26.8 C
Bangalore
Friday, December 13, 2019

ಅರಳಗೋಡಿನ ಸಮಸ್ಯೆಗೆ ಶೀಘ್ರ ಪರಿಹಾರ

Latest News

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಮಲ್ಲಾಪುರದಲ್ಲಿ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ: ಜಾತ್ರೆ ಕಣ್ತುಂಬಿಕೊಂಡ ಅಪಾರ ಭಕ್ತರು

ನೆಲಮಂಗಲ: ತಾಲೂಕಿನ ಮಲ್ಲಾಪುರದ ಪ್ರಸಿದ್ಧ ಶ್ರೀ ಬಯಲು ಉದ್ಭವ ವಿಘ್ನೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಹಾಗೂ ಕಡಲೆಕಾಯಿ ಪರಿಷೆ ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪರಿಷೆ...

ಹೆದ್ದಾರಿ 4ರ ಜಾಸ್ ಟೋಲ್ ಬಳಿ ಲಾರಿ-ಬಸ್ ಡಿಕ್ಕಿಯಾಗಿ 16 ಮಂದಿಗೆ ಗಾಯ

ನೆಲಮಂಗಲ: ತುಮಕೂರು-ಬೆಂಗಳೂರು ಮಾರ್ಗದ ರಾಷ್ಟ್ರೀಯ ಹೆದ್ದಾರಿ 4ರ ಜಾಸ್ ಟೋಲ್ ಬಳಿ ಗುರುವಾರ ರಾಜ್ಯ ಸಾರಿಗೆ ಬಸ್ ಮತ್ತು ಲಾರಿ ನಡುವೆ ಸಂಭವಿಸಿರುವ ಅಪಘಾತದಲ್ಲಿ ಚಾಲಕ...

ಸಾಗರ: ಅರಳಗೋಡಿನಲ್ಲಿ ಗ್ರಾಮವಾಸ್ತವ್ಯ ನಡೆಸಿದ ಸಂದರ್ಭದಲ್ಲಿ ಇಲ್ಲಿಯ ಜನ ಕೆಲ ಸಮಸ್ಯೆಗಳನ್ನು ಎದುರಿಗಿಟ್ಟಿದ್ದರು. ಅವುಗಳಲ್ಲಿ ಬಹುತೇಕ ಪರಿಹರಿಸುವ ಪ್ರಯತ್ನ ಮಾಡಿದ್ದೇವೆ. ಕೆಲವು ಕಾನೂನಾತ್ಮಕ ವಿಚಾರಗಳು ಇರುವುದರಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ಹೇಳಿದರು.

ಅರಳಗೋಡಿಗೆ ಸೋಮವಾರ ಭೇಟಿ ನೀಡಿದ್ದ ಅವರು ‘ವಿಜಯವಾಣಿ’ ಜತೆ ಮಾತನಾಡಿ, ಇಲ್ಲಿನ ಕೆಲ ಭಾಗಗಳಲ್ಲಿ ಸಂಪರ್ಕ ವ್ಯವಸ್ಥೆಯ ಸಮಸ್ಯೆ ಇದೆ ಎಂದು ಜನ ಮನವಿ ಸಲ್ಲಿಸಿದ್ದರು. ಅಲ್ಲದೆ ಶರಾವತಿ ಅಭಯಾರಣ್ಯ ಒಳಗೊಂಡಂತೆ ಇಲ್ಲಿಯ ವನವಾಸಿಗಳ ಭೂಮಿ ಸಮಸ್ಯೆ ಕುರಿತು ಹಲವರು ಮಾತುಕತೆ ನಡೆಸಿದ್ದರು. ಪ್ರತಿ 15 ದಿನಕ್ಕೊಮ್ಮೆ ಅರಣ್ಯಾಧಿಕಾರಿಗಳ ಜತೆ ಚರ್ಚೆ ನಡೆಸಿ ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಮಂಗನ ಕಾಯಿಲೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡುವ ವಿಚಾರದಲ್ಲಿ ಈಗಾಗಲೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಈ ಪ್ರದೇಶದ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚಿನ ಒತ್ತು ನೀಡಿದ್ದೇವೆ. ಮಂಗನ ಕಾಯಿಲೆ ಅರಳಗೋಡು ಸುತ್ತಮುತ್ತಲ ಪ್ರದೇಶದಲ್ಲಿ ಸಂಪೂರ್ಣ ಹತೋಟಿಯಲ್ಲಿದ್ದು ಬರುವ ವರ್ಷ ಏನೇನು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎನ್ನುವ ಬಗ್ಗೆ ಇಂದು ಚರ್ಚೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದರು.

