25 C
Bangalore
Thursday, November 14, 2019

ಆಯುಕ್ತ ಮೇಜರ್ ವಿರುದ್ಧ ಆಕ್ರೋಶ

Latest News

ಈ ಪುಟ್ಟ ಪಕ್ಷಿಗಳು ಜಗತ್ತಿನ ಅತಿ ಸಣ್ಣ ಹಮ್ಮಿಂಗ್​ ಬರ್ಡ್​ಗಳಾ? ಅಸಲಿ ವಿಷಯ ಬೇರೆನೇ ಇದೆ…ಅಷ್ಟಕ್ಕೂ ಇವು ಏನು ಗೊತ್ತಾ?

ನವದೆಹಲಿ: ಮಾನವನ ಉಗುರಿಗಿಂತಲೂ ಸಣ್ಣ ಗಾತ್ರದ ಎರಡು ಪಕ್ಷಿಗಳ ಫೋಟೋ ಇಂಟರ್​ನೆಟ್​ನಲ್ಲಿ ವೈರಲ್​ ಆಗುತ್ತಿದೆ. ವ್ಯಕ್ತಿಯೋರ್ವನ ಹೆಬ್ಬೆರಳಿನ ಉಗುರಿನ ಮೇಲೆ ಹಾಗೂ ತೋರುಬೆರಳಿನ ಮೇಲೆ ಈ...

ಉಪ ಚುನಾವಣೆಯ 10 ಕ್ಷೇತ್ರಗಳ ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ನಾಳೆ 4 ಕ್ಷೇತ್ರಗಳ ಅಭ್ಯರ್ಥಿ ಹೆಸರು ಬಹಿರಂಗ

ಬೆಂಗಳೂರು: ಶಾಸಕರ ಅನರ್ಹತೆಯಿಂದ ತೆರವಾಗಿರುವ 17 ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್​ 10 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಿದೆ. ಪಕ್ಷದ ಕಚೇರಿ...

ನ್ಯಾಯಾಲಯದ ತೀರ್ಪಿಗೂ ಬೆಲೆಕೊಡದ ಪತಿ; ಪತ್ನಿಯನ್ನ ಮನೆಗೆ ಸೇರಿಸಲು ನಕಾರ

ಮಂಡ್ಯ: ವಿಚ್ಛೇದನ ಪಡೆಯಲು ನ್ಯಾಯಾಲಯದ ಮೆಟ್ಟಿಲೇರಿದ್ದ ಪತಿಗೆ ನ್ಯಾಯಾಲಯ ಪತ್ನಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ತೀರ್ಪು ನೀಡಿ 10 ತಿಂಗಳು ಉರುಳಿದ್ದರೂ, ತನ್ನನ್ನು...

ವಿದ್ಯುಕ್ತವಾಗಿ ಬಿಜೆಪಿ ಸೇರಿದ 16 ಅನರ್ಹ ಶಾಸಕರು: ರೋಷನ್​ಬೇಗ್​ಗೆ ಇನ್ನೂ ಸಿಕ್ಕಿಲ್ಲ ಗ್ರೀನ್​ ಸಿಗ್ನಲ್​

ಬೆಂಗಳೂರು: ರಾಜ್ಯ ಬಿಜೆಪಿ ಕಚೇರಿಯಲ್ಲಿ 16 ಅನರ್ಹ ಶಾಸಕರು ಗುರುವಾರ ವಿದ್ಯುಕ್ತವಾಗಿ ಬಿಜೆಪಿ ಸೇರಿದರು. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ...

ಮಧುಮೇಹ ನಿರ್ವಹಣೆ ಸುಲಭ: ನಿಯಂತ್ರಣ ತಪ್ಪಿದರೆ ಹುಟ್ಟುವ ಮಗುವಿಗೂ ಮಾರಕ

ಗರ್ಭಧಾರಣೆ ಸಂದರ್ಭದಲ್ಲಿ ಕಾಣಿಸಿಕೊಳ್ಳುವ ಮಧುಮೇಹವನ್ನು ನಿಯಂತ್ರಿಸಿಕೊಳ್ಳದಿದ್ದರೆ ತಾಯಿಗೆ ಮಾತ್ರವಲ್ಲ, ಹುಟ್ಟುವ ಮಗುವಿಗೂ ಅಪಾಯವಾಗಲಿದೆ. ಸಹಜ ಹೆರಿಗೆ ಕಷ್ಟವಾಗಲಿದ್ದು,...

ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ಹಿರೇಮಠ ಅವರು ತಪ್ಪು ಮಾಡಿದ ಶಿಕ್ಷಕರ ಮೇಲೆ ಸೂಕ್ತ ಕ್ರಮ ಕೈಗೊಳ್ಳುತ್ತಿರುವುದು ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲೇ, ಮತ್ತೊಂದೆಡೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಸಭೆ ನಡೆಸುವ ಮೂಲಕ ಆಯುಕ್ತರ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.

ಇಲ್ಲಿಯ ಸರ್ಕಾರಿ ನೌಕರರ ಸಂಘದಲ್ಲಿ ಸೋಮವಾರ ಜರುಗಿದ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಳಗಾವಿ ವಿಭಾಗ ಮಟ್ಟದ ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಆಕ್ರೋಶ ವ್ಯಕ್ತವಾಯಿತು.

ಅಪರ ಆಯುಕ್ತರು ಹೊರಡಿಸುವ ಶಿಕ್ಷಕರ ಅಮಾನತು ಸೇರಿದಂತೆ ವಿವಿಧ ಪ್ರಮುಖ ವಿಷಯಗಳ ಆದೇಶಗಳು ಇಲಾಖೆ ಅಧಿಕಾರಿಗಳಿಗೆ, ಸಂಬಂಧಪಟ್ಟವರಿಗೆ ಮಾತ್ರ ತಲುಪಬೇಕು. ಆದರೆ, ಆದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅದೂ ಆಯುಕ್ತರ ಸಹಿ ಇಲ್ಲದ ಆದೇಶ ಪ್ರತಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಲು ಹೇಗೆ ಸಾಧ್ಯ? ಇಲಾಖೆ ಗೌಪ್ಯತೆ ಕಾಪಾಡುವಲ್ಲಿ ಆಯುಕ್ತರೇ ವಿಫಲರಾದರೆ? ಇಲಾಖೆಯಲ್ಲಿನ ಸಮಸ್ಯೆಗಳ ಬಗ್ಗೆ ಏನು ಕ್ರಮ ಕೈಗೊಂಡಿದ್ದಾರೆ? ಎಂಬ ಪ್ರಶ್ನೆಗಳು ಕೇಳಿಬಂದವು.

ಸಿದ್ದಲಿಂಗಯ್ಯ ಹಿರೇಮಠ ಅವರು ಶಿಕ್ಷಕರ ಮಾನ ಹರಾಜು ಹಾಕುವ ಕೆಲಸಕ್ಕೆ ಕೈ ಹಾಕಿದ್ದಾರೆ. ಸಮಸ್ಯೆ ಎದುರಾದ ಸಂದರ್ಭದಲ್ಲಿ ಶಿಕ್ಷಕರಿಗೆ ಸಲಹೆ ನೀಡುವ ಬದಲು ಈ ರೀತಿ ವರ್ತಿಸುವುದು ಸರಿಯಲ್ಲ. ಬೆಳಗಾವಿ ವಿಭಾಗದಲ್ಲಿ ಶಿಕ್ಷಕರಿಗೆ ಅಮಾನತು ಶಿಕ್ಷೆ ನೀಡುತ್ತಿದ್ದಾರೆ. ಸರ್ಕಾರಿ ಶಾಲೆಗಳ ಸ್ಥಿತಿ, ಶಿಕ್ಷಕರ ತೊಂದರೆಗಳನ್ನು ಅರಿಯದೇ ನೋವುಂಟು ಮಾಡುತ್ತಿದ್ದಾರೆ ಎಂದು ಸಹ ಶಿಕ್ಷಕರು ಆರೋಪಿಸಿದರು.

