ಬೀರೂರು: ಹದಿಹರೆಯದ ಹೆಣ್ಣು ಮಕ್ಕಳು ದೈಹಿಕ ಆರೋಗ್ಯ ಹಾಗೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪೌಷ್ಟಿಕ ಆಹಾರ ಸೇವಿಸಬೇಕು ಎಂದು ಶಿವಮೊಗ್ಗದ ಸರ್ಜಿ ಆಸ್ಪತ್ರೆ ಪ್ರಸೂತಿ ತಜ್ಞೆ ಚಂದುಶ್ರೀ ತಿಳಿಸಿದರು.
ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಹದಿಹರೆಯದ ಹೆಣ್ಣು ಮಕ್ಕಳಿಗೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೆಣ್ಣು ಮಕ್ಕಳಲ್ಲಿ ಹಲವು ಆರೋಗ್ಯ ಸಮಸ್ಯೆಗಳಿರುತ್ತವೆ. ಮಾನಸಿಕ ಒತ್ತಡ ಎದುರಿಸುತ್ತಾರೆ. ಇಂಥ ಸಂದರ್ಭದಲ್ಲಿ ತಾಯಿಯ ಜತೆ ಸಮಸ್ಯೆಯನ್ನು ಹಂಚಿಕೊಳ್ಳಬೇಕು. ಹೆಣ್ಣು ಮಕ್ಕಳು ಮೊಬೈಲ್ ಹೆಚ್ಚು ಬಳಸಬಾರದು. ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದಿರಬೇಕು. ಹೀಗಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ಅರಿವು ಕಾರ್ಯಕ್ರಮ ಆಯೋಜಿಸಿದೆ ಎಂದರು.
ಎಸ್‌ಡಿಎಂಸಿ ಅಧ್ಯಕ್ಷ ಬಿ.ಎನ್.ಪ್ರಸನ್ನಕುಮಾರ್ ಮಾತನಾಡಿ, ಹೆಣ್ಣು ಮಕ್ಕಳ ಆರೋಗ್ಯ ಉತ್ತಮವಾಗಿರಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ಆರೋಗ್ಯಕ್ಕಾಗಿ ಸಾಕಷ್ಟು ಅನುದಾನ ನೀಡುತ್ತಿದ್ದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಮುಖ್ಯಶಿಕ್ಷಕ ಚಂದ್ರಶೇಖರ್, ಶಿಕ್ಷಕರಾದ ಸೌಭಾಗ್ಯಮ್ಮ, ವೀಣಾ, ಗಿರೀಶ್, ಉಮೇಶ್, ತಿಪ್ಪೇಶ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಿರೀಶ್, ಕಾರ್ಯದರ್ಶಿ ಗುರುಪ್ರಸಾದ್, ಎಸ್‌ಡಿಎಂಸಿ ಉಪಾಧ್ಯಕ್ಷೆ ಪೂರ್ಣಿಮಾ, ಸದಸ್ಯರು ಮತ್ತು ಸಿಬ್ಬಂದಿ ಇದ್ದರು.
ಆರೋಗ್ಯ ಸ್ವಚ್ಛತೆಗೆ ಆದ್ಯತೆ ನೀಡಿ

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?
Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…
ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels
Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…
ಪ್ಲಾಸ್ಟಿಕ್ ಬಾಕ್ಸ್ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes
hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…