಾವಣೆ ಮಾಡಲು ಸೂಚಿಸಿದರು.

Share This Article

ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…

ಒಂದು ತಿಂಗಳು ಬೇಳೆಕಾಳುಗಳನ್ನು ತಿನ್ನೋದು ಬಿಟ್ಟರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…

ಪೋಷಕರೇ ಹುಷಾರ್‌! ಅಪ್ಪಿತಪ್ಪಿಯೂ ಮಕ್ಕಳ ಮುಂದೆ ಪೋಷಕರು ಈ ಕೆಲಸಗಳನ್ನು ಮಾಡಬೇಡಿ

 ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…