ಆಧುನಿಕತೆ ಭರಾಟೆಯಲ್ಲಿ ಮರೆಯಾಗುತ್ತಿರುವ ಮಾನವೀಯ ಮೌಲ್ಯಗಳು

ಅರಸೀಕೆರೆ: ಆಧುನಿಕತೆಯ ಭರಾಟೆಯಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಆದಿಚುಂಚನಗಿರಿ ಶ್ರೀಮಠದ ಪೀಠಾಧ್ಯಕ್ಷ ಶ್ರೀನಿರ್ಮಲಾನಂದನಾಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಗಂಡಸಿ ಹೋಬಳಿ ಆದಿಹಳ್ಳಿ ಶ್ರೀಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಗ್ರಾಮದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ಜನಜಾಗೃತಿ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಮಾನವ ಜೀವನವೆಂಬುದು ಲೋಕದಲ್ಲಿ ಕೆಲ ಕಾಲ ನೀರಿನ ಮೇಲಿನ ಗುಳ್ಳೆಯಂತಿದ್ದು ನಂತರ ಮರೆಯಾಗಿ ಬಿಡುತ್ತದೆ. ನಮಗೆ ದೊರೆತಿರುವ ಅಲ್ಪ ಸಮಯದಲ್ಲಿ ದೇವರು, ಧರ್ಮ, ಧಾರ್ಮಿಕ ಆಚರಣೆಗಳಲ್ಲಿ ಶ್ರದ್ಧಾಭಕ್ತಿಯಿಂದ ತೊಡಗಿಸಿಕೊಳ್ಳಬೇಕು. ಆಧುನಿಕತೆಗೆ ಹೊಂದಿಕೊಳ್ಳುವುದು ತಪ್ಪಲ್ಲ ಆದರೆ ಅದರ ಹೆಸರಿನಲ್ಲಿ ಆಡಂಬರದ ಜೀವನಕ್ಕೆ ಮಾರು ಹೋಗುತ್ತಿರುವುದು ವಿನಾಶದ ಸಂಕೇತವಾಗಿದೆ ಎಂಬುದನ್ನು ಮರೆಯಬಾರದು. ಪಾಲಕರು, ಗುರು, ಹರಿಯರು ಮಕ್ಕಳಿಗೆ ಮನೆಯಿಂದಲೇ ಸಂಸ್ಕಾರ ಕೊಡುವ ಮೂಲಕ ಸತ್ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಪ್ರದರ್ಶಿಸಬೇಕು ಎಂದು ಶ್ರೀಗಳು ಕಿವಿಮಾತು ಹೇಳಿದರು.

ಗ್ರಾಮೀಣ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಬ್ಬ, ಉತ್ಸವ, ಜಾತ್ರೆಗಳನ್ನು ಪೂರ್ವಿಕರು ನಡೆಸಿಕೊಂಡು ಬಂದಿದ್ದಾರೆ. ಸುಖ,ದುಃಖಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳುವ ಸಂಗಮ ತಾಣವಾಗಿ ಜನರು ಭಕ್ತಿ ಭಾವದಿಂದ ಭಾಗಿಯಾಗುವುದನ್ನು ಇಂದಿಗೂ ಕಾಣಬಹುದಾಗಿದೆ. ಜಾತ್ರೆ ಜನರನ್ನು ಕಾಣುವ ಸಂಕೇತವಾಗಿದ್ದರೆ, ಯಾತ್ರೆ ಜೀವನ ಪಯಣದ ಅಂತ್ಯವನ್ನು ಸೂಚಿಸುತ್ತದೆ. ಇಂತಹ ಧಾರ್ಮಿಕ ಸಮಾರಂಭಗಳಲ್ಲಿ ಪಾಲ್ಗೊಂಡು ಕೆಟ್ಟ ವಿಚಾರಗಳನ್ನು ತ್ಯಜಿಸಿ, ಸನ್ಮಾರ್ಗದಲ್ಲಿ ನಡೆಯುತ್ತೇವೆ ಎನ್ನುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಹಾಸನ ಶಾಖಾಮಠದ ಶ್ರೀ ಶಂಭುನಾಥ ಸ್ವಾಮೀಜಿ ಮಾತನಾಡಿ, ಲಿಂಗೈಕ್ಯ ಡಾ.ಶ್ರೀಬಾಲಗಂಗಾಧರನಾಥ ಶ್ರೀಗಳ ಆಶಯದಂತೆ ನಾಡಿನ ಉದ್ದಗಲಕ್ಕೂ ಜನರ ಮನದ ಕತ್ತಲೆ ಕಳೆಯುವ ಕೆಲಸವನ್ನು ಶ್ರೀಮಠ ನಿರಂತರವಾಗಿ ಮಾಡಿಕೊಂಡು ಬರುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಬಣ್ಣಿಸಿದರು. ಶಾಸಕ ಕೆ.ಎಂ.ಶಿವಲಿಂಗೇಗೌಡ, ಕಸಾಪ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ, ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಆರ್.ಅನಂತಕುಮಾರ್,ಆದಿಹಳ್ಳಿ ಶಾಖಾಮಠದ ಶ್ರೀ ಶಿವಪುತ್ರನಾಥ ಸ್ವಾಮೀಜಿ ಸೇರಿ ಹಲವರು ವೇದಿಕೆಯಲ್ಲಿದ್ದರು. ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಲಿಂಗರಾಜ್, ದೈಹಿಕ ಶಿಕ್ಷಕ ನಾಗೇಶ್, ಉಪನ್ಯಾಸಕ ಷಣ್ಮುಖಾನಂದ ಸ್ವಾಮಿ ಇತರರಿದ್ದರು.

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…