22.5 C
Bengaluru
Sunday, January 19, 2020

ಆತಂಕ ತಂದ ಅಪರಿಚಿತರ ರಾತ್ರಿ ಸಂಚಾರ 

Latest News

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿ ಯುವತಿ ಸಾವು: ಐವರ ರಕ್ಷಣೆ, ಓರ್ವಳ ಸ್ಥಿತಿ ಗಂಭೀರ

ಮಂಗಳೂರು: ದೋಣಿ ದುರಂತದಲ್ಲಿ ಓರ್ವ ಯುವತಿ ನೀರುಪಾಲಾಗಿರುವ ಘಟನೆ ಭಾನುವಾರ ಸಂಜೆ ಉಳ್ಳಾಲ ಬಳಿಯ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಐವರು ಯುವತಿಯರನ್ನು ರಕ್ಷಿಸಲಾಗಿದ್ದು,...

ಸಿದ್ದಾಪುರ: ತಾಲೂಕಿನ ಭಾನ್ಕುಳಿ ಶ್ರೀರಾಮದೇವಮಠ, ಗೋಸ್ವರ್ಗದ ಸಮೀಪ ರಾತ್ರಿ ವೇಳೆ ಅಪರಿಚಿತ ವ್ಯಕ್ತಿಗಳು ಸಂಚರಿಸುತ್ತಿದ್ದು ಆತಂಕ ಸೃಷ್ಟಿಸಿದೆ.

ಆ. 28ರಿಂದ ನಿತ್ಯ ತಡರಾತ್ರಿ ಒಂದು ಗಂಟೆ ನಂತರ ನಾಲ್ಕೈದು ಜನರು ಸಂಶಯಾಸ್ಪದ ರೀತಿಯಲ್ಲಿ ಮಠ ಹಾಗೂ ಗೋಸ್ವರ್ಗದ ಹತ್ತಿರ ಓಡಾಡುತ್ತಿದ್ದಾರೆ. ಮೂರು ದಿನದ ಹಿಂದೆ ಗೋಸ್ವರ್ಗದ ಕೆಲಸಗಾರರು, ಇಂಜಿನಿಯರ್ ಹಾಗೂ ಕಾರ್ಯಕರ್ತರು ಅವರನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಸೆ. 2ರಂದು ರಾತ್ರಿ ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿರುವಾಗ ಕಾರ್ಯಕರ್ತರು ಹಿಡಿಯಲು ಹೋದಾಗ ತಪ್ಪಿಸಿಕೊಂಡಿದ್ದಾರೆ ಎಂದು ಮಠದ ಮೂಲಗಳು ತಿಳಿಸಿವೆ.

ಮಠ ಹಾಗೂ ಗೋಸ್ವರ್ಗದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದ್ದು, ಅದಕ್ಕೆ ತಂದು ಹಾಕಿರುವ ಪರಿಕರಗಳನ್ನು ಒಯ್ಯುವ ಪ್ರಯತ್ನವೇ ಅಥವಾ ಬೇರೆ ಏನಾದರೂ ಹುನ್ನಾರ ಇಟ್ಟುಕೊಂಡು ಇಲ್ಲಿ ಓಡಾಡುತ್ತಿದ್ದಾರೆಯೇ ಎಂಬ ಸಂಶಯ ಮಠದ ಆಡಳಿತ ಮಂಡಳಿ ಹಾಗೂ ಭಕ್ತರಲ್ಲಿ ಮೂಡಿರುವುದರಿಂದ ಮಠದ ಹಾಗೂ ಗೋಸ್ವರ್ಗದ ಸುತ್ತ ಕಾರ್ಯಕರ್ತರು ಕಾಯುತ್ತಿದ್ದಾರೆ.

ಪೊಲೀಸರಿಗೆ ಮಾಹಿತಿ: ಈ ಕುರಿತು ಸಿದ್ದಾಪುರ ಪೊಲೀಸರಿಗೆ ಶನಿವಾರ ಮಾಹಿತಿ ನೀಡಲಾಗಿದ್ದು, ಅಂದು ರಾತ್ರಿಯೇ ಸಿಪಿಐ ಜಯಂತ ಎಂ. ಹಾಗೂ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.

ಭಾನ್ಕುಳಿ ಶ್ರೀರಾಮದೇವಮಠದ ಹಾಗೂ ಗೋಸ್ವರ್ಗದ ಸುತ್ತ ಸಂಶಯಾಸ್ಪದ ವ್ಯಕ್ತಿಗಳು ಓಡಾಡುತ್ತಿರುವುದರಿಂದ ಅವರನ್ನು ಹಿಡಿಯುವುದಕ್ಕಾಗಿ ಮಠದ ಶಿಷ್ಯರು ಹಾಗೂ ಕಾರ್ಯಕರ್ತರ ತಂಡ ರಚಿಸಿ ನಿತ್ಯ ರಾತ್ರಿ ಕಾವಲು ಕಾಯಲಾಗುತ್ತಿದೆ

| ಆರ್.ಎಸ್. ಹೆಗಡೆ ಹರಗಿ ಗೋಸ್ವರ್ಗ ಸಂಸ್ಥಾನದ ಅಧ್ಯಕ್ಷರು ಭಾನ್ಕುಳಿ ಮಠ

ಭಾನ್ಕುಳಿ ಮಠದಲ್ಲಿ ಅಪರಿಚಿತ ವ್ಯಕ್ತಿಗಳು ರಾತ್ರಿ ಸಮಯದಲ್ಲಿ ಓಡಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ಮಠದವರು ನೀಡಿದ್ದು, ಪ್ರಕರಣ ದಾಖಲಾಗಿಲ್ಲ. ಸ್ಥಳಕ್ಕೆ ತೆರಳಿ ಪರಿಶೀಲಿಸಲಾಗಿದೆ. ಮಠದವರು ಇಲಾಖೆಯ ಸಹಾಯ ಬಯಸಿದಲ್ಲಿ ತಕ್ಷಣ ಸ್ಪಂದಿಸುತ್ತೇವೆ.

| ಜಯಂತ ಎಂ. ಸಿಪಿಐ ಸಿದ್ದಾಪುರ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...