ಮಧುಗಿರಿ: ಮಂಗಳವಾರ ಶಾಲೆ ಮುಗಿಸಿ ಈಜಾಡಲು ಹೋದ ಬಾಲಕ ಮುಳುಗಿ ಮೃತಪಟ್ಟಿದ್ದಾನೆ. ತಾಲೂಕಿನ ಕೊಡಿಗೇನಹಳ್ಳಿ ಸವೋರ್ದಯ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತಿದ್ದ ರಂಗನಹಳ್ಳಿಯ ಹರ್ಷವರ್ಧನ್ (14) ಡ್ರಾಯಿಂಗ್ ಕ್ಲಾಸ್ ಮುಗಿಸಿ ಹುಡುಗರ ಜತೆ ಕೊಡಿಗೇನಹಳ್ಳಿಯ ಜಯಮಂಗಲಿ ನದಿಯಲ್ಲಿ ಈಜಾಡಲು ಹೋಗಿದ್ದು, ಈಜು ಬಾರದೆ ಮೃತಪಟ್ಟಿದ್ದಾನೆ. ಮೃತನು ಕೊಡಿಗೇನಹಳ್ಳಿಯ ದೇವರಾಜು ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಮಧ್ಯಾಹ್ನ ಊಟ ಮಾಡಿ ಶಾಲೆಗೆ ತೆರಳಿದ್ದು, ಶಾಲೆಯಲ್ಲಿ 2 ಗಂಟೆಗೆ ಕ್ಲಾಸ್ ಮುಗಿಸಿ ಈಜಾಡಲು ತೆರಳಿ ಈಜು ಬಾರದೆ ನೀರಲ್ಲಿ ಮುಳುಗಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಕುರಿಗಾಹಿಗಳು ಬ್ಯಾಗಿನಲ್ಲಿದ್ದ ಆಧಾರ್ ಕಾರ್ಡ್ ಕಂಡು ಪಾಲಕರಿಗೆ ವಿಷಯ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಕೊಡಿಗೇನಹಳ್ಳಿ ಪೊಲೀಸರು ಭೇಟಿ ನೀಡಿ ಶವವನ್ನು ಮಧುಗಿರಿ ಶವಗಾರಕ್ಕೆ ರವಾನಿಸಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಜಾಡಲು ಹೋದ ಬಾಲಕ ಸಾವು
You Might Also Like
ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping
sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…
ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water
coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…
ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife
Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…