ಆರೋಗ್ಯ, ಯೋಗಕ್ಷೇಮ ಉತ್ತೇಜಿಸುವುದು ರೆಡ್‌ಕ್ರಾಸ್

blank

ಚಿಕ್ಕಮಗಳೂರು: ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ ಗುರಿಯನ್ನು ಹೊಂದಿರುವ ರೆಡ್‌ಕ್ರಾಸ್, ಯುದ್ಧ ಮತ್ತು ಪ್ರವಾಹ ಇನ್ನಿತರ ಪ್ರಾಕೃತಿಕ ವಿಕೋಪಗಳಿಗೀಡಾದ ಜನಸಾಮಾನ್ಯರಿಗೆ ನೆರವು ನೀಡುತ್ತಿದೆ ಎಂದು ಭಾರತೀಯ ರೆಡ್‌ಕ್ರಾಸ್ ಜಿಲ್ಲಾಧ್ಯಕ್ಷ ಪ್ರದೀಪ್‌ಗೌಡ ತಿಳಿಸಿದರು.

blank

ನಗರದ ಜಿಲ್ಲಾ ರೆಡ್‌ಕ್ರಾಸ್ ಕಚೇರಿಯಲ್ಲಿ ಗುರುವಾರ ನಡೆದ ಅಂತರರಾಷ್ಟಿçÃಯ ರೆಡ್ ಕ್ರಾಸ್ ಸಂಸ್ಥೆಯ ಸಂಸ್ಥಾಪಕ ಜೀನ್ ಹೆನ್ರಿ ಡ್ಯುನಾಂಟ್ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈಗಾಗಲೇ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸಂಸ್ಥೆ ಮೂಲಭೂತ ಸೌಕರ್ಯ ವಂಚಿತ, ಅಶಕ್ತ, ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಶ್ರವಣ ದೋಷ ಹೊಂದಿರುವವರಿಗೆ ಶ್ರವಣ ಸಾಧನಗಳು, ಗಾಲಿಕುರ್ಚಿಗಳು ಮತ್ತು ಪ್ರಥಮ ಚಿಕಿತ್ಸಾ ಪೆಟ್ಟಿಗೆಗಳನ್ನು ವಿತರಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಹಿರಿಯರ ಸದಸ್ಯರ ಹಾಗೂ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. ಈ ಉಪಕ್ರಮವು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಘಟಕದ ಉದಾರ ಬೆಂಬಲವಾಗಿದೆ. ಅವರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತಿದ್ದು ಮಾನವೀಯತೆಡೆಗೆ ಒಟ್ಟಾಗಿ ಸಾಗುವುದರೊಂದಿಗೆ ಹೆಚ್ಚು ಅಗತ್ಯವಿರುವವರ ಜೀವನದಲ್ಲಿ ನಾವು ಬದಲಾವಣೆಯನ್ನು ತರಬಹುದಾಗಿದೆ ಎಂದÀರು.
ರೆಡ್ ಕ್ರಾಸ್ ಸಂಸ್ಥೆ ಮಾನವೀಯ ಉz್ದೆÃಶದಿಂದ ಸೇವೆ ಸಲ್ಲಿಸಲು ಮತ್ತು ಮೌಲ್ಯಗಳನ್ನು ಎತ್ತಿಹಿಡಿಯಲು ಬದ್ಧ ವಾಗಿದೆ. ಕೋವಿಡ್ ಹಾಗೂ ಅನೇಕ ಸಂಕಷ್ಟಗಳ ಸಮಯದಲ್ಲಿ ರೆಡ್‌ಕ್ರಾಸ್ ಧೈರ್ಯವಾಗಿ ಮುನ್ನುಗ್ಗಿ ಸಾರ್ವಜನಿಕರಿಗೆ ತೊಂದರೆಯಾಗದAತೆ ಮೂಲಸೌಕರ್ಯ ಒದಗಿಸಲು ನಿರಂತರವಾಗಿ ಕೆಲಸ ಮಾಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆ ಕಾರ್ಯಕಾರಿ ಸಮಿತಿ ಸದಸ್ಯ ಆರ್.ಶ್ರೀನಿವಾಸ, ಕಾರ್ಯದರ್ಶಿ ರಸೂಲ್ ಖಾನ್, ನಿರ್ದೇಶಕರಾದ ವಿಲಿಯಂ ಪೆರೇರಾ, ಚಂದನ್ ಕುಮಾರ್, ಡಾ. ಸುಂದರೇಗೌಡ, ಸದಸ್ಯರಾದ ಪ್ರಸನ್ನಗೌಡ, ಮಂಜುನಾಥ್ ಅರಸ್ ಮತ್ತು ಆರ್.ಶಿವಪ್ರಕಾಶ್‌ಗೌಡ ಉಪಸ್ಥಿತರಿದ್ದರು.

Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank