18.1 C
Bangalore
Saturday, December 7, 2019

ಆಡದೇ ಮಾಡುವವನು ರೂಢಿಯೊಳಗೆ ಉತ್ತಮನು

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಯೇಸುಕ್ರಿಸ್ತರ ಬೋಧನೆಗಳನ್ನು ಕೇಳುತ್ತಿದ್ದ ಶಿಷ್ಯರಾದಿಯಾಗಿ ಸಾಮಾನ್ಯ ಜನರಿಗೂ ಅವರ ಮಾರ್ವಿುಕವಾದ ಮಾತುಗಳು ಹಾಗೂ ದೂರದೃಷ್ಟಿಯ ಬೋಧನೆಗಳನ್ನು ಅರ್ಥಮಾಡಿಕೊಳ್ಳಲು ಅನೇಕ ವೇಳೆ ಕಷ್ಟವಾಗುತಿತ್ತು. ಅಂತಹ ಸಂದರ್ಭಗಳಲ್ಲಿ, ತಮ್ಮ ಮಾತು, ಉಪದೇಶ ಅಂತ್ಯಗೊಂಡ ನಂತರ ಅವರೇ ತಮ್ಮ ಮಾತುಗಳ ಒಳಾರ್ಥವನ್ನು ವಿವರಿಸಿ, ಜನರ ಸಂದೇಹಗಳನ್ನು ನಿವಾರಿಸುತ್ತಿದ್ದರು. ಅಂತಹ ಒಂದು ಸನ್ನಿವೇಶವನ್ನು ಯೇಸು ಈ ಕೆಳಕಂಡಂತೆ ಹೇಳಿದರು:

‘ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆ ತಂದೆ ಮೊದಲ ಮಗನ ಹತ್ತಿರ ಬಂದು, ‘ಮಗನೇ! ಈ ಹೊತ್ತು ನೀನು ನಮ್ಮ ದ್ರಾಕ್ಷಿ ತೋಟಕ್ಕೆ ಹೋಗಿ ಅಲ್ಲಿಯ ಕೆಲಸ ಪೂರೈಸಿಕೊಂಡು ಬಾ’ ಎಂದರು. ಆದರೆ, ಆ ಮಗ ಆರಂಭದಲ್ಲಿ, ‘ಇಲ್ಲ, ನಾನು ಹೋಗುವುದಿಲ್ಲ’ ಎಂದು ನಕಾರಾತ್ಮವಾಗಿ ಉತ್ತರಿಸಿದ. ಆದರೆ, ಸ್ವಲ್ಪ ಹೊತ್ತಿನ ನಂತರ ತನ್ನ ಮಾತುಗಳಿಗೆ ಪಶ್ಚಾತ್ತಾಪಪಟ್ಟು ತಾನಾಗಿಯೇ ತೋಟಕ್ಕೆ ಹೋಗಿ ತಂದೆ ಹೇಳಿದ ಕೆಲಸವನ್ನು ಪೂರ್ಣಗೊಳಿಸಿಕೊಡು ಬಂದ. ಆಗ ತಂದೆ, ತನ್ನ ಎರಡನೆಯ ಮಗನ ಹತ್ತಿರ ಹೋಗಿ, ಮೊದಲ ಮಗನಿಗೆ ಆದೇಶಿಸಿದಂತೆ ತೋಟಕ್ಕೆ ಹೋಗಲು ಹೇಳಿದ. ಆಗ ಆ ಕಿರಿಯ ಮಗ, ‘ಇಗೋ ಹೋಗುತ್ತೇನಪ್ಪ’ ಎಂದು ಹೇಳಿದನಾದರೂ, ತೋಟಕ್ಕೆ ಹೋಗಲೇ ಇಲ್ಲ.’

ಮೇಲಿನ ಕಥೆ ಹೇಳಿದ ಯೇಸು ಜನರನ್ನು ಉದ್ದೇಶಿಸಿ, ‘ಆ ಇಬ್ಬರು ಮಕ್ಕಳಲ್ಲಿ ತಂದೆಯ ಇಷ್ಟದಂತೆ ನಡೆದುಕೊಂಡವನು ಯಾರು?’ ಎಂದು ಪ್ರಶ್ನಿಸಿದರು. ಆಗ ಜನರೆಲ್ಲ ಸಹಜವಾಗಿಯೇ ‘ಮೊದಲನೆಯ ಮಗನೇ’ ಎಂದು ಉತ್ತರಿಸಿದರು. ಆಗ ಯೇಸುಸ್ವಾಮಿ ತಾವು ಹೇಳಿದ ಮೇಲಿನ ಸನ್ನಿವೇಶವನ್ನು ಈ ರೀತಿ ವ್ಯಾಖ್ಯಾನಿಸಿದರು:

‘ಸುಂಕದವರೂ, ವೇಶ್ಯೆಯರೂ ನಿಮಗಿಂತ ಮೊದಲೇ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಈ ಹಿಂದೆಯೇ ನನಗಿಂತ ಮೊದಲು, ಸ್ನಾನಿಕ ಯೊವಾನ್ನನು ನಿಮಗೆ ಧರ್ಮಮಾರ್ಗವನ್ನು ತೋರಿಸಲು ಬಂದನು. ಆದರೆ, ನೀವು ಆತನನ್ನು ನಂಬಲಿಲ್ಲ. ಆದರೆ, ಸುಂಕದವರು, ವೇಶ್ಯೆಯರು ಆತನ ಮಾತುಗಳನ್ನು ನಂಬಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಸ್ವರ್ಗವನ್ನು ಪ್ರವೇಶಿಸಿದರು. ಆದರೆ, ಇದನ್ನೆಲ್ಲ ಕಣ್ಣಾರೆ ಕಂಡ ಮೇಲೂ ನೀವು ಯಾರೂ ಪಶ್ಚಾತ್ತಾಪಪಡಲಿಲ್ಲ. ಸ್ನಾನಿಕ ಯೊವಾನ್ನನನ್ನು ನಂಬಲೂ ಇಲ್ಲ.’ ಎಂದು ತಮ್ಮ ವಿಷಾದವನ್ನು ವ್ಯಕ್ತಪಡಿಸಿದರು. ಯೇಸುವಿನ ಈ ವ್ಯಾಖ್ಯಾನ ಆಲಿಸಿದ ನಂತರ ಅನೇಕ ಜನರಿಗೆ ಜ್ಞಾನೋದಯವಾಯಿತು.

ನಾಳಿನ ಅಂತರಂಗದಲ್ಲಿ: ಶಿವಶರಣೆ ಡಾ. ನೀಲಮ್ಮತಾಯಿ ಅಸುಂಡಿ, ಅಧ್ಯಾತ್ಮ ವಿದ್ಯಾಶ್ರಮ, ಆದಿಶಕ್ತಿ ನಗರ, ಗದಗ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...