ಅಮ್ಮನಿಗೆ ಪತ್ರ ಬರೆದ ಶಾಲಾ ಮಕ್ಕಳು

blank

ಶನಿವಾರಸಂತೆ: ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಪತ್ರ ಬರೆಯುವ ಅಭಿಯಾನ ಆಯೋಜಿಸಲಾಗಿತ್ತು.
ಪ್ರೌಢಶಾಲೆ ವಿಭಾಗದಿಂದ 15 ಮತ್ತು ಪ್ರಾಥಮಿಕ ಶಾಲಾ ವಿಭಾಗದಿಂದ 25 ವಿದ್ಯಾರ್ಥಿ ಗಳು ಸೇರಿದಂತೆ ಒಟ್ಟು 40 ಮಕ್ಕಳು ಅಮ್ಮನಿ ಗೊಂದು ಪತ್ರ ಶೀರ್ಷಿಕೆಯಡಿ ಪತ್ರ ಬರೆದರು.


ದುಂಡಳ್ಳಿ ಗ್ರಾಪಂ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕಿ ಎಸ್.ಪಿ.ದಿವ್ಯಾ ಮಾತನಾಡಿ, ಮಕ್ಕಳು ಓದುವುದರ ಜತೆಯಲ್ಲಿ ಬರೆಯುವ ಅಭ್ಯಾಸವನ್ನು ಕಲಿಯುವುದು, ಸ್ವಂತ ವಾಕ್ಯ ರಚನೆ ಮಾಡುವ ಕೌಶಲ ಮತ್ತು ಜ್ಞಾನ ಹೆಚ್ಚಿಸುವ ಉದ್ದೇಶದಿಂದ ಮಕ್ಕಳಿಗೆ ಪತ್ರ ಬರೆಯುವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.


ಪತ್ರ ಬರೆಯುವ ಅಭಿಯಾನದಲ್ಲಿ ಭಾಗವಹಿಸಿದ ಮಕ್ಕಳಲ್ಲಿ ಮೌಖಿಕ ಮತ್ತು ಲಿಖಿತ ಕೌಶಲ ಹೆಚ್ಚಾಗುವುದರ ಜತೆಗೆ ಸೃಜನ ಶೀಲ ಬರವಣಿಗೆಗಳ ಬಗ್ಗೆ ಅಭ್ಯಾಸ ಮತ್ತು ಅನುಭವ ಪಡೆದಂತಾಗುತ್ತದೆ ಎಂದರು.


ದುಂಡಳ್ಳಿ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ಕಿರಣ್, ಸದಸ್ಯೆ ಎಸ್.ಪಿ.ಭಾಗ್ಯಾ, ತ್ಯಾಗರಾಜ ಕಾಲನಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಪುಟ್ಟಸ್ವಾಮಿ, ಸುಪ್ರಜ ಗುರುಕುಲ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಪ್ರಾಂಶುಪಾಲೆ ಡಿ.ಸುಜಲಾದೇವಿ, ಸೆಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯ ಶಿಕ್ಷಕಿ ಪೂರ್ಣಿಮಾ, ಪ್ರಮುಖರಾದ ಚಂದ್ರಶೇಖರ್, ಪುಟ್ಟರಾಜು, ಮಲ್ಲೇಶ್, ರಾಜಪ್ಪ, ಅಶ್ವಿನಿ, ಪೂರ್ಣಿಮಾ, ಶ್ರೀದೇವಿ, ಭಾರತಿ, ವೀಣಾ, ಜಯಮ್ಮ, ತಮ್ಮೇಗೌಡ ಇತರರು ಇದ್ದರು.

Share This Article

ಬೆಳಗ್ಗೆ ಹೊತ್ತು ವಾಲ್​ನಟ್ಸ್​​ ಸೇವನೆ ಎಷ್ಟು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ | Walnuts

ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ಇಂದು ಅನೇಕರು ಹೊಸ ಹೊಸ ರೀತಿಯ ಕಸರತ್ತನ್ನು ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಕೆಲವರು…

ಆಯುಷ್ಯ ಇರುವಾಗ ಸಾಯುವವರೆಗೆ ಬದುಕಲೇಬೇಕಲ್ಲ!

| ಡಾ.ಕೆ.ಪಿ. ಪುತ್ತೂರಾಯ ಇದು ಸಹಿಸಿಕೊಳ್ಳಲಾಗದ ವೃದ್ಯಾಪಕ್ಕೆ ಒಳಗಾಗಿ ಸಾಯಲಾಗದೆ ಸಾವಿನ ಕ್ಷಣವನ್ನೇ ಎದುರು ನೋಡುತ್ತಿರುವ…

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…