ರಾಯಚೂರು: ಯುವ ಪೀಳಿಗೆ ಮೊಬೈಲ್ ಬಿಟ್ಟು ಸಾಂಸ್ಕೃತಿಕ ಚಟುವಟಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಡಾ.ನಾಗವೇಣಿ ಎಸ್.ಪಾಟೀಲ್ ಹೇಳಿದರು.
ನಗರದ ಕನ್ನಡ ಭವನದಲ್ಲಿ ಮೋನಿಕಾ ನೃತ್ಯ ಕಲಾ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು. ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗಿ ನಾವೆಲ್ಲ ಕನ್ನಡ ಮರೆಯುತ್ತಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.