ಯಾದಗಿರಿ: ಚುನಾವಣಾ ಕಾರ್ಯದ ಬಗ್ಗೆ ಆಯೋಗದಿಂದ ಕಾಲ ಕಾಲಕ್ಕೆ ನೀಡಲಾಗುವ ಮಾರ್ಗಸೂಚಿಗಳನ್ನು ಚಾಚು ತಪ್ಪದೆ ನಿರ್ವಹಿಸಬೇಕು ಎಂದು ಜಿಲ್ಲಾಕಾರಿ ಸ್ನೇಹಲ್ ಆರ್., ಸೂಚನೆ ನೀಡಿದರು.
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಗುರುವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ನಾಲ್ಕು ವಿಧಾನ ಸಭಾ ಕ್ಷೇತ್ರಗಳಿಗೆ ನೇಮಿಸಲಾದ ಸೆಕ್ಟರ್ ಹಾಗೂ ನೋಡಲ್ ಅಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿಗೆ ಕಾರ್ಯಾಗಾರ ಚಾಲನೆ ನೀಡಿ ಮಾತನಾಡಿ, ಸದೃಢ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಚುನಾವಣಾ ಆಯೋಗವು ಶ್ರಮಿಸುತ್ತಿದೆ. ಅಕಾರಿಗಳು ಕರ್ತವ್ಯದಲ್ಲಿ ಲೋಪವಾಗದಂತೆ ಕೆಲಸ ಮಾಡಬೇಕು. ನಿಯಮ ಉಲ್ಲಂಘನೆಯಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ನಿದರ್ೇಶನ ನೀಡಿದರು.
ರಾಷ್ಟ್ರ ಮಟ್ಟದ ಮಾಸ್ಟರ್ ಟ್ರೇನರ್ ಡಾ.ಶಶಿಶೇಖರೆಡ್ಡಿ ಮಾತನಾಡಿ, ಚುನಾವಣಾ ಕಾರ್ಯದ ವಿವಿಧ ಹಂತಗಳಲ್ಲಿ ಮಾದರಿ ನೀತಿ ಸಂಹಿತೆ ನಿಗಾವಹಿಸಲು ಸೆಕ್ಟರ್, ನೋಡಲ್ ಅಕಾರಿಗಳನ್ನು ನೇಮಿಸಲಾಗಿರುತ್ತದೆ. ಹೀಗಾಗಿ ನಿಮ್ಮ ಮೇಲೆ ಸಾಕಷ್ಟು ಜವಾಬ್ದಾರಿ ಇರುವುದರಿಂದ ಆಯಾ ವಿಧಾನಸಭಾ ಕ್ಷೇತ್ರಗಳ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಮತ್ತು ಪರಿಣಾಮಕಾರಿಯಾಗಿ ಜರುಗಿಸಬೇಕು ಎಂದರು.
ಜಿಪಂ ಸಿಇಒ ಅಮರೇಶ ನಾಯ್ಕ್, ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ.ಸಿಬಿ.ವೇದಮೂತರ್ಿ, ಅಪರ ಜಿಲ್ಲಾಕಾರಿ ಶರಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಶಾ ಆಲಂ ಹುಸೇನ್, ಸಂತೋಷರಾಣಿ ಇದ್ದರು.