ಆತ್ಮವಿಶ್ವಾಸವಿದ್ದರೆ ಗುರಿ ತಲುಪಲು ಸಾಧ್ಯ

blank

ಶನಿವಾರಸಂತೆ; ಬರವಣಿಗೆ ಶೈಲಿಯಿಂದ ಎಲ್ಲರ ವ್ಯಕ್ತಿತ್ವವನ್ನು ಗುರುತಿಸಬಹುದು ಎಂದು ಆಲೂರು- ಸಿದ್ದಾಪುರ ಜಾನಕಿ ಕಾಳಪ್ಪ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಎಚ್.ಕೆ.ಶಿವಪ್ರಕಾಶ್ ಅಭಿಪ್ರಾಯಪಟ್ಟರು.

ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ವತಿಯಿಂದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ಶಿಬಿರದಲ್ಲಿ ಉಪನ್ಯಾಸ ನೀಡಿದರು.

ವ್ಯಕ್ತಿಯ ವ್ಯಕ್ತಿತ್ವ ವಿಕಸನಗೊಳ್ಳುವುದರಿಂದ ಆತ್ಮವಿಶ್ವಾಸ, ಛಲಗಾರಿಕೆ, ಗುರಿ ಸಾಧಿಸಬಹುದೆಂಬ ವಿಶ್ವಾಸ ಮೂಡಲಿದೆ. ಇದರಿಂದ ಸಮಾಜದಲ್ಲಿ ಅತ್ಯುತ್ತಮ ವ್ಯಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದರು.

ನಕಾರಾತ್ಮಕ ಗುಣಗಳಿಂದ ಆತ್ಮಬಲ ಕುಗ್ಗುತ್ತದೆ. ಇದರಿಂದ ಗುರಿ ತಲುಪಲು ಆಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಆತ್ಮವಿಶ್ವಾಸ, ಸಾಧಿಸುತ್ತೇನೆಂಬ ಛಲಗಾರಿಕೆಯನ್ನು ಅಳವಡಿಸಿಕೊಳ್ಳಬೇಕು ಎಂದರು.

ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ.ಯತೀಶ್ ಅಧ್ಯಕ್ಷತೆ ವಹಿಸಿದ್ದರು. ಬ್ಯಾಡಗೊಟ್ಟ ಗ್ರಾ.ಪಂ.ಸದಸ್ಯ ಬಿ.ಕೆ.ದಿನೇಶ್, ಪ್ರಮುಖರಾದ ಕೆ.ಆರ್.ಜಯಪ್ಪ, ಸಚಿನ್, ಕೆ.ಬಿ.ಮಂಜುನಾಥ್, ಕೆ.ವಿ.ಮಲ್ಲೇಶ್, ಕೆ.ಡಿ.ಪುಟ್ಟಸ್ವಾಮಿ, ಎನ್ನೆಸ್ಸೆಸ್ ಯೋಜನಾಧಿಕಾರಿ ಕೆ.ಎಚ್.ಯೋಗೇಂದ್ರ ಮುಂತಾದವರು ಹಾಜರಿದ್ದರು.

Share This Article

ಬೆಳಗ್ಗೆ ಹೊತ್ತು ವಾಲ್​ನಟ್ಸ್​​ ಸೇವನೆ ಎಷ್ಟು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ | Walnuts

ಬೆಂಗಳೂರು: ಉತ್ತಮ ಆರೋಗ್ಯಕ್ಕಾಗಿ ಇಂದು ಅನೇಕರು ಹೊಸ ಹೊಸ ರೀತಿಯ ಕಸರತ್ತನ್ನು ಮಾಡುವಲ್ಲಿ ಮುಂಚೂಣಿಯಲ್ಲಿದ್ದಾರೆ. ಕೆಲವರು…

ಆಯುಷ್ಯ ಇರುವಾಗ ಸಾಯುವವರೆಗೆ ಬದುಕಲೇಬೇಕಲ್ಲ!

| ಡಾ.ಕೆ.ಪಿ. ಪುತ್ತೂರಾಯ ಇದು ಸಹಿಸಿಕೊಳ್ಳಲಾಗದ ವೃದ್ಯಾಪಕ್ಕೆ ಒಳಗಾಗಿ ಸಾಯಲಾಗದೆ ಸಾವಿನ ಕ್ಷಣವನ್ನೇ ಎದುರು ನೋಡುತ್ತಿರುವ…

ಋತುಸ್ರಾವದ ಸಮಯದಲ್ಲಿ ಮೊಸರು ಸೇವಸಬಹುದೇ.. ಬೇಡವೇ; ಗೊಂದಲಕ್ಕೆ ಇಲ್ಲಿದೆ ಪರಿಹಾರ | Health Tips

ಮೊಸರು ಅಥವಾ ಉಪ್ಪಿನಕಾಯಿ ತಿನ್ನುವುದರಿಂದ ಋತುಸ್ರಾವದ ಸಮಯದಲ್ಲಿ ಸಮಸ್ಯೆಯಾಗುತ್ತದೆ ಎಂಬ ನಂಬಿಕೆಯಿದೆ. ಆದರೆ ಯಾವುದೇ ಆಹಾರವು…