16 C
Bangalore
Saturday, December 7, 2019

ಇಲ್ಲದ ಯೋಜನೆಗೆ ನಿಲ್ಲದ ಅರ್ಜಿ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಕಾರವಾರ: ‘ಬೇಟಿ ಬಚಾವೋ ಬೇಟಿ ಪಢಾವೊ’ ಯೋಜನೆಯಡಿ ತಲಾ 2 ಲಕ್ಷ ರೂ. ಸಿಗುತ್ತದೆ ಎಂಬ ವದಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ನೂರಾರು ಯುವತಿಯರು ಬುಧವಾರ ಅರ್ಜಿ ಗುಜರಾಯಿಸಿದರು. ಈ ಸಂಬಂಧ ನಕಲಿ ಅರ್ಜಿ ನಮೂನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ‘ಬೇಟಿ ಬಚಾವೊ, ಬೇಟಿ ಪಢಾವೊ’ ಯೋಜನೆಯಡಿ 8ರಿಂದ 32 ವರ್ಷದ ಯುವತಿಯರಿಗೆ ಈ ಸೌಲಭ್ಯ ದೊರೆಯಲಿದೆ ಎಂದು ಅರ್ಜಿ ನಮೂನೆಯಲ್ಲೇ ಬರೆಯಲಾಗಿದೆ. ಅದನ್ನು ನಂಬಿ ಮರುಳಾದ ಯುವತಿಯರು ಬುಧವಾರ ನಮೂನೆಯ ಝುರಾಕ್ಸ್ ಪಡೆದು ಗ್ರಾಮೀಣ ಪ್ರದೇಶದವರು ಗ್ರಾಪಂ ಅಧ್ಯಕ್ಷರು, ನಗರಸಭೆ ಸದಸ್ಯರ ಮನೆಗೆ, ಇನ್ನು ಕೆಲವರು ಅಧಿಕಾರಿಗಳ ಬಳಿ ತೆರಳಿ ದೃಢೀಕರಣ ಮಾಡಿ ಸಹಿ ಹಾಕುವಂತೆ ವಿನಂತಿಸಿದರು. ನಂತರ ಅಂಚೆ ಕಚೇರಿಗೆ ತೆರಳಿ ನವದೆಹಲಿಗೆ ರವಾನಿಸಿದ್ದಾರೆ. ‘ಈ ಯೋಜನೆಯೇ ಇಲ್ಲ. ಏಕೆ ಅರ್ಜಿ ಹಾಕುತ್ತೀರಿ’ ಎಂದರೂ ಹೆಣ್ಣು ಮಕ್ಕಳು ಕೇಳಲು ಸಿದ್ಧರಿರಲಿಲ್ಲ. ಒತ್ತಾಯಕ್ಕೆ ಮಣಿದು ಹಲವು ಜನಪ್ರತಿನಿಧಿಗಳು ಸಹಿ ಹಾಕಿ ಕಳುಹಿಸಿದ್ದಾರೆ. ಈ ಸಂಬಂಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಲವು ಗ್ರಾಪಂ ಅಧ್ಯಕ್ಷರೂ ದೂರವಾಣಿ ಮೂಲಕ ದೂರಿದ್ದಾರೆ.

ಬೇಟಿ ಬಚಾವೋ ಬೇಟಿ ಪಢಾವೋ ಹೆಸರಿನಲ್ಲಿ ಹಣ ನೀಡುವ ಯಾವುದೇ ಯೋಜನೆ ಸರ್ಕಾರದಿಂದ ಇಲ್ಲ. ಜನರು ಯಾರೋ ಹೇಳಿದ ಮಾತಿಗೆ ಮರುಳಾಗಬಾರದು. ಈ ಕುರಿತು ಹರಿದಾಡುತ್ತಿರುವುದು ನಕಲಿ ಅರ್ಜಿ ನಮೂನೆಗಳಾಗಿದ್ದು, ಅಂಥ ಅರ್ಜಿ ನಮೂನೆ ತುಂಬುವಂತೆ ತಿಳಿಸಿದವರ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ.

| ಎಸ್.ಎಂ.ಹಂಜಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಭಾರಿ ಉಪನಿರ್ದೇಶಕ

ವೆಬ್​ಸೈಟ್​ಗಳಲ್ಲಿ ಅರ್ಜಿ ನಮೂನೆ​ಗಳು ಲಭ್ಯ…

ಗೂಗಲ್ ಸರ್ಚ್ ಇಂಜಿನ್ ಮೂಲಕ ಹುಡುಕಾಟ ನಡೆಸಿದರೆ ಈ ಯೋಜನೆ ಸಂಬಂಧ ನಕಲಿ ನಕಲಿ ಅರ್ಜಿ ನಮೂನೆ ಕೆಲ ವೆಬ್​ಸೈಟ್​ಗಳಲ್ಲೂ ಲಭ್ಯವಿದೆ. ಸಾಮಾಜಿಕ ಜಾಲತಾಣಗಳಲ್ಲೂ ಹರಿದಾಡುತ್ತಿದೆ. ಈ ನಕಲಿ ಅರ್ಜಿ ನಮೂನೆ ಇಟ್ಟುಕೊಂಡು ಉತ್ತರ ಪ್ರದೇಶ, ಬಿಹಾರ ಇತರ ರಾಜ್ಯಗಳಲ್ಲಿ ಲಕ್ಷಾಂತರ ರೂ. ವಂಚನೆ ಮಾಡಿದ ಬಗ್ಗೆ ವರದಿಗಳಿವೆ. ರಾಜ್ಯದ ಬೆಳಗಾವಿ ಜಿಲ್ಲೆಯಲ್ಲೂ ಸಾವಿರಾರು ರೂ. ವಂಚನೆ ಮಾಡಿದ ಬಗ್ಗೆ ವರದಿಯಾಗಿತ್ತು. ಈಗ ಕೆಲ ದಿನಗಳಿಂದ ಈ ನಕಲಿ ಫಾಮ್ರ್ ಹಾಗೂ ಮಾಹಿತಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...