ಅ.7ರಂದು ಜಿಲ್ಲಾ ಮಟ್ಟದ ಗಾಂಧಿ ಸ್ಮರಣೆ

blank

ಕಿಕ್ಕೇರಿ: ಗ್ರಾಮದಲ್ಲಿ ಅ.7ರಂದು ಜಿಲ್ಲಾ ಮಟ್ಟದ ಗಾಂಧಿ ಸ್ಮರಣೆ ಹಾಗೂ ದುಶ್ಚಟ ವಿರೋಧಿ ಜನಜಾಗೃತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ತಿಳಿಸಿದರು.

ಗ್ರಾಮದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕಿಕ್ಕೇರಿ, ಕೆ.ಆರ್.ಪೇಟೆ, ಚನ್ನರಾಯಪಟ್ಟಣ, ಶ್ರವಣಬೆಳಗೊಳ, ಹೊಳೆನರಸೀಪುರ ಕೇಂದ್ರಗಳು ಒಂದೆಡೆ ಸೇರಿ ಮಾಡುವ ಕಾರ್ಯಕ್ರಮ ಎಲ್ಲರಿಗೂ ತಲುಪಬೇಕಿದೆ. ಸಭಾ ಮಂಟಪ, ಊಟೋಪಚಾರ, ಗೌರವ ಸಮರ್ಪಣೆ ಎಲ್ಲವೂ ಶಿಸ್ತುಬದ್ಧವಾಗಿ ನಡೆಯಬೇಕಿದ್ದು , ದಾನಿಗಳ ಸಹಕಾರ ಅಗತ್ಯವಾಗಿದೆ ಎಂದರು.

ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಮಾಜಿ ಅಧ್ಯಕ್ಷ ಕೆ.ಆರ್. ನೀಲಕಂಠ, ತಾಲೂಕು ಯೋಜನಾಧಿಕಾರಿಗಳಾದ ವೀರೇಶಪ್ಪ, ಜಯರಾಂ, ಗ್ರಾಪಂ ಅಧ್ಯಕ್ಷ ಸುನೀತಾ ದಯಾನಂದ್, ಮುಖಂಡರಾದ ನಾರಾಯಣಸ್ವಾಮಿ, ರಾಜೇಗೌಡ, ಕೆ.ಎಸ್. ಪರಮೇಶ್ವರಯ್ಯ, ರಂಗೇಗೌಡ, ರಾಜೇಗೌಡ, ಕುಮಾರ್, ಮೇಲ್ವಿಚಾರಕಿ ರೇಣುಕಾ, ಕಾಂತಿಕಾಮಣಿ ಮತ್ತಿತರರಿದ್ದರು.

Share This Article

ಮಳೆಗಾಲದಲ್ಲಿ ಈ ಪದಾರ್ಥಗಳನ್ನು ನಿಮ್ಮ ಆಹಾರದಲ್ಲಿ ಬಳಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸಿಕೊಳ್ಳಿ! rainy season

rainy season: ಮಳೆಗಾಲದಲ್ಲಿ ಬ್ಯಾಕ್ಟೀರಿಯಾ, ವೈರಸ್‌ಗಳು ಅಥವಾ ಇತರ ಶಿಲೀಂಧ್ರ ಸೋಂಕುಗಳು ಸುಲಭವಾಗಿ ಹರಡುತ್ತವೆ. ಮಳೆಗಾಲದಲ್ಲಿ…

ಸಣ್ಣ ತೂಕ ಎತ್ತಿದರೂ ಸುಸ್ತಾಗುತ್ತಾ? ಹಾಗಾದರೆ ಈ ಆಹಾರಗಳಿಂದ ನರ ದೌರ್ಬಲ್ಯ ನಿವಾರಿಸಿ… Health Tips

Health Tips : ದೇಹವು ಸರಿಯಾದ ಪೋಷಕಾಂಶಗಳನ್ನು ಪಡೆಯದಿದ್ದರೆ, ಅನೇಕ ರೋಗಗಳಿಗೆ ತುತ್ತಾಗುತ್ತದೆ. ನಿಮ್ಮಲ್ಲಿರುವ ಕೆಟ್ಟ…