ಚಿತ್ರದುರ್ಗ: ಉಸಿರಾಟದ ಸಮಸ್ಯೆ ಕಾರಣಕ್ಕೆ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಈಚೆಗೆ ದಾಖಲಾಗಿದ್ದ ಕಾದಂಬರಿಕಾರ ಡಾ.ಬಿ.ಎಲ್.ವೇಣು ಅವರು ವೈದ್ಯರ ಶಿಫಾರಸ್ಸಿನ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಚಿಕಿತ್ಸೆಗೆ ದುಬಾರಿ ವೆಚ್ಚ ಖರ್ಚಾಗಲಿದ್ದು, ಆರೋಗ್ಯದ ಕಡೆ ಹೆಚ್ಚು ಗಮನಹರಿಸಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.