ಸಿನಿಮಾ

ಅರಕಲಗೂಡಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಅರಕಲಗೂಡು: ಪಟ್ಟಣದ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ರಕ್ತದಾನ ಮಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ ಪುಷ್ಪಲತಾ ಮಾತನಾಡಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುರಿಂದ ಸಂಘ-ಸಂಸ್ಥೆಗಳು ರಕ್ತದಾನ ಶಿಬಿರದಂತಹ ಕಾರ್ಯಕ್ರಮಗಳನ್ನು ಆಯೋಜಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ರಕ್ತದ ಕೊರತೆ ಎದುರಾಗಿದೆ ಎಂದರು.

ರೋಗಿಗಳಿಗೆ ರಕ್ತದ ಕೊರತೆಯಾಗಬಾರದೆಂಬ ಉದ್ದೇಶದಿಂದ ಇಲಾಖೆ ಸಿಬ್ಬಂದಿಯಿಂದ ರಕ್ತಸಂಗ್ರಹ ಮಾಡಲಾಗುತ್ತಿದೆ. ಇತರ ಇಲಾಖೆಗಳ ಸಿಬ್ಬಂದಿ ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

Latest Posts

ಲೈಫ್‌ಸ್ಟೈಲ್