16 C
Bangalore
Thursday, December 12, 2019

ಆಮೆಗತಿಯಲ್ಲಿ ಚತುಷ್ಪಥ ಕಾಮಗಾರಿ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಹೊನ್ನಾವರ: ತಾಲೂಕಿನಲ್ಲಿ ನಡೆಯತ್ತಿರುವ ಚತುಷ್ಪಥ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಕೆಲವೆಡೆ ಸಮರ್ಪಕ ಗಟಾರ ನಿರ್ವಿುಸದಿರುವುದು, ಹೆದ್ದಾರಿ ಪಕ್ಕದ ಗುಡ್ಡಕ್ಕೆ ತಡೆಗೋಡೆ ನಿರ್ವಿುಸದಿರುವುದು ಅವಾಂತರಗಳಿಗೆ ಆಹ್ವಾನ ನೀಡುವಂತಿದೆ.

ತಾಲೂಕಿನಲ್ಲಿ ಹಳದೀಪುರದಿಂದ ಹೊನ್ನಾವರ ಪಟ್ಟಣದ ಮೂಲಕ ಮಂಕಿ ಅನಂತವಾಡಿಯವರೆಗೆ ರಾಷ್ಟೀಯ ಹೆದ್ದಾರಿ ಹಾದು ಹೋಗುತ್ತದೆ. ಕಾಸರಕೋಡದಿಂದ ಅನಂತವಾಡಿವರೆಗೆ ಮುಕ್ಕಾಲು ಭಾಗ ಕಾಮಗಾರಿ ಪೂರ್ಣಗೊಂಡಿದೆ. ಹಳದೀಪುರದಿಂದ ಹೊನ್ನಾವರ ಪಟ್ಟಣದವರೆಗೆ ಕಾಮಗಾರಿ ಸಮರ್ಪಕವಾಗಿಲ್ಲ. ಸರಿಯಾಗಿ ಗಟಾರ ನಿರ್ವಿುಸಿಲ್ಲ. ಹೀಗಾಗಿ ಮನೆ, ಕೃಷಿ ಭೂಮಿಗೆ ಮಳೆ ನೀರು ನುಗ್ಗುವ ಆತಂಕದಲ್ಲಿ ಜನರಿದ್ದಾರೆ.

ರ್ಕಯಲ್ಲಿ ಹೆದ್ದಾರಿ ಸಮೀಪದ ಮನೆಯೊಂದರ ಅಂಗಳದಲ್ಲಿ ಸದಾ ನೀರು ನಿಂತಿರುತ್ತವೆ. ಈ ಭಾಗದಲ್ಲಿ ಕೃಷಿ ಭೂಮಿಯಲ್ಲಿ ನೀರು ನಿಂತು ಭತ್ತದ ಬೆಳೆಗೆ ಹಾನಿಯಾಗುತ್ತಿದೆ. ಹೆದ್ದಾರಿಯ ಇಕ್ಕೆಲಗಳಲ್ಲಿ ಸರಾಗವಾಗಿ ನೀರು ಹರಿದು ಹೋಗುವಂತೆ ಕಾಲುವೆಗಳನ್ನು ನಿರ್ವಿುಸಬೇಕಿದೆ.

ಗುಡ್ಡ ಕುಸಿತದ ಅಪಾಯ:
ಎಮ್ಮೆಪೈಲ್ ಸಮೀಪ ಗುಡ್ಡಕ್ಕೆ ರಂದ್ರ ಕೊರೆದು ಬೋಲ್ಟ್ ಕೂರಿಸಿ ಸಿಮೆಂಟ್ ಪ್ಲಾಸ್ಟರ್ ಮಾಡಲಾಗಿದೆ. ರಾಮತೀರ್ಥ ಕ್ರಾಸ್ ಸಮೀಪ ಹೆದ್ದಾರಿ ಪಕ್ಕದಲ್ಲೆ ಎತ್ತರದ ಸಡಿಲಮಣ್ಣಿನ ಗುಡ್ಡವಿದ್ದು, ಕುಸಿಯುವ ಸ್ಥಿತಿಯಲ್ಲಿದೆ. ಈ ಗುಡ್ಡದಲ್ಲಿರುವ ಬೃಹದಾಕಾರದ ಬಂಡೆಗಳು ಉರುಳಿ ಹೆದ್ದಾರಿ ಮೇಲೆ ಬಿದ್ದರೆ ವಾಹನದಲ್ಲಿ ಪ್ರಯಾಣಿಸುವವರಿಗೆ ಅಪಾಯವಿದೆ. ತಿರುವು ಪ್ರದೇಶದಲ್ಲಿ ಕಾಮಗಾರಿ ಕುರಿತು ಸೂಚನಾ ಫಲಕ ಅಳವಡಿಸಿಲ್ಲ. ಇದರಿಂದ ರಾತ್ರಿ ಸಮಯದಲ್ಲಿ ಚಾಲಕರಿಗೆ ಗೊಂದಲವುಂಟಾಗಿ ಅವಘಡಗಳು ಸಂಭವಿಸುತ್ತಿವೆ.

ವಿಳಂಬವಾಗುತ್ತಿರುವ ಕಾಮಗಾರಿ:
ಚತುಷ್ಪಥ ರಸ್ತೆ ನಿರ್ಮಣಕ್ಕೆ ಸಂಬಂಧಿಸಿ ಕೆಲವೆಡೆ ಖಾಸಗಿ ಭೂಮಿ ವಶಪಡಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಇನ್ನೂ ಹಲವರಿಗೆ ಪರಿಹಾರ ವಿತರಣೆಯಾಗದೆ ಕಾಮಗಾರಿಗೆ ತಡೆಯುಂಟಾಗಿದೆ. ಭೂಸ್ವಾಧೀನ ಕಚೇರಿಯಲ್ಲಿ ನಿವೃತ್ತ ಕಂದಾಯ ಅಧಿಕಾರಿಗಳು ಹೆಚ್ಚಾಗಿದ್ದು, ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ವಿಳಂಬವಾಗುತ್ತಿದೆ. ಸಂತ್ರಸ್ತರು ಹತ್ತಾರು ಬಾರಿ ಕಚೇರಿಗೆ ಅಲೆದರೂ ಪರಿಹಾರ ಸಿಕ್ಕಿಲ್ಲ. ಇದರಿಂದಾಗಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಪಟ್ಟಣದಿಂದ ರ್ಕಯ ವರೆಗೆ ಆಮೆಗತಿಯಲ್ಲಿ ಸಾಗುತ್ತಿದೆ. ಹೊನ್ನಾವರ ಪಟ್ಟಣದಲ್ಲಿ ಹಾದು ಹೋಗುವ ಚತುಷ್ಪಥದ ಸಂಚಾರ ಸುಗಮಗೊಳಿಸಲು ಬೆಂಗಳೂರು ಸರ್ಕಲ್​ನಲ್ಲಿ ಪ್ಲೈ ಓವರ್ ನಿರ್ವಿುಸುವ ಯೋಜನೆ ಇನ್ನೂ ರೂಪುಗೊಂಡಿಲ್ಲ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...