ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮ

blank

ಚಿಕ್ಕಮಗಳೂರು: ನಿವೇಶನ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗೆ ಸ್ಥಳ ಗುರುತಿಸಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಲು ಕ್ರಮವಹಿಸಲಾಗುತ್ತಿದೆ ಎಂದು ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ತಿಳಿಸಿದರು.

ನಗರದ ತಾಲೂಕು ಪಂಚಾಯತಿಯ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಸೋಮವಾರ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ನಿಯಂತ್ರಣ) ಕಾಯ್ದೆ ೧೯೮೯ ತಿದ್ದುಪಡಿ ನಿಯಮಗಳು ೨೦೧೩ರಂತೆ ನಿಯಮ ೧೭ (ಎ) ಚಿಕ್ಕಮಗಳೂರು ಕಂದಾಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಹೊಣೆ ಆಯಾ ಇಲಾಖೆಗಳ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕು. ಈ ಯೋಜನೆಗಳ ಕುರಿತ ಮಾಹಿತಿಯನ್ನು ಸಮುದಾಯದ ಜನರಿಗೆ ತಲುಪಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕು. ರುದ್ರಭೂಮಿಗೆ ಸಂಬAಧಿಸಿದAತೆ ಸ್ಥಳ ಗುರುತಿಸಿ ರುದ್ರಭೂಮಿಗೆ ಜಮೀನು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದರು.
ಚಿಕ್ಕಮಗಳೂರು ತಹಸೀಲ್ದಾರ್ ಸುಮಂತ್ ಸಭೆಗೆ ಮಾಹಿತಿ ನೀಡಿ, ಕುರುವಂಗಿ ಗ್ರಾಮದ ಸರ್ವೆ ನಂಬರ್ ೪೨/೦೧ ರಲ್ಲಿ ಸ್ಮಶಾನಕ್ಕೆ ಮೂರು ಎಕರೆ ಜಮೀನು ಮಂಜೂರಾಗಿದೆ. ಸ್ಥಳ ಪರಿಶೀಲಿಸಲಾಗಿ ಸದರಿ ಸ್ಥಳದಲ್ಲಿ ಯಾವುದೇ ಒತ್ತುವರಿಯಾಗಿರುವುದು ಕಂಡು ಬಂದಿಲ್ಲ. ೨೦೨೪-೨೫ನೇ ಸಾಲಿನಲ್ಲಿ ಚಿಕ್ಕಮಗಳೂರು ತಾಲೂಕು ವ್ಯಾಪ್ತಿಯಲ್ಲಿ ಶೇ. ೯೦ ರಷ್ಟು ಹಾನಿಯಾದ ಮನೆಗಳ ಸಂತ್ರಸ್ತರಿಗೆ ಎಸ್‌ಡಿಆರ್‌ಎಫ್ ಹಾಗೂ ಎನ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪರಿಹಾರ ಧನ ಪಾವತಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಸಾಗುವಳಿ ಚೀಟಿ ಇಲ್ಲದಿರುವ ಸಂತ್ರಸ್ತರಿಗೂ ಸಹ ಪರಿಹಾರ ಪಾವತಿಗಾಗಿ ಹಾಗೂ ಫಲಾನುಭವಿಗಳಿಗೆ ಹಕ್ಕು ಪತ್ರ ಹಾಗೂ ಸಾಗುವಳಿ ಚೀಟಿ ನೀಡುವ ಕುರಿತು ನಿಯಮಾನುಸಾರ ಕ್ರಮಕೈಗೊಳ್ಳುವುದಾಗಿ ಮಾಹಿತಿ ನೀಡಿದರು.
ಸಭೆಯಲ್ಲಿ ಕೊಪ್ಪ ತಾಲೂಕು ತಹಸೀಲ್ದಾರ್ ಲಿಖಿತ, ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣ ಅಧಿಕಾರಿ ವಿಜಯ್ ಕುಮಾರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೇವಣ್ಣ ಹಾಗೂ ಅನುಸೂಚಿತ ಜಾತಿ ಮತ್ತು ಅನುಸೂಚಿ ಬುಡಕಟ್ಟುಗಳ ದೌರ್ಜನ್ಯ ಸಮಿತಿಯ ಸದಸ್ಯರಾದ ಹುಣಸೆಮಕ್ಕಿ ಲಕ್ಷö್ಮಣ, ರಾಜಶಂಕರ್, ಕೆ.ಎಂ.ರಾಮಣ್ಣ ಮತ್ತಿತರರಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…