More

    ಇಡೀ ರಾಜ್ಯವನ್ನೇ ಬರವೆಂದು ಘೋಷಿಸಿ

    ಚಿತ್ರದುರ್ಗ: ನಾಡಿನಲ್ಲಿ ಮಳೆಯಾಗದೆ ಕೃಷಿ, ತೋಟಗಾರಿಕೆ ಬೆಳೆಗಳು ನಾಶವಾಗಿದ್ದು, ಇಡೀ ರಾಜ್ಯವನ್ನೇ ಬರಗಾಲವೆಂದು ಘೋಷಿಸುವಂತೆ ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

    ಕೊಬ್ಬರಿ ಬೆಲೆ ಸ್ಥಿರತೆ ಕಾಪಾಡಬೇಕು. ರೈತರ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲೇ 7 ಗಂಟೆ ಸಮರ್ಪಕ ವಿದ್ಯುತ್ ಪೂರೈಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸವಂತೆ ಮುಖ್ಯಮಂತ್ರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಿದರು.

    ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ದವೀರಪ್ಪ ಮಾತನಾಡಿ, ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಎಕರೆಗೆ 25 ಸಾವಿರ ರೂ. ಪರಿಹಾರ ಘೋಷಿಸಿ, ಜನ-ಜಾನುವಾರುಗಳಿಗೆ ಅಗತ್ಯ ಸೌಲಭ್ಯ ಒದಗಿಸಬೇಕು. ಜಿಲ್ಲೆ ನಿರಂತರ ಬರಗಾಲಕ್ಕೆ ಒಳಗಾಗಿದ್ದು, ಭದ್ರಾ ಮೇಲ್ದಂಡೆ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ, ರೈತರ ಹೊಲಗಳಿಗೆ ನೀರು ಹರಿಸುವ ಕೆಲಸವಾಗಬೇಕು ಎಂದು ಆಗ್ರಹಿಸಿದರು.

    ಅಕ್ರಮ-ಸಕ್ರಮದಡಿ ಹಣ ಪಾವತಿಸಿರುವ ರೈತರ ಪಂಪ್‌ಸೆಟ್‌ಗಳಿಗೆ ಮೂಲಸೌಕರ್ಯ ಕಲ್ಪಿಸಬೇಕು. ಸಾಲ ವಸೂಲಾತಿ ಸ್ಥಗಿತಗೊಳಿಸಿ, ಸಂಪೂರ್ಣ ಮನ್ನಾ ಮಾಡಬೇಕು. ಕೆಇಆರ್‌ಸಿ ಪಂಪ್‌ಸೆಟ್‌ಗಳ ಆರ್‌ಆರ್ ನಂಬರ್‌ಗಳಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸಿರುವುದನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿದರು.

    ಅರಣ್ಯ ಇಲಾಖೆ ರೈತರನ್ನು ಒಕ್ಕಲೆಬ್ಬಿಸುತ್ತಿದ್ದು, ತಕ್ಷಣ ನಿಲ್ಲಿಸಬೇಕು. ಕಾಯ್ದೆ ತಿದ್ದುಪಡಿಗೊಳಿಸಿ ಸಾಗುವಳಿ ಪತ್ರ ನೀಡಬೇಕು. ಕೀಟಭಾದೆಗೆ ಒಳಗಾಗಿರುವ ತೆಂಗಿನ ತೋಟಗಳನ್ನು ರಕ್ಷಿಸಬೇಕು. ಈ ಎಲ್ಲಾ ಬೇಡಿಕೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ರೈತರ ನೆರವಿಗೆ ನಿಲ್ಲಬೇಕು ಎಂದು ಕೋರಿದರು.

    ಸಂಘದ ಜಿಲ್ಲಾ ಅಧ್ಯಕ್ಷ ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ, ಪ್ರಧಾನ ಕಾರ್ಯದರ್ಶಿ ರಾಮರೆಡ್ಡಿ, ಅಖಂಡ ಕರ್ನಾಟಕ ರೈತ ಸಂಘದ ಸಿದ್ದಪ್ಪ, ಮುಖಂಡರಾದ ಸಂಜೀವಪ್ಪ, ಆರ್.ಬಿ.ಲೋಕಣ್ಣ, ಎಸ್.ಮಹದೇವಪ್ಪ, ನಾಗಪ್ಪ, ಪಿ.ಆರ್.ಮಾರುತಿ, ಸಿ.ಆರ್.ಜಯಪ್ಪ, ದಿವ್ಯಜ್ಯೋತಿ, ಎಚ್.ಬಸವರಾಜಪ್ಪ, ಜಿ.ಕೆ.ನಾಗರಾಜ್, ಸದಾಶಿವಪ್ಪ ಇತರರಿದ್ದರು.

    ರಾಜ್ಯೋತ್ಸವ ರಸಪ್ರಶ್ನೆ - 23

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts