ಅವೈಜ್ಞಾನಿಕ ಕಾಯ್ದೆ ಹಿಂಪಡೆಯದಿದ್ದರೆ ಹೋರಾಟ

blank

ಚಿತ್ರದುರ್ಗ: ಕಲ್ಲು ಗಣಿಗಾರಿಕೆ ಸಂಬಂಧ ಅಳವಡಿಸಿರುವ ಅವೈಜ್ಞಾನಿಕ ಕಾಯ್ದೆ ಹಿಂಪಡೆಯದಿದ್ದರೆ, 2025ರ ಜನವರಿಯಲ್ಲಿ ಕ್ರಷರ್‌ಗಳನ್ನು ಸಂಪೂರ್ಣ ಬಂದ್ ಮಾಡಿ ರಾಜ್ಯಾದ್ಯಂತ ಹೋರಾಟಕ್ಕೆ ಇಳಿಯುವುದಾಗಿ ಜಿಲ್ಲಾ ಕ್ವಾರಿ ಮತ್ತು ಸ್ಟೋನ್ ಕ್ರಷರ್‌ಗಳ ಮಾಲೀಕರ ಸಂಘದ ಅಧ್ಯಕ್ಷ ಅಬ್ದುಲ್ ಮಜೀದ್ ಎಚ್ಚರಿಸಿದರು.

blank

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ನಾಲ್ಕೈದು ವರ್ಷಗಳಿಂದಲೂ ಬೇಡಿಕೆಗಳು ಈಡೇರಿಲ್ಲ. ಪ್ರಮುಖ ಸಮಸ್ಯೆ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ ಎಂದರು.

ಗುತ್ತಿಗೆದಾರರು ಮತ್ತು ಕ್ರಷರ್‌ಗಳಿಂದಲೂ ಎರಡು ಬಾರಿ ರಾಜಧನ ವಸೂಲಿ ಮಾಡುತ್ತಿದೆ. ಇದೆಲ್ಲ ಬೆಳವಣಿಗೆ ಗಮನಿಸಿದರೆ, ಸಣ್ಣ-ಪುಟ್ಟ ಕ್ರಷರ್‌ಗಳನ್ನು ಸಂಪೂರ್ಣ ಮುಚ್ಚಿಸಿ, ದೊಡ್ಡ ಕಾರ್ಪೊರೇಟ್ ಸಂಸ್ಥೆಗಳಿಗೆ ನೀಡುವ ಹುನ್ನಾರ ನಡೆಯುತ್ತಿದೆ ಎಂದು ದೂರಿದರು.

ಸರ್ಕಾರದ ನಿಯಮಗಳಿಂದ ನಮಗೆ ಹೊರೆಯಾಗಿದೆ. ಒಂದೇ ಹಂತದಲ್ಲಿ ಸರ್ಕಾರವೇ ಇಸಿ ವಿತರಿಸುವಂತ ಸರಳ ಕ್ರಮ ಜಾರಿಗೊಳಿಸಬೇಕು. ಪ್ರಮುಖ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ರಾಜ್ಯಾದ್ಯಂತ ಹೋರಾಟಕ್ಕೆ ಮುಂದಾಗಲಿದ್ದೇವೆ. ಒಂದು ಜಲ್ಲಿ ಕಲ್ಲು ಕೂಡ ಹೊರ ರಾಜ್ಯಗಳಿಂದ ಕರ್ನಾಟಕ ಪ್ರವೇಶಿಸಲು ಬಿಡುವುದಿಲ್ಲ ಎಂದು ಎಚ್ಚರಿಸಿದರು.

ಮುಖಂಡ ಜಿ.ಸಿ.ಸುರೇಶ್‌ಬಾಬು ಮಾತನಾಡಿ, ಐದು ಪಟ್ಟು ದಂಡ ವಿಧಿಸುತ್ತಿದ್ದು, ಇದರ ಬದಲು ಹೆಕ್ಟೇರ್‌ಗೆ 5 ಲಕ್ಷ ರೂ.ವರೆಗೂ ದಂಡ ನಿಗದಿಗೊಳಿಸಿ, ಪ್ರಕರಣ ಮುಕ್ತಾಯಗೊಳಿಸಬೇಕು. ಅವೈಜ್ಞಾನಿಕವಾಗಿ ವಿದ್ಯುತ್ ಬಿಲ್ ಪಡೆಯುವುದನ್ನು ಸ್ಥಗಿತಗೊಳಿಸಬೇಕು. ಸರಕು ಸರಬರಾಜು ಮಾಡುವ ಕಲ್ಲು ಕ್ರಷರ್ ಲಾರಿ, ಟ್ರಾೃಕ್ಟರ್‌ಗಳಿಗೆ ಅಳವಡಿಸಿರುವ ಜಿಪಿಎಸ್ ರದ್ದುಗೊಳಿಸಬೇಕು ಎಂದು ಮನವಿ ಮಾಡಿದರು.

ಸಂಘದ ಪದಾಧಿಕಾರಿಗಳಾದ ಜಿ.ಬಿ.ಶೇಖರ್, ವೀರಭದ್ರಣ್ಣ, ವೆಂಕಟೇಶ್, ಮಲ್ಲಿಕಾರ್ಜುನ್, ಅಭಿಷೇಕ್ ಇತರರಿದ್ದರು.

Share This Article

ಊಟದ ನಂತರ ಸಿಹಿ ತಿನ್ನುವುದು ಒಳ್ಳೆಯದೇ? ವೈದ್ಯರ ಸಲಹೆ..!  sweet

sweet:  ಸಿಹಿ ತಿಂಡಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ... ನಾಲಿಗೆ ಚಪ್ಪರಿಸಿ ಸಿಹಿ ತಿಂಡಿ…

astrology : ಈ ದಿನ ಉಗುರು, ಕೂದಲನ್ನು ಕತ್ತರಿಸಿದ್ರೆ ಕಾದಿದೆ ಸಂಕಷ್ಟ! ಈ ಕೆಲಸಕ್ಕೂ ಇದೆ ಒಳ್ಳೆಯ ದಿನ

astrology: ವಾರದ ಕೆಲವು ದಿನಗಳಲ್ಲಿ ಉಗುರುಗಳನ್ನು ಕತ್ತರಿಸುವುದು ಮತ್ತು ಕೂದಲನ್ನು ಕತ್ತರಿಸುವು ಒಳ್ಳೆಯದಲ್ಲ ಎಂದು ಹೇಳಲಾಗುತ್ತದೆ. …

27 ವರ್ಷದ ನಂತ್ರ ಪೂರ್ವ ಭಾದ್ರಪದ ನಕ್ಷತ್ರದಲ್ಲಿ ಶನಿ ಸಂಚಾರ: ಈ 3 ರಾಶಿಯವರಿಗೆ ಅದೃಷ್ಟವೋ ಅದೃಷ್ಟ | Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅನೇಕ ಗ್ರಹಗಳು ತಮ್ಮ ರಾಶಿಚಕ್ರ ಚಿಹ್ನೆಗಳನ್ನು ಆಗಾಗ…