ಸದ್ಯದ ಪರಿಸ್ಥಿತಿಯಲ್ಲಿ ಮಕ್ಕಳ ದಾಖಲಾತಿ, ಹಾಜರಾತಿ, ಪಠ್ಯಪುಸ್ತಕ, ಬಟ್ಟೆ, ಸೈಕಲ್ ವಿತರಣೆ ಹೀಗೆ ಎಲ್ಲವನ್ನೂ ಆನ್​ಲೈನ್​ನಲ್ಲಿ ನಮೂದಿಸಬೇಕಿದೆ. ಆದರೆ, ತಂತ್ರಾಂಶದ ಸರ್ವರ್​ನಲ್ಲಿ ಯಾವಾಗಲೂ ಸಮಸ್ಯೆ ಎದುರಾಗುತ್ತಿದೆ. ಅದನ್ನು ಸರಿಪಡಿಸುವ ಕೆಲಸವಾಗಬೇಕಿದೆ. ಆದರೆ, ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಶಿಕ್ಷಕರಿಗೆ ತಿಳಿವಳಿಕೆ ನೋಟಿಸ್ ನೀಡದೆ ಒಮ್ಮೆಲೆ ಅಮಾನತು ಮಾಡುವ ಪದ್ಧತಿಯಿಂದ ಆಯುಕ್ತರು ದೂರ ಸರಿಯಬೇಕು. ಶಿಕ್ಷಕರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ಶಿಕ್ಷಕರು ಮಾನಸಿಕ ಹಿಂಸೆಗೆ ಒಳಗಾಗಿ ಶಿಕ್ಷಣದ ಗುಣಮಟ್ಟ ಕಡಿಮೆಯಾಗುವಂತಾಗಿದೆ. ಇದಕ್ಕೆ ಆಯುಕ್ತರೇ ನೇರ ಹೊಣೆ ಎಂದೂ ಆರೋಪಿಸಿದರು.

ಸಂಘದ ರಾಜ್ಯಾಧ್ಯಕ್ಷ ವಿ.ಎಂ. ನಾರಾಯಣಸ್ವಾಮಿ, ರಾಜ್ಯ ಪ್ರ. ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ, ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ ಉಪಾಧ್ಯಕ್ಷ ಬಸವರಾಜ ಗುರಿಕಾರ, ಸುರೇಶ ಶಡಶಾಳ, ಜುಬೇರ ಕೆರೂರ, ಹನಮಂತ ಕೊಣವಿ, ಬಿ.ಟಿ. ಗೌಡರ, ಬಸವರಾಜ ಬಾಗೇನವರ, ವಿಜಯಕುಮಾರ ಹೆಬ್ಬಳ್ಳಿ, ಜಗದೀಶ ಹಿರೇಮಠ, ಬೆಳಗಾವಿ ವಿಭಾಗದ ಎಲ್ಲ ಜಿಲ್ಲೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

- Advertisement -

Stay connected

278,453FansLike
561FollowersFollow
607,000SubscribersSubscribe

ವಿಡಿಯೋ ನ್ಯೂಸ್

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...

VIDEO: ರೋಹಿತ್​ ಶರ್ಮಾ...

ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಶಿಖರ್​ ಧವನ್​ ಅವರ ಕ್ಯೂಟ್​ ವಿಡಿಯೋವೊಂದನ್ನು ಶೇರ್ ಮಾಡಿದ್ದಾರೆ. ವಿಡಿಯೋವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಸಿಕ್ಕಾಪಟೆ, ಲೈಕ್ಸ್​, ಕಾಮೆಂಟ್ಸ್​ಗಳು ಬರುತ್ತಿವೆ. ರೋಹಿತ್​ ಶರ್ಮಾ ಹಾಗೂ...

VIDEO: ಹೊಸ ಟ್ರಾಫಿಕ್​...

ಸದ್ಯಕ್ಕಂತೂ ಹೊಸ ಮೋಟಾರು ವಾಹನ ಕಾಯ್ದೆಯಡಿ ಟ್ರಾಫಿಕ್​ ರೂಲ್ಸ್​ ಬ್ರೇಕ್​ ಮಾಡಿದವರಿಗೆ ವಿಧಿಸುತ್ತಿರುವ ದಂಡದ ಬಗ್ಗೆಯೇ ಚರ್ಚೆ. ಇದೇ ವಿಚಾರವಾಗಿ ಹಲವು ರೀತಿಯ ವಿಡಿಯೋಗಳು, ಮೆಸೇಜ್​ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಮೊದಲಿದ್ದ...

VIDEO| ಈ​ ವಿಡಿಯೋ...

ಬೀಜಿಂಗ್​: ಕಣ್ಣಿಗೆ ಕಾಣುವುದೆಲ್ಲಾ ಸತ್ಯವಲ್ಲ ಎಂಬುದಕ್ಕೆ ಈ ಘಟನೆ ಒಳ್ಳೆಯ ಉದಾಹರಣೆ. ಚೀನಾದ ಯಾಂಗ್ಜೆ ನದಿಯಲ್ಲಿ ನಿಗೂಢವಾಗಿ ಹಾಗೂ ವಿಚಿತ್ರವಾಗಿ ಗೋಚರವಾದ ಕಪ್ಪುಬಣ್ಣದ ಜೀವಿಯನ್ನು ಹೋಲುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲ...