blank

ಇಟಲ ದೇವಸ್ಥಾನ ಬ್ರಹ್ಮಕಲಶೋತ್ಸವ ಲೋಗೊ ಬಿಡುಗಡೆ

blank

ಮೂಡುಬಿದಿರೆ: ದರೆಗುಡ್ಡೆ ಇಟಲ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವದ ಲೋಗೊವನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ.ತಿಮ್ಮಯ್ಯ ಶೆಟ್ಟಿ ಮತ್ತು ಕಾರ್ಯಾಧ್ಯಕ್ಷ ಸಂತೋಷ್ ಕೆ.ಪೂಜಾರಿ ಬುಧವಾರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಿದರು.

blank

ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಕೇಶ್ ಶೆಟ್ಟಿ ಎದಮೇರು ಮಾತನಾಡಿ, ಇಟಲ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಪಣಪಿಲ ಅರಮನೆ ಪಟ್ಟದ ದೇವರಾಗಿದ್ದು 9 ಮಾಗಣೆಗಳ ಗ್ರಾಮವನ್ನು ಹೊಂದಿದೆ. ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ಊರವರ ಸಹಕಾರದೊಂದಿಗೆ ದೇವಸ್ಥಾನವನ್ನು ಶಿಲಾಮಯವಾಗಿ ಅಭಿವೃದ್ಧಿಪಡಿಸಲು ಜೀರ್ಣೋದ್ಧಾರ ಕೆಲಸಗಳು ನಡೆಯುತ್ತಿವೆ ಎಂದರು.

.23ರಿಂದ ಮೇ 2ರ ವರೆಗೆ ವರ್ಷಾವಧಿ ಜಾತ್ರೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮ ನಡೆಯಲಿವೆ. .27ರಂದು ಸಂಜೆ 4 ಗಂಟೆಗೆ ಅಳಿಯೂರಿನಿಂದ ದೇವಸ್ಥಾನದವರೆಗೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. .30ಕ್ಕೆ ದೇವರ ಪ್ರತಿಷ್ಠೆ, ಮೇ 2ಕ್ಕೆ ಬ್ರಹ್ಮಕಲಶೋತ್ಸವ ನಡೆಯಲಿದೆ ಎಂದರು.

ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ವಿಮಲ್ ಕುಮಾರ್ ಶೆಟ್ಟಿ, ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಮೋದ್ ಆರಿಗ ಮಜಲೋಡಿ, ಜತೆ ಕಾರ್ಯದರ್ಶಿ ಹನ್ನೇರು ವಿಶ್ವನಾಥ ಕೋಟ್ಯಾನ್ ಉಪಸ್ಥಿತರಿದ್ದರು.

ಪ್ರಾಮಾಣಿಕತೆ ಮೆರೆದ ಪತ್ರಿಕಾ ವಿತರಕ ರಮೇಶ್

ಬಜಕೂಡ್ಲು ಕ್ಲಬ್‌ಗೆ ಪದಾಧಿಕಾರಿಗಳ ಆಯ್ಕೆ

Share This Article

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…