ಇಲಿ ಜ್ವರ ಈ ಪ್ರದೇಶದಲ್ಲಿ ಹರಡಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದ್ದು ಆ ಬಗ್ಗೆಯೂ ಸಂಪೂರ್ಣ ವಿವರ ಪಡೆಯಲಾಗಿದೆ. ಯಾರೂ ಆತಂಕಪಡುವ ಪ್ರಶ್ನೆ ಇಲ್ಲ. ಏನೇ ಸಮಸ್ಯೆ ಇದ್ದರೂ ಗಮನಕ್ಕೆ ತನ್ನಿ. ಈಗಾಗಲೆ ತುರ್ತಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಚಕ್ರವರ್ತಿ ಮೋಹನ್ ಮಾತನಾಡಿ, ಜಿಲ್ಲೆಯಲ್ಲಿ ಕೆಎಫ್​ಡಿ ಸಂಪೂರ್ಣ ಹತೋಟಿಯಲ್ಲಿದೆ. ಆರೋಗ್ಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಕೂಲಂಕಷವಾಗಿ ಗಮನಿಸಿ ಕ್ರಮ ಕೈಗೊಳ್ಳಬೇಕಾಗುತ್ತದೆ. ಜನರಲ್ಲಿ ಜಾಗೃತಿ ಮೂಡಿಸುವುದು ಎಂದರೆ ಕೇವಲ ಕರಪತ್ರಗಳನ್ನು ನೀಡುವುದಲ್ಲ. ಅವರಿಗೆ ತಿಳಿವಳಿಕೆ ನೀಡುವ, ಧೈರ್ಯ ತುಂಬುವ ಕೆಲಸ ಮಾಡಬೇಕಾಗುತ್ತದೆ. ಆ ನಿಟ್ಟಿನಲ್ಲಿ ಕೆಲಸ ನಡೆದಿದೆ ಎಂದರು.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಚಕ್ರವರ್ತಿ ಮೋಹನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ, ಜಿಪಂ ಸಿಒ ಶಿವರಾಮೇಗೌಡ, ಉಪವಿಭಾಗಾಧಿಕಾರಿ ಎಚ್.ವಿ.ದರ್ಶನ್ ಮತ್ತಿತರ ಅಧಿಕಾರಿಗಳಿದ್ದರು.

30 ಜನರಲ್ಲಿ ಇಲಿಜ್ವರದ ಲಕ್ಷಣ: ಅರಳಗೋಡು ಸುತ್ತಮುತ್ತ ಇಲಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ. ಈ ಪ್ರದೇಶದಲ್ಲಿ ಸಮೀಕ್ಷೆ ನಡೆಸಿದಾಗ ಇಲಿ, ಹೆಗ್ಗಣ ಇವುಗಳ ಮಲಮೂತ್ರಗಳು ಗ್ರಾಮಾಂತರ ಪ್ರದೇಶಗಳಲ್ಲಿ ನೀರಿಗಾಗಿ ನಿರ್ವಿುಸಿಕೊಂಡಿರುವ ಸಣ್ಣ ಸಣ್ಣ ಕೊಳಗಳಲ್ಲಿ ಬೀಳುವುದರಿಂದ ಅವುಗಳ ನೀರು ಬಳಸುವಿಕೆಯಿಂದಲೂ ಜ್ವರ ಆರಂಭವಾಗುತ್ತದೆ. ಮೇ 8ರಿಂದ ಇಲ್ಲಿಯವರೆಗೆ 40 ಜನರ ಪರೀಕ್ಷೆ ನಡೆಸಿದಾಗ 30 ಜನರಿಗೆ ಇಲಿ ಜ್ವರದ ಲಕ್ಷಣಗಳು ಕಂಡುಬಂದಿದ್ದು ಈಗ ಶುಶ್ರೂಷೆಯಿಂದ ಸಂಪೂರ್ಣ ಹತೋಟಿಗೆ ಬಂದಿದೆ. ಈ ಜ್ವರ ತೀವ್ರ ಸ್ವರೂಪ ಪಡೆದರೆ ಕಿಡ್ನಿ ಮತ್ತು ಲಿವರ್​ಗೆ ತೊಂದರೆಯಾಗುತ್ತದೆ. ಜಾಂಡೀಸ್ ಬರುವ ಸಾಧ್ಯತೆಯೂ ಇದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಎಚ್ಚರಿಸಿದರು.

ಇಲಿ ಜ್ವರ ಶಂಕಿತರಿಗೆ ಟಾಕ್ಸಾಸೈಕ್ಲಿನ್ ಎನ್ನುವ ಮಾತ್ರೆ ನೀಡಲಾಗುತ್ತಿದ್ದು ಕುಡಿಯುವ ನೀರಿಗೆ ಹೆಲೋಜಿನ್ ಮಾತ್ರೆ ಹಾಕಿ ಬಳಸುವಂತೆ ತಿಳಿಸಲಾಗುತ್ತಿದೆ. 50 ಸಾವಿರ ಮಾತ್ರೆಗಳು ಸಂಗ್ರಹದಲ್ಲಿದ್ದು ಅರಳಗೋಡು ಮತ್ತು ಕಾರ್ಗಲ್ ಪ್ರಾಥಮಿಕ ಆರೋಗ್ಯ ಘಟಕದಲ್ಲಿ ಇಡಲಾಗಿದೆ. ಈ ಪ್ರದೇಶದಲ್ಲಿ ಡೆಂಘೆ, ಮಲೇರಿಯಾ, ಎಚ್1ಎನ್1, ಮಂಗನಕಾಯಿಲೆ, ಇಲಿಜ್ವರ ಮುಂತಾದವುಗಳ ಬಗ್ಗೆ ಮಾಸಾಚರಣೆಗೆ ವಿಶೇಷ ಒತ್ತು ನೀಡಲಾಗುವುದು. ಯಾವುದೆ ಜ್ವರ ಕಾಣಿಸಿಕೊಂಡರೂ ತಕ್ಷಣ ವೈದ್ಯರನ್ನು ಸಂರ್ಪಸಬೇಕು ಎಂದು ಹೇಳಿದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....