ಹುಬ್ಬಳ್ಳಿ: ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಲಾರಿ ಪಲ್ಟಿಯಾಗಿ ಗಾಯಗೊಂಡು ಇಲ್ಲಿಯ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ 10 ಜನರ ಆರೋಗ್ಯ ಸ್ಥಿತಿಯನ್ನು ಶಾಸಕ ಪ್ರಸಾದ ಅಬ್ಬಯ್ಯ ವಿಚಾರಿಸಿದರು.
ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದ ಅವರು, ವೈದ್ಯಾಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ಬೆಳಗಿನ ಜಾವ ತರಕಾರಿ ತುಂಬಿಕೊಅಡು ಕುಮಟಾ ನಗರಕ್ಕೆ ವ್ಯಾಪಾರ ಮಾಡಲು ತೆರಳುತ್ತಿದ್ದ ಲಾರಿ ಪಲ್ಟಿಯಾಗಿ ಹಾವೇರಿ ಜಿಲ್ಲೆಯ ಸವಣೂರು ಮತ್ತು ಹುಬ್ಬಳ್ಳಿ ನಗರದವರು ಸೇರಿ 10 ಜನ ಮೃತಪಟ್ಟು, ಹಲವರು ಗಾಯಗೊಂಡ ಈ ಘಟನೆ ಅತ್ಯಂತ ದುಃಖಕರ. ಬಾಳಿ ಬದುಕಬೇಕಿದ್ದ ಶ್ರಮಜೀವಗಳು ಇಹಲೋಕ ತ್ಯಜಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಮೃತರ ಕುಟುಂಬಕ್ಕೆ ಸರ್ಕಾರ ಘೊಷಣೆ ಮಾಡಿರುವ ಪರಿಹಾರ ಧನವನ್ನು ಶೀಘ್ರವೆ ಕೊಡಿಸುವ ಬಗ್ಗೆ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.
ಕೆಎಂಸಿಆರ್ಐ ನಿರ್ದೇಶಕ ಎಸ್.ಎಫ್. ಕಮ್ಮಾರ, ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ, ಇತರರು ಇದ್ದರು.