ಚಿತ್ರದುರ್ಗ: ನಗರದ ಎಸ್‌ಜೆಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ‌್ಯಕ್ರಮಗಳ ಸಮಾರೋಪ ಸಮಾರಂಭ ಪಾಲಿಫೆಸ್ಟ್-2025 ಹಾಗೂ ಕಲರ್ಸ್ ಡೇ 27 ರಿಂದ ಎರಡು ದಿನಗಳ ಕಾಲ ನಡೆಯಲಿದೆ. ಎಸ್‌ಜೆಎಂ ವಿದ್ಯಾಪೀಠದ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಉದ್ಘಾಟಿಸುವರು. ಡಾ.ಶ್ರೀ ಬಸವಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ನಾನಾ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು. 27 ರಂದು ಬೆಳಗ್ಗೆ 9.30 ಕ್ಕೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು, ಸಿಬ್ಬಂದಿ ವಿವಿಧ ಬಗೆಯ ಉಡುಗೆ ತೊಟ್ಟು ನಡಿಗೆ ಪ್ರದರ್ಶನ, ಸಂಸ್ಕೃತಿ ಬೆಂಬಲಿಸುವ ಹಾಡು, ನೃತ್ಯ ನಡೆಸಿಕೊಡಲಿದ್ದಾರೆ ಎಂದು ಪ್ರಾಚಾರ‌್ಯ ಎಸ್.ವಿ.ರವಿಶಂಕರ್ ತಿಳಿಸಿದ್ದಾರೆ